ಐಸಿಎಸ್‌ಇ: ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಶೇ.100 ಫಲಿತಾಂಶ
ಉಡುಪಿ, ಮೇ 29: ಉಡುಪಿಯ ವಿದ್ಯೋದಯ ಟ್ರಸ್ಟ್‌ನ ಅಂಗಸಂಸ್ಥೆ ಯಾದ ವಿದ್ಯೋದಯ ಪಬ್ಲಿಕ್ ಸ್ಕೂಲ್ ಐಸಿಎಸ್‌ಇ ಪಠ್ಯಕ್ರಮದ 2016-17ನೇ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ.
ಶಾಲೆಯು ಸತತ 11 ವರ್ಷಗಳಿಂದ ಶೇ.100 ಫಲಿತಾಂಶದ ಸಾಧನೆಯನ್ನು ಮಾಡುತ್ತಿದೆ. ಈ ಬಾರಿ 80 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಇವರಲ್ಲಿ 38 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಉಳಿದ 42 ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಸುಧಾ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟ್ರಸ್ಟ್‌ನ ಆಡಳಿತ ಮಂಡಳಿ ಮತ್ತು ಶಾಲಾ ಶಿಕ್ಷಕ ವೃಂದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
Next Story





