ಬಾಲಕಿಗೆ ಕಿರುಕುಳ: ರಿಕ್ಷಾ ಚಾಲಕನ ಸೆರೆ
ಬಂಟ್ವಾಳ, ಮೇ 31: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ರಿಕ್ಷಾ ಚಾಲಕನೋರ್ವನನ್ನು ವಿಟ್ಲ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿರುವ ಘಟನೆ ಬುಧವಾರ ನಡೆದಿದೆ.
ಕಂಬಳಬೆಟ್ಟು ನಿವಾಸಿ ಅಶ್ರಫ್ (32) ಬಂಧಿತ ಆರೋಪಿ. ಅಂಗಡಿಯಿಂದ ದಿನಸಿ ಸಾಮಾನು ಖರೀದಿಸಿ ಮನೆಗೆ ತೆರಳುತ್ತಿದ್ದ 13 ವರ್ಷದ ಬಾಲಕಿಯನ್ನು ಬಲಾತ್ಕಾರವಾಗಿ ರಿಕ್ಷಾದಲ್ಲಿ ಕೂರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದ ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ಘಟನೆಯ ಬಳಿಕ ಮಾನಸಿಕವಾಗಿ ನೊಂದ ಬಾಲಕಿಯನ್ನು ಮನೆಯವರು ವಿಚಾರಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಬಾಲಕಿಯ ಹೆತ್ತವರು ವಿಟ್ಲ ಪೊಲೀಸ್ ಠಾಣೆಗೆ ನೀಡಿರುವ ದೂರಿನಂತೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿ ಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.
Next Story