Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಿಳೆಯ ಹತ್ಯೆ : ಅಪರಾಧಿಗಳಿಗೆ ಜೀವಾವಧಿ...

ಮಹಿಳೆಯ ಹತ್ಯೆ : ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ31 May 2017 7:20 PM IST
share

ಮಡಿಕೇರಿ ಮೇ 31 ಮಹಿಳೆಯೊಬ್ಬರನ್ನು ಹತ್ಯೆ ಮಾಡಿದ ಆರೋಪ ಸಾಕ್ಷ್ಯಾಧಾರಗಳಿಂದ ದೃಢಪಟ್ಟ ಹಿನ್ನೆಲೆಯಲ್ಲಿ ಇಲ್ಲಿನ ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು  ಅಪರಾಧಿಗಳಿಗೆ ಕಠಿಣ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

ಕುಶಾಲನಗರ ಸಮೀಪದ ಗೊಂದಿಬಸವನ ಹಳ್ಳಿ ನಿವಾಸಿ ಜಿ.ಟಿ.ಜಾನ್ಸನ್ ಅಲಿಯಾಸ್ ಜಾನಿ ಹಾಗೂ ಆತನ ಸಹೋದರ ಜಿ.ಟಿ. ಜಗ ಎಂಬವರೇ ಶಿಕ್ಷೆಗೆ ಗುರಿಯಾದ ಅಪರಾಧಿಗಳಾಗಿದ್ದಾರೆ.

ಕುಶಾಲನಗರದ ಗುಮ್ಮನ ಕೊಲ್ಲಿ ನಿವಾಸಿ ರಾಜೀವ ಎಂಬವರ ವಿಚ್ಛೇದಿತ ಪತ್ನಿ ಕವಿತಾ 10 ವರ್ಷಗಳಿಂದ ಜಾನ್ಸನ್‌ನೊಂದಿಗೆ ವಾಸವಾಗಿದ್ದಳೆನ್ನಲಾಗಿದ್ದು, ಒಂದೂವರೆ ವರ್ಷಗಳಿಂದ ಜಾನ್ಸನ್ ಉಮಾ ಎಂಬಾಕೆಯೊಂದಿಗೆ ಸಹವಾಸ ಬೆಳೆಸಿದ ಹಿನ್ನೆಲೆಯಲ್ಲಿ ಕವಿತಾ ಒಬ್ಬಂಟಿಯಾಗಿ ವಾಸಿಸುತ್ತಿದ್ದಳು. ಈ ಬಗ್ಗೆ ಕವಿತಾ ಹಾಗೂ ಜಾನ್ಸನ್ ನಡುವೆ ಆಗಾಗ ಕಲಹ ನಡೆಯುತ್ತಿತ್ತೆನ್ನಲಾಗಿದೆ. ಈ ಸಂಬಂಧ ಕವಿತಾ ಕುಶಾಲನಗರ ಪೊಲೀಸ್ ಠಾಣೆಗೆ ದೂರನ್ನೂ ನೀಡಿದ್ದರು.

ಉಮಾಳೊಂದಿಗೆ ಜಾನ್ಸನ್ ವಾಸವಾಗಿದ್ದುದನ್ನು ವಿರೋಧಿಸುತ್ತಿದ್ದ ಕವಿತಾ ಆತನ ಸಹೋದರ ಜಿ.ಟಿ. ಜಗ ಎಂಬಾತನೊಂದಿಗೂ ಜಗಳ ತೆಗೆಯುತ್ತಿದ್ದರೆನ್ನಲಾಗಿದೆ.

2016 ರ ಜ.19 ರ ರಾತ್ರಿ ಕವಿತಾ ತನ್ನ ವಾಸದ ಮನೆಯತ್ತ ತೆರಳುತ್ತಿದ್ದ ಸಂದರ್ಭ ಆಕೆಯೊಂದಿಗೆ ಜಗಳ ತೆಗೆದರೆಂದು ಹೇಳಲಾಗಿದೆ. ಈ ಸಂದರ್ಭ  ಜಗ ತನ್ನ ಮನೆಯೊಳಗಿನಿಂದ ಕತ್ತಿ ತಂದಿದ್ದು, ಇದನ್ನು ಕಂಡು ಕವಿತಾ ತನ್ನ ಮನೆಯ ಕಡೆ ಓಡಲಾರಂಭಿಸಿದ್ದಾಳೆ. ಅರಣ್ಯ ಭಾಗದಲ್ಲಿ ಜಗ ಆಕೆಯನ್ನು ಕತ್ತಿಯಿಂದ ಕಡಿದಿದ್ದಲ್ಲದೆ, ಜಾನ್ಸನ್ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದ ಎಂದು ದೂರು ದಾಖಲಾಗಿತ್ತು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಕುಶಾಲನಗರ ಪೊಲೀಸರು ಸಲ್ಲಿಸಿದ ದೋಷಾರೋಪಣಾ ಪಟ್ಟಿಯ ವಿಚಾರಣೆ ನಡೆಸಿದ ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಡಿ.ಪವನೇಶ್ ಅವರು, ಆರೋಪಿಗಳಿಗೆ ಕಠಿಣ ಜೀವಾವಧಿ ಶಿಕ್ಷೆ ಹಾಗೂ ತಲಾ 15 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪಾವತಿಯಾಗುವ ದಂಡದಲ್ಲಿ 25 ಸಾವಿರ ರೂ.ಗಳನ್ನು ಕವಿತಾಳ ಮಕ್ಕಳನ್ನು ನೋಡಿಕೊಳ್ಳುವ ಸಲುವಾಗಿ ಪಿರ್ಯಾದುದಾರ ರಾಜೀವ್ ಅವರಿಗೆ ನೀಡುವಂತೆಯೂ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಕರಣದಲ್ಲಿ  ಸರಕಾರಿ ಅಭಿಯೋಜಕಿ ಎಂ. ಕೃಷ್ಣವೇಣಿ ಅವರು ವಾದ ಮಂಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X