ಬಿಸಿಸಿಐ ಆಡಳಿತಾತ್ಮಕ ಸಮಿತಿಯ ಸದಸ್ಯ ಸ್ಥಾನಕ್ಕೆ ರಾಮಚಂದ್ರ ಗುಹಾ ರಾಜೀನಾಮೆ

ಹೊಸದಿಲ್ಲಿ, ಜೂ.1: ಬಿಸಿಸಿಐ ಆಡಳಿತಾತ್ಮಕ ಸಮಿತಿಯ ಸದಸ್ಯ ಸ್ಥಾನಕ್ಕೆ ಖ್ಯಾತ ಇತಿಹಾಸ ತಜ್ಞ ರಾಮಚಂದ್ರ ಗುಹಾ ಅವರು ರಾಜಿನಾಮೆ ನೀಡಿದ್ದಾರೆ.
ವೈಯಕ್ತಿಕ ಕಾರಣಗಳಿಂದಾಗಿ ಬಿಸಿಸಿಐ ಆಡಳಿತಾತ್ಮಕ ಮಂಡಳಿಯಲ್ಲಿನ ಸದಸ್ಯ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದೇನೆ. ಆಡಳಿತಾತ್ಮಕ ಸಮಿತಿಯ ಅಧ್ಯರಾಗಿರುವ ವಿನೋದ್ ರಾಯ್ ಅವರಿಗೆ ತನ್ನ ರಾಜಿನಾಮೆ ಸಲ್ಲಿಸಿರುವುದಾಗಿ ಗುರುವಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.
ಲೋಧಾ ಸಮಿತಿಯ ಶಿಫಾರಸ್ಸು ಜಾರಿಗೊಳಿಸುವಲ್ಲಿ ವಿಫಲರಾದ ಹಿನ್ನಲೆಯಲ್ಲಿ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಬಳಿಕ ಸುಪ್ರೀಂ ಕೋರ್ಟ್ ವಿನೋದ್ ರಾಯ್ ನೇತೃತ್ವದಲ್ಲಿ ಬಿಸಿಸಿಐ ಆಡಳಿತ ಸಮಿತಿ ರಚನೆ ಮಾಡಿತ್ತು. ಈ ಸಮಿತಿಯಲ್ಲಿ ರಾಮಚಂದ್ರ ಗುಹಾ ಸದಸ್ಯರಾಗಿ ನೇಮಕಗೊಂಡಿದ್ದಾರೆ
Next Story





