Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟರ ಭವನದಲ್ಲಿ ಪೂರ್ವಭಾವಿ ಸಮಾಲೋಚನಾ...

ಬಂಟರ ಭವನದಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆ

2019ರಲ್ಲಿ ಪುತ್ತೂರಿನಲ್ಲಿ ವಿಶ್ವ ತುಳು ಉಚ್ಚಯ

ವಾರ್ತಾಭಾರತಿವಾರ್ತಾಭಾರತಿ30 May 2017 8:57 PM IST
share
ಬಂಟರ ಭವನದಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆ

ಪುತ್ತೂರು, ಮೇ 30: ‘ನಮ್ಮ ತುಳುನಾಡ್ ಟ್ರಸ್ಟ್ ಕುಡ್ಲ’ ಎಂಬ ಸಂಸ್ಥೆಯು ಪುತ್ತೂರಿನಲ್ಲಿ ಮುಂಬರುವ 2019ರಲ್ಲಿ ‘ವಿಶ್ವ ತುಳು ಉಚ್ಚಯ’ ಎಂಬ ಹೆಸರಿನಲ್ಲಿ ತುಳು ಸಮ್ಮೇಳನ ನಡೆಸಲು ಇಚ್ಛಿಸಿದ್ದು, ಈ ವಿಶ್ವ ತುಳು ಸಮ್ಮೇಳನ ನಡೆಸುವ ಕುರಿತು ಮಂಗಳವಾರ ಪುತ್ತೂರಿನ ಬಂಟರ ಭವನದಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆಯು ಟ್ರಸ್ಟ್‌ನ ಗೌರವಾಧ್ಯಕ್ಷ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಜಿ.ವಿ.ಎಸ್. ಉಳ್ಳಾಲ್, ಸಂಚಾಲಕಿ ವಿದ್ಯಾಶ್ರೀ, ಅಧ್ಯಕ್ಷ ಕಡಬ ದಿನೇಶ್ ರೈ ಅವರು ಸಮ್ಮೇಳನದ ರೂಪುರೇಶೆಗಳ ಕುರಿತು ಮಾಹಿತಿ ನೀಡಿದರು.

ಮೂಲ್ಕಿ, ಉಜಿರೆ, ಒಡಿಯೂರು, ಅಡ್ಯಾರ್, ಬದಿಯಡ್ಕ ಮುಂತಾದ ಕಡೆ ತುಳು ಸಮ್ಮೇಳನಗಳು ಈಗಾಗಲೇ ನಡೆದಿರುವ ಕಾರಣ 2019ರಲ್ಲಿ ಪುತ್ತೂರಿನಲ್ಲಿ ಸಮ್ಮೇಳನ ನಡೆಸಲು ಯೋಚಿಸಲಾಗುತ್ತಿದೆ. ಪುತ್ತೂರಿನಲ್ಲಿ ಸಮಾವೇಶ ನಡೆಯುವ ಕಾರಣ ಪ್ರಾರಂಭಿಕ ಸಮಾಲೋಚನಾ ಸಭೆಯನ್ನು ಪುತ್ತೂರಿನಲ್ಲಿ ಆಯೋಜಿಸಲಾಗಿದೆ. ಇಲ್ಲಿ ಮೂಲ ರೂಪುರೇಶೆ ಸಿದ್ಧವಾದರೆ ನಂತರ ಇತರ ಕಡೆ ಸಭೆ ನಡೆಸಲು ಸುಲಭವಾಗುತ್ತದೆ ಎಂದು ಕಡಬ ದಿನೇಶ್ ರೈ ಅವರು ತಿಳಿಸಿದರು.  

ಒಂದು ದಿನ ಪೊಂಜೊವೆಲೆನ ಆಯನ, ಇನ್ನೊಂದು ದಿನ ಜೋಕುಲೆನ ಆಯನ, ಮತ್ತೊಂದು ದಿನ ಜನಪದ ಕ್ರೀಡಾ ಆಯನ, ಮತ್ತೊಂದು ದಿನ ಜನಪದ ಕಲಾ ಆಯನ ಹೀಗೆ ಒಟ್ಟು ಏಳು ದಿನಗಳ ಹಬ್ಬ ನಡೆಸುವುದು ನಮ್ಮ ಆಶಯವಾಗಿದೆ, ಸಮ್ಮೇಳನ ನಡೆಸುವ ನಿಟ್ಟಿನಲ್ಲಿ ಗ್ರಾಮ, ವಲಯ, ತಾಲ್ಲೂಕು, ಜಿಲ್ಲೆ ಮತ್ತು ಹೊರನಾಡು ಮಟ್ಟಗಳಲ್ಲಿ ನಾನಾ ಸಮಿತಿಗಳನ್ನು ರಚಿಸುವ ಉ್ದೇಶವಿದೆ ಎಂದು ಅವರು ತಿಳಿಸಿದರು.

 ಪುತ್ತೂರು ರಾಮಕೃಷ್ಣ ಪ್ರೌಢ ಶಾಲೆಯ ಆಡಳಿತ ಮಂಡಳಿಯ ಸಂಚಾಲಕ ಹೇಮನಾಥ ಶೆಟ್ಟಿ ಕಾವು ಅವರು ಮಾತನಾಡಿ, ಏಳು ದಿನಗಳ ಸಮ್ಮೇಳನದ ಆಶಯವೇನೋ ಉತ್ತಮ. ಆದರೆ ಈ ಸಭೆಯಲ್ಲಿ ಅದನ್ನು ನಿರ್ಣಯಿಸುವಂತಿಲ್ಲ. ಅಷ್ಟು ದೊಡ್ಡ ಮಟ್ಟದ ಸಮ್ಮೇಳನ ನಡೆಸಬೇಕಾದರೆ ಅದಕ್ಕೆ ಅಗಾಧವಾದ ಕೆಲಸಗಳು ನಡೆಯಬೇಕು. ಹೀಗಾಗಿ ಸಮಾವೇಶದ ಬಗ್ಗೆ ಯಾವುದೇ ನಿರ್ಣಯ ಇಂದು ಕೈಗೊಳ್ಳಲು ಸಾಧ್ಯವಿಲ್ಲ. ಅದಕ್ಕೆ ಮೊದಲು ಸಮಾಜದ ಎಲ್ಲ ಸ್ತರದ, ಎಲ್ಲ ಜಾತಿ, ಧರ್ಮಗಳ ತುಳುವರ ಪ್ರಾತಿನಿಧಿಕ ಸಂಸ್ಥೆಗಳನ್ನು ಒಟ್ಟು ಸೇರಿಸಿ ಅವರೆಲ್ಲರ ಅಭಿಪ್ರಾಯ, ಒಪ್ಪಿಗೆ ಪಡೆದು ಮುಂದುರಿಯಬೇಕೆಂದು ಸಲಹೆಯಿತ್ತರು.
 

ಏಳು ದಿನಗಳ ಸಮ್ಮೇಳನ ನಡೆಸಲು ಸಾಧ್ಯವೇ ಎಂಬ ಬಗ್ಗೆಯೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹರಿಕೃಷ್ಣ ಪುನರೂರು ಅವರು ಹೇಳಿದರು.
   

ಹಿರಿಯ ಯಕ್ಷಗಾನ ಕಲಾವಿದ ಕೆ.ಎಚ್. ದಾಸಪ್ಪ ರೈ, ವಿದ್ವಾನ್ ಕುದ್ಕಾಡಿ ವಿಶ್ವನಾಥ ರೈ, ಪುತ್ತೂರು ವರ್ತಕ ಸಂಘದ ಅಧ್ಯಕ್ಷರಾದ ಸಾಂಸ್ಕೃತಿಕ ಸಂಘಟಕ ಭಾಸ್ಕರ ಬಾರ್ಯ, ರಂಗಕರ್ಮಿ ಚಿದಾನಂದ ಕಾಮತ್ ಕಾಸರಗೋಡು, ಸಾಂಸ್ಕೃತಿಕ ಸಂಘಟಕ ನಿರಂಜನ ರೈ ಮಠಂತಬೆಟ್ಟು, ಕಲಾ ಸಂಘಟಕರಾದ ಎಪಿಎಂಸಿ ನೂತನ ನಿರ್ದೇಶಕ ಬೂಡಿಯಾರ್ ರಾಧಾಕೃಷ್ಣ ರೈ, ರವಿಪ್ರಸಾದ್ ಶೆಟ್ಟಿ, ಸಮಾಜ ಸೇವಾ ಕಾರ್ಯಕರ್ತೆ ಹರಿಣಾಕ್ಷಿ ಜೆ. ಶೆಟ್ಟಿ, ಮಹಾಬಲ ರೈ, ರಾಕೇಶ್ ರೈ ಕೆಡೆಂಜಿ, ಲೋಕೇಶ್ ಹೆಗ್ಡೆ ಮತ್ತಿತರರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ವಿಶ್ವಮಟ್ಟದ ತುಳು ಸಮ್ಮೇಳನ ನಡೆಸುವುದಿದ್ದರೆ ಅದು ಎಲ್ಲ ಜಾತಿ, ಸಮುದಾಯ, ಧರ್ಮಗಳ ಜನರನ್ನು ಸೇರಿಸಿಕೊಂಡು ಮಾಡುವಂತಿರಬೇಕು. ಆ ಮಟ್ಟದಲ್ಲಿ ಮಾಡುವುದಿದ್ದರೆ ಬೃಹತ್ ಮೊತ್ತದ ಹಣಕಾಸಿನ ವ್ಯವಸ್ಥೆಯೂ ಬೇಕು. ಕೇವಲ ಸಮಿತಿಯೊಂದನ್ನು ರಚಿಸಿ ಅದರ ಸದಸ್ಯರೆಲ್ಲರೂ ಒಂದಷ್ಟು ಹಣ ನೀಡಿ ಎಂದು ಹೇಳುವಂತಿರಬಾರದು. ಎಲ್ಲ ಜಾತಿಗಳ ಸಂಘಟನೆಗಳನ್ನು, ಎಲ್ಲ ಬಗೆಯ ಸಂಘ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅದಕ್ಕಾಗಿ ಸರ್ವರನ್ನೂ ಸೇರಿಸಿಕೊಂಡು ಒಂದು ಸಮಾಲೋಚನೆ ನಡೆಸಿ, ಅಲ್ಲಿ ಸಂಗ್ರಹವಾದ ಅಭಿಪ್ರಾಯಗಳನ್ನು ಪಡೆದುಕೊಂಡು ಮುಂದಡಿ ಇಡುವುದು ಉತ್ತಮ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X