Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಸೋದಿಯಾ ಸೂಚನೆಯಂತೆ ಆಪ್ ಶಾಸಕರಿಂದ...

ಸಿಸೋದಿಯಾ ಸೂಚನೆಯಂತೆ ಆಪ್ ಶಾಸಕರಿಂದ ತನಗೆ ಥಳಿತ:ಮಾಜಿ ಸಚಿವನ ಆರೋಪ

ದಿಲ್ಲಿ ವಿಧಾನಸಭೆಯಿಂದ ಹೊರದಬ್ಬಲ್ಪಟ್ಟ ಕಪಿಲ್ ಮಿಶ್ರಾ

ವಾರ್ತಾಭಾರತಿವಾರ್ತಾಭಾರತಿ31 May 2017 5:46 PM IST
share
ಸಿಸೋದಿಯಾ ಸೂಚನೆಯಂತೆ ಆಪ್ ಶಾಸಕರಿಂದ ತನಗೆ ಥಳಿತ:ಮಾಜಿ ಸಚಿವನ ಆರೋಪ

ಹೊಸದಿಲ್ಲಿ,ಮೇ 31: ದಿಲ್ಲಿ ವಿಧಾನಸಭೆಯು ಬುಧವಾರ ನಾಟಕೀಯ ಘಟನೆಗಳಿಗೆ ಸಾಕ್ಷಿಯಾಯಿತು. ಮಾಜಿ ಸಚಿವ ಹಾಗೂ ಬಂಡುಕೋರ ಆಪ್ ಶಾಸಕ ಕಪಿಲ್ ಮಿಶ್ರಾರನ್ನು ಸದನದಿಂದ ಹೊರಗೆ ಹಾಕುವಂತೆ ಸ್ಪೀಕರ್ ಆದೇಶಿದ ಬೆನ್ನಿಗೇ ಪಕ್ಷದ ಇತರ ಕೆಲವು ಶಾಸಕರು ಅವರ ಮೇಲೆ ಹಲ್ಲೆ ನಡೆಸಿದ್ದು, ಕೊನೆಗೂ ಮಾರ್ಷಲ್‌ಗಳು ಮಿಶ್ರಾರನ್ನು ಸದನದಿಂದ ಹೊರಹಾಕಿದರು.

ಪ್ರಾಥಮಿಕ ವರದಿಗಳು ತಿಳಿಸಿರುವಂತೆ ಉಪಮುಖ್ಯಮಂತ್ರಿ ಮನೀಷ್ ಸಿಸೋದಿಯಾ ಅವರು ದಿಲ್ಲಿಯ ಸರಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ತಲೆದೋರಿದೆ ಎಂಬ ಪ್ರತಿಪಕ್ಷ ನಾಯಕ ವಿಜೇಂದರ್ ಗುಪ್ತಾ ಅವರ ಆರೋಪಕ್ಕೆ ಉತ್ತರಿಸುತ್ತಿದ್ದಾಗ ಮಧ್ಯಪ್ರವೇಶಿಸಿದ ಮಿಶ್ರಾ ಆಪ್ ಮತ್ತು ದಿಲ್ಲಿ ಸರಕಾರದ ಭ್ರಷ್ಟಾಚಾರ ಆರೋಪಗಳ ಕುರಿತು ಚರ್ಚಿಸಲು ರಾಮಲೀಲಾ ಮೈದಾನದಲ್ಲಿ ವಿಶೇಷ ಅಧಿವೇಶನವನ್ನು ಕರೆಯುವ ಬಗ್ಗೆ ಸ್ಪೀಕರ್‌ರಿಂದ ಉತ್ತರವನ್ನು ಕೋರಿದ್ದರು.

ಸರದಿ ತಪ್ಪಿಸಿ ಮಾತನಾಡದಂತೆ ಸ್ಪೀಕರ್ ಎಚ್ಚರಿಕೆ ನೀಡಿದಾಗ ವಿಶೇಷ ಅಧಿವೇಶನ ವನ್ನು ಕೋರುವ ಬ್ಯಾನರೊಂದನ್ನು ಮಿಶ್ರಾ ಪ್ರದರ್ಶಿಸಿದ್ದರು. ಇದು ಸದನದ ಘನತೆಗೆ ಅನುಗುಣವಾಗಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಸ್ಪೀಕರ್, ಮಿಶ್ರಾರನ್ನು ಸದನದಿಂದ ಹೊರಗೆ ಹಾಕುವಂತೆ ಮಾರ್ಷಲ್‌ಗಳಿಗೆ ಆದೇಶಿಸಿದ್ದರು. ಆದರೆ ಮಾರ್ಷಲ್‌ಗಳು ಬರುವ ಮುನ್ನವೇ ಆಪ್ ಶಾಸಕರು ಮತ್ತು ಮಿಶ್ರಾ ನಡುವೆ ಹೊಯ್‌ಕೈ ಆರಂಭ ಗೊಂಡಿತ್ತು. ಮಿಶ್ರಾರನ್ನು ಮಾರ್ಷಲ್‌ಗಳು ಹೊರಗೆ ಕರೆದೊಯ್ಯುವ ಮುನ್ನ ಆಪ್ ಶಾಸಕರು ಅವರನ್ನು ತಳ್ಳುತ್ತಿರುವ ಮತ್ತು ಹಲ್ಲೆ ನಡೆಸುತ್ತಿರುವ ದೃಶ್ಯಗಳಿಗೆ ಸದನವು ಸಾಕ್ಷಿಯಾಗಿತ್ತು.

ಘಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಿಶ್ರಾ, ತನಗೆ ಥಳಿಸುವಂತೆ ಸಿಸೋದಿಯಾ ನಾಲ್ಕೈದು ಶಾಸಕರಿಗೆ ನಿರ್ದೇಶ ನೀಡಿದ್ದರು ಎಂದು ಆರೋಪಿಸಿದರು.

 ಸದಸ್ಯನೋರ್ವನನ್ನು ಸದನದಿಂದ ಹೊರಗೆ ಹಾಕಲು ಸಾಮಾನ್ಯವಾಗಿ ಮಾರ್ಷಲ್ ಗಳನ್ನು ಕರೆಸಲಾಗುತ್ತದೆ. ಶಾಸಕರನ್ನು ಕರೆಸಿದ್ದು ಇದೇ ಮೊದಲ ಬಾರಿಯಾಗಿರಬೇಕು ಎಂದ ಮಿಶ್ರಾ, ಉಪ ರಾಜ್ಯಪಾಲ ಅನಿಲ್ ಬೈಜಾಲ್ ಅವರ ಭೇಟಿಯಾಗಿ ಈ ಘಟನೆಯ ಬಗ್ಗೆ ವಿವರಿಸಲಿದ್ದೇನೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X