ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಸ್ಥಳದಲ್ಲೇ ಮೃತ್ಯು
ಭಟ್ಕಳ, ಮೇ 26: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಟ್ರ್ಯಾಕ್ಟರ್ ಉರುಳಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಘಟನೆಯಲ್ಲಿ ಮೃತಪಟ್ಟವರನ್ನು ಮಹಾಂತಯ್ಯ ಹಿರೇಮಠ (26) ಹಾಗೂ ಸೋಮನಾಥ್ (29) ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ ವಿದ್ಯುತ್ ಕಂಬಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅಕಸ್ಮಿಕವಾಗಿ ಪಲ್ಟಿಯಾಗಿದ್ದು, ಈ ಸಂದರ್ಭ ಕಂಬಗಳು ಇಬ್ಬರ ಮೇಲೆ ಬಿದ್ದು ಈ ಸಾವು ಸಂಭವಿಸಿದೆ ಎಂದು ತಿಳಿದುಬಂದಿದೆ.
ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





