ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು, ಜೂ.1: ನಗರ ಹೊರವಲಯದ ವಳಚ್ಚಿಲ್ ಪದವಿನ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಚಿಕ್ಕಮಗಳೂರು ನಿವಾಸಿ ಸುಚೇತನಾ(20) ಆತ್ಮಹತ್ಯೆ ಮಾಡಿಕೊಂಡವರು. ಇವರು ಬಿ.ಇ. ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದರು. ಇಂದು ಬಿ.ಇ. ಇಂಜಿನಿಯರಿಂಗ್ ಪ್ರಥಮ ವರ್ಷದ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಇದರಲ್ಲಿ ಸುಚೇತನಾ ಅನುತ್ತೀರ್ಣರಾಗಿದ್ದರೆನ್ನಲಾಗಿದೆ. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ಆಕೆಯ ಮೃತದೇಹವು ಕಾಲೇಜು ಕ್ಯಾಂಪಸ್ ಒಳಗಿರುವ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
Next Story





