Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾನವ ಹಕ್ಕುಗಳ ರಕ್ಷಣೆಯ ಉದ್ದೇಶ...

ಮಾನವ ಹಕ್ಕುಗಳ ರಕ್ಷಣೆಯ ಉದ್ದೇಶ ಸಂಘ-ಸಂಸ್ಥೆಗಳದ್ದಾಗಿರಲಿ: ನಾಡೋಜ ನ್ಯಾ.ಮೂ. ಡಾ. ಎಸ್.ಆರ್. ನಾಯಕ್

ವಾರ್ತಾಭಾರತಿವಾರ್ತಾಭಾರತಿ28 May 2017 6:41 PM IST
share
ಮಾನವ ಹಕ್ಕುಗಳ ರಕ್ಷಣೆಯ ಉದ್ದೇಶ ಸಂಘ-ಸಂಸ್ಥೆಗಳದ್ದಾಗಿರಲಿ: ನಾಡೋಜ ನ್ಯಾ.ಮೂ. ಡಾ. ಎಸ್.ಆರ್. ನಾಯಕ್

ಮಂಗಳೂರು, ಮೇ 28: ಜಗತ್ತಿನ ಪ್ರತಿಯೊಬ್ಬ ಮಾನವನ ಹಕ್ಕುಗಳ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕಾಗಿದ್ದು, ಈ ಹಕ್ಕುಗಳ ರಕ್ಷಣೆಯ ನೈಜ ಉದ್ದೇಶ ಸಂಘ- ಸಂಸ್ಥೆಗಳದ್ದಾಗಿರಲಿ ಎಂದು ನಾಡೋಜ ನ್ಯಾ.ಮೂ. ಡಾ. ಎಸ್.ಆರ್. ನಾಯಕ್ ಅಭಿಪ್ರಾಯಪಟ್ಟರು.

ದ.ಕ. ಜಿಲ್ಲಾ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸಾಧನಾ ಪ್ರತಿಷ್ಠಾನ ಹಳೆಯಂಗಡಿ ಇದರ 2006 ಸಾಧನಾ ಪ್ರಶಸ್ತಿ ವೋಕಾರ್ಡ್ ಫೌಂಡೇಶನ್ ಸಂಸ್ಥೆಯ ಪ್ರತಿಷ್ಠಿತ ಪಾಪ್ಯುಲರ್ ಹ್ಯೂಮನ್ ರೈಟ್ಸ್ ಅವಾರ್ಡ್ 2017ರ ಪುರಸ್ಕೃತರಾದ ಕೊಲ್ಲಾಡಿ ಬಾಲಕೃಷ್ಣ ರೈ ಅವರಿಗೆ ನಗರದ ಡಾನ್‌ಬಾಸ್ಕೋ ಸಭಾಂಗಣದಲ್ಲಿ ರವಿವಾರ ಆಯೋಜಿಸಲಾದ ಸಾರ್ವಜನಿಕ ಅಭಿನಂದನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಹೋರಾಟದಲ್ಲಿ ಹಲವರು ಜೀವ ತೆತ್ತಿದ್ದು, ಇನ್ನು ಕೆಲವರು ಕಷ್ಟ ಕಾರ್ಪಣ್ಯಗಳನ್ನು ಎದುರಿಸಿದ್ದಾರೆ. ಸುಮಾರು 15-20ವರ್ಷಗಳ ಕಾಲ ಮಾನವ ಹಕ್ಕುಗಳಿಗಾಗಿ ಹೋರಾಡಿ ಅದನ್ನು ರಕ್ಷಣೆ ಮಾಡಿದ ಕೊಲ್ಲಾಡಿ ಬಾಲಕೃಷ್ಣ ರೈಯ ಸೇವೆ ಗುರುತಿಸಿ ಮುಂಬೈನ ವೋಕಾರ್ಡ್ ಫೌಂಡೇಶನ್ ಸಂಸ್ಥೆ ಪ್ರಶಸ್ತಿ ನೀಡಿರುವುದು ಶ್ಲಾಘನೀಯ ಎಂದರು.

ಮಾನವ ಹಕ್ಕುಗಳ ಹೋರಾಟಗಾರ ಸಂಸ್ಥೆಯ ಯಾವುದೇ ಪದಾಧಿಕಾರಿಗಳು ಜನಪ್ರತಿನಿಧಿಗಳಿಂದ ಸಹಾಯ ಪಡೆಯಬಹುದೇ ವಿನಹಃ ಅವರೊಂದಿಗೆ ಗುರುತಿಸಿಕೊಳ್ಳಬಾರದು. ಕೆಲವು ಮಾನವ ಹಕ್ಕು ಹೋರಾಟಗಾರರ ಕಳಪೆ, ದುಷ್ಟ ಮುಖವನ್ನು ಕೂಡಾ ನಾವು ನೋಡುವಂತಾಗಿದೆ. ಹಿಂದೆ ಸುಮಾರು 2,500 ಸಂಘ-ಸಂಸ್ಥೆಗಳು ಮಾನವ ಹಕ್ಕುಗಳ ರಕ್ಷಣೆಯ ನಿಟ್ಟಿನಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದವು. ತಾನು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷನಾಗಿದ್ದಾಗ ಒಂದಲ್ಲ ಒಂದು ಪ್ರಕರಣದಲ್ಲಿ ಮುಂದೆ ಬಂದು ತನ್ನನ್ನು ಸಂಪರ್ಕಿಸಬಹುದಿತ್ತು. ಆದರೆ 100ಕ್ಕಿಂತ ಹೆಚ್ಚು ಸಂಘಟನೆಗಳು ಸಕ್ರಿಯವಾಗಿಲ್ಲ. ರಕ್ಷಣೆ, ಶಿಕ್ಷಣ, ಸೂರು ಮುಂತಾದ ಸಮಸ್ಯೆಗಳು ಕರಾವಳಿ ವ್ಯಾಪ್ತಿಗಳಲ್ಲೂ ಕಾಣುತ್ತಿದ್ದು, ಇದನ್ನು ಸರಿಪಡಿಸಲು ಹೋರಾಡಬೇಕು ಎಂದು ಡಾ.ಎಸ್.ಆರ್.ನಾಯಕ್ ಕರೆ ನೀಡಿದರು.

ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್ ಡಿಸೋಜ, ಮೇಯರ್ ಕವಿತಾ ಸನಿಲ್ ಮಾತನಾಡಿದರು. ನಾಡೋಜ ಡಾ. ಜಿ. ಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಅಭಿನಂದನೆ ಸ್ವೀಕರಿಸಿದ ಬಳಿಕ ಕೊಲ್ಲಾಡಿ ಬಾಲಕೃಷ್ಣ ರೈ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುದ್ರಾಡಿ ನಾರಾಯಣ ರೈ ಹಾಗೂ ಶಾರದಾ ಎಸ್. ರೈ ಅವರನ್ನು ಸನ್ಮಾನಿಸಲಾಯಿತು.

 ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮುಂಬೈ, ನೆರೋಲ್‌ನ ಧರ್ಮಶಾಸ್ತಾ ಭಕ್ತವೃಂದ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಸಂಜೀವ ಶೆಟ್ಟಿ ಮುಂಬೈ, ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ನಿಕಟ ಪೂರ್ವ ಸದಸ್ಯ ಆದರ್ಶ ಜಿ.ಕೆ. ಬೆಂಗಳೂರು, ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೌಂಡರೇಶನ್‌ನ ಅಧ್ಯಕ್ಷ ಯಶಪಾಲ್ ಸುವರ್ಣ, ಶಿವರಾಜ್ ಅಯ್ಯರ್ ಮತ್ತಿತರರು ಉಪಸ್ಥಿತರಿದ್ದರು. ನವೀನ್ ಶೆಟ್ಟಿ ಹಾಗೂ ಸೌಜನ್ಯ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X