ಪೆರಿಯಶಾಂತಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಉಪ್ಪಿನಂಗಡಿ, ಜೂ.1: ಅನಿಲ ಸಾಗಾಟ ಮಾಡುತ್ತಿದ್ದ ಟ್ಯಾಂಕರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರಿಯಶಾಂತಿ ಎಂಬಲ್ಲಿ ಇಂದು ಬೆಳಗ್ಗೆ ನಡೆಸಿದೆ.
ಮಂಗಳೂರಿನಿಂದ ಶಿವಮೊಗ್ಗಕ್ಕೆ ಅನಿಲ ಸಾಗಾಟ ಮಾಡುತ್ತಿದ್ದ ಈ ಟ್ಯಾಂಕರ್ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಇದರಿಂದ ಯಾವುದೇ ಹಾನಿ ಉಂಟಾಗಿಲ್ಲ ಹಾಗೂ ಅನಿಲ ಸೋರಿಕೆ ಕಾಣಿಸಿಕೊಂಡಿಲ್ಲ. ಆದರೆ ಗ್ಯಾಸ್ ಟ್ರಾಲಿ ಮತ್ತು ಇಂಜಿನ್ ಪರಸ್ಪರ ಬೇರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಉರುಳಿಬಿದ್ದಿರುವ ಟ್ಯಾಂಕರಿನಿಂದ ಅನಿಲವನ್ನು ಇನ್ನೊಂದು ವಾಹನಕ್ಕೆ ವರ್ಗಾವಣೆ ಮಾಡಬೇಕಿದೆ. ಇದಕ್ಕಾಗಿ ಮಂಗಳೂರಿನಿಂದ ಎಂಆರ್‌ಪಿಎಲ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಲಿದ್ದಾರೆ. ಅನಿಲ ವರ್ಗಾವಣೆಯ ಹಿನ್ನೆಲೆಯಲ್ಲಿ ಪರಿಸರದಲ್ಲಿ ಹೆದ್ದಾರಿ ಸಂಚಾರವನ್ನು ತಡೆಗಟ್ಟುವ ಸಾಧ್ಯತೆ ಇದೆ.
ಅಪಘಾತದ ಕಾರಣ ಬೆಳಗ್ಗೆ ಬೆಂಗಳೂರಿನಿಂದ ಮಂಗಳೂರಿಗೆ ಹಾಗೂ ಧರ್ಮಸ್ಥಳಕ್ಕೆ ಆಗಮಿಸುತ್ತಿರುವ ವಾಹನಗಳ ದಟ್ಟಣೆಯನ್ನು ಉಪ್ಪಿನಂಗಡಿ ಪೊಲೀಸರು ನಿಯಂತ್ರಿಸಿದರು. ಟ್ಯಾಂಕರ್ ಚಾಲಕ ತಮಿಳುನಾಡು ಮೂಲದ ವಡಿವೇಲು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ.





