ಕಲಾತಂಡಗಳಿಗೆ ಆಹ್ವಾನ
ಉಡುಪಿ ಮೇ 29: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2017-18ನೇ ಸಾಲಿನ ಸರಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಬೀದಿ ನಾಟಕ ಮತ್ತಿತರ ಕಲಾ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲು ಬೀದಿನಾಟಕ ಕಲಾತಂಡಗಳ ಆಯ್ಕೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರತೀ ತಂಡದಲ್ಲಿ ಕನಿಷ್ಟ 6ರಿಂದ 8 ಮಂದಿ ಕಲಾವಿದರಿರಬೇಕು. ತಂಡದಲ್ಲಿ ಇಬ್ಬರು ಮಹಿಳಾ ಕಲಾವಿದರು ಹಾಗೂ ಇಬ್ಬರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಕಲಾವಿದರು ಇರುವುದು ಕಡ್ಡಾಯ. ಅರ್ಜಿ ಸಲ್ಲಿಸಲು ಜೂ.3 ಕೊನೆಯ ದಿನವಾಗಿದೆ. ಆಯ್ಕೆಯಾದ ಕಲಾವಿದರ ತಂಡಕ್ಕೆ ಮೈಸೂರಿನಲ್ಲಿ ನಡೆಯುವ ಕಾರ್ಯಾಗಾರದಲ್ಲಿ ತರಬೇತಿ ನೀಡಲಾಗುವುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ‘ವಾರ್ತಾಭವನ’ ಬ್ರಹ್ಮಗಿರಿ, ಉಡುಪಿ-576101 (ದೂರವಾಣಿ:0820-2524807) ಇವರನ್ನು ಸಂಪರ್ಕಿ ಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story