Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರಗ ಮಕ್ಕಳಿಗೆ ಕ್ರೀಡೆಯಲ್ಲಿ ವಿಶೇಷ...

ಕೊರಗ ಮಕ್ಕಳಿಗೆ ಕ್ರೀಡೆಯಲ್ಲಿ ವಿಶೇಷ ತರಬೇತಿಗೆ ಯೋಜನೆ: ಪ್ರಮೋದ್

ವಾರ್ತಾಭಾರತಿವಾರ್ತಾಭಾರತಿ26 May 2017 10:51 PM IST
share
ಕೊರಗ ಮಕ್ಕಳಿಗೆ ಕ್ರೀಡೆಯಲ್ಲಿ ವಿಶೇಷ ತರಬೇತಿಗೆ ಯೋಜನೆ: ಪ್ರಮೋದ್

ಉಡುಪಿ, ಮೇ 26: ಸಿದ್ಧಿ ಜನಾಂಗದ ಯುವಕ ಯುವತಿಯರಿಗೆ ಕ್ರೀಡೆ ಯಲ್ಲಿ ವಿಶೇಷ ತರಬೇತಿ ನೀಡುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಕ್ರೀಡಾ ಶಾಲೆಯನ್ನು ಮಂಜೂರು ಮಾಡಲಾಗಿದ್ದು, ಇದರ ಕೆಲಸ ಸದ್ಯದಲ್ಲೇ ಆರಂಭಿಸಲಾಗುವುದು. ಇದೇ ಮಾದರಿಯಲ್ಲಿ ಕೊರಗ ಸಮುದಾಯದ ಮಕ್ಕಳಿಗೆ ಕ್ರೀಡೆಯಲ್ಲಿ ವಿಶೇಷ ತರಬೇತಿ ನೀಡಲು ಯೋಜನೆ ರೂಪಿಸಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಯುವಜನಸೇವೆ ಹಾಗೂ ಕ್ರೀಡಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಕೊರಗ ಸಮುದಾಯದ ಯುವಕ ಯುವತಿಯರಿಗಾಗಿ ಆಯೋಜಿಸಲಾದ ಜಿಲ್ಲಾ ಮಟ್ಟದ ಕ್ರೀಡೋತ್ಸವವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಅಜ್ಜರಕಾಡಿನಲ್ಲಿರುವ ಈಜುಕೊಳಕ್ಕೆ ರೂಫಿಂಗ್ ನಿರ್ಮಿಸಲು ಒಂದು ಕೋಟಿ, ಹೆಣ್ಣು ಮಕ್ಕಳ ಕ್ರೀಡಾ ಹಾಸ್ಟೆಲ್ ಸ್ಥಾಪನೆಗೆ ಒಂದು ಕೋಟಿ, ಅಂತಾ ರಾಷ್ಟ್ರೀಯ ಮಟ್ಟದ ಜಿಮ್ ಕೇಂದ್ರ ನಿರ್ಮಿಸಲು ಎರಡು ಕೋಟಿ ಮಂಜೂರು ಮಾಡಲಾಗಿದೆ. ನೇಜಾರಿನಲ್ಲಿ ಅಂತಾರಾಷ್ಟ್ರೀಯ ಈಜು ಕೊಳ ನಿರ್ಮಿಸಲು ಎಂಟು ಕೋಟಿ ರೂ. ಅನುದಾನದ ಪ್ರಸ್ತಾಪನೆಯನ್ನು ಕೇಂದ್ರ ಸರಕಾರಕ್ಕೆ ಕಳುಹಿ ಸಲಾಗಿದೆ ಎಂದರು.

ಉಡುಪಿಯಲ್ಲಿ ಅಥ್ಲೆಟಿಕ್ ಅಕಾಡೆಮಿ ಸ್ಥಾಪಿಸಲು 1.5 ಕೋಟಿ ರೂ., ಶಟಲ್ ಒಳಾಂಗಣ ಕ್ರೀಡಾಂಗಣಕ್ಕೆ ಹವಾನಿಯಂತ್ರಣ ವ್ಯವಸ್ಥೆ ಕಲ್ಪಿಸಲು ಒಂದು ಕೋಟಿ ರೂ., ಲಾನ್ ಟೆನಿಸ್ ಕೋರ್ಟ್ ನಿರ್ಮಾಣಕ್ಕೆ 3.5ಕೋಟಿ ರೂ. ಮಂಜೂರು ಮಾಡಲಾಗಿದೆ. ಹೀಗೆ ಉಡುಪಿಯನ್ನು ಕ್ರೀಡಾ ರಾಜಧಾನಿ ಯನ್ನಾಗಿ ಮಾಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ದಿನೇಶ್ ಪುತ್ರನ್ ಉಪಸ್ಥಿತರಿದ್ದರು.

ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕೊರಗ ಮುಖಂಡ ಗಣೇಶ್ ಕುಂದಾಪುರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶೇಖರ್ ಮರವಂತೆ ವಂದಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.

ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆ
ಕ್ರೀಡೆಗೆ ವೈಜ್ಞಾನಿಕವಾಗಿ ಶಕ್ತಿ ನೀಡುವ ನಿಟ್ಟಿನಲ್ಲಿ ಬೆಂಗಳೂರು ಹಾಗೂ ಉಡುಪಿಗೆ ಕ್ರೀಡಾ ವಿಜ್ಞಾನ ಕೇಂದ್ರವನ್ನು ಮಂಜೂರು ಮಾಡಲಾಗಿದ್ದು, ಇದಕ್ಕೆ ಎರಡು ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X