ಪಾರ್ವತಮ್ಮ ರಾಜಕುಮಾರ್ ಆರೋಗ್ಯದಲ್ಲಿ ಚೇತರಿಕೆ
ಬೆಂಗಳೂರು, ಮೇ 27: ಬಹು ಅಂಗಾಂಗ ವೈಫಲ್ಯ ಸಮಸ್ಯೆಗೆ ಆಸ್ಪತ್ರೆಯಲ್ಲಿ ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ಕುಮಾರ್ ಅವರ ಆರೋಗ್ಯ ಸ್ಥಿತಿ ಈ ಮೊದಲಿಗಿಂತ ಸುಧಾರಿಸಿದೆ ಎಂದು ಎಂಎಸ್ ರಾಮಯ್ಯ ಆಸ್ಪತ್ರೆಯ ವೈದ್ಯ ಡಾ.ಸಂಜಯ್ ಕುಲಕರ್ಣಿ ತಿಳಿಸಿದ್ದಾರೆ.
ಶನಿವಾರ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಸುದ್ದಿಗಾರರೆಂದಿಗೆ ಮಾತನಾಡಿದ ಅವರು, ನಿರ್ಮಾಪಕಿ ಪಾರ್ವತಮ್ಮ ರಾಜ್ಕುಮಾರ್ ಆರೋಗ್ಯದ ಕುರಿತು ಸಾಮಾಜಿಕ ತಾಣಗಳಲ್ಲಿ ಹರಡುತ್ತಿರುವ ಸುದ್ದಿ ಸುಳ್ಳಿನಿಂದ ಕೂಡಿದೆ. ಸದ್ಯ ಪಾರ್ವತಮ್ಮ ರಾಜ್ಕುಮಾರ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದರು.
ಪಾರ್ವತಮ್ಮ ರಾಜ್ಕುಮಾರ್ಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆಸಲಾಗಿದೆ. ರಕ್ತದೊತ್ತಡ ಮತ್ತು ಸಕ್ಕರೆ ಪ್ರಮಾಣ ನಿಯಮಿತವಾಗಿದೆ. ಪ್ರತಿ ದಿನ ಡಯಾಲಿಸಿಸ್ ಮಾಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿರುವುದರಿಂದ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದೆ. ಆದರೂ ನಿಯಂತ್ರಣಕ್ಕೆ ಬರುತ್ತಿದೆ ಎಂದು ಹೇಳಿದ್ದಾರೆ.