Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನಲ್ಲಿ ಆಶಾದಾಯಕ ಮಳೆ: ಕೃಷಿ ಇಲಾಖೆ...

ಕೊಡಗಿನಲ್ಲಿ ಆಶಾದಾಯಕ ಮಳೆ: ಕೃಷಿ ಇಲಾಖೆ ವಿಶ್ವಾಸ

ಇನ್ನೆರಡು ದಿನಗಳಲ್ಲಿ ಮುಂಗಾರು ಆರಂಭ

ವಾರ್ತಾಭಾರತಿವಾರ್ತಾಭಾರತಿ1 Jun 2017 10:40 PM IST
share
ಕೊಡಗಿನಲ್ಲಿ ಆಶಾದಾಯಕ ಮಳೆ: ಕೃಷಿ ಇಲಾಖೆ ವಿಶ್ವಾಸ

ಮಡಿಕೇರಿ, ಜೂ.1: ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ಕುಡಿಯುವ ನೀರನ್ನು ಒದಗಿಸುವ ಕಾವೇರಿ ನದಿಯ ಹುಟ್ಟೂರು ಕೊಡಗು ಜಿಲ್ಲೆಯಲ್ಲಿ ಈ ಬಾರಿ ಆಶಾದಾಯಕ ಮಳೆಯಾಗಲಿದೆ ಎಂದು ಕೃಷಿ ಇಲಾಖೆ ವಿಶ್ವಾಸ ವ್ಯಕ್ತಪಡಿಸಿದೆ. ಇನ್ನೆರಡು ದಿನಗಳಲ್ಲಿ ಮುಂಗಾರು ಕೊಡಗನ್ನು ಪ್ರವೇಶಿಸಲಿದ್ದು, ಸಕಾಲದಲ್ಲಿ ಸಮರ್ಪಕವಾಗಿ ಮಳೆಯಾದರೆ ಉತ್ತಮ ಕೃಷಿ ಫಸಲನ್ನು ನಿರೀಕ್ಷಿಸಬಹುದಾಗಿದೆ.


ಬರ ಪರಿಸ್ಥಿತಿ ಕಳೆದ ವರ್ಷ ಇಡೀ ರಾಜ್ಯವನ್ನು ಕಾಡಿದಂತೆ ಕೊಡಗು ಜಿಲ್ಲೆಯನ್ನು ಕೂಡ ಕಾಡಿತ್ತು. ಜಿಲ್ಲೆಯ ವೀರಾಜಪೇಟೆ ಹಾಗೂ ಸೋಮವಾರಪೇಟೆ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿತ್ತು. ಆದರೆ, ಈ ಬಾರಿ ಉತ್ತಮ ಮಳೆೆಯಾಗುವ ನಿರೀಕ್ಷೆ ಇದ್ದು, ಈಗಾಗಲೇ ಪ್ರಸಕ್ತ ವರ್ಷ ಜನವರಿಯಿಂದ ಮೇ ಅಂತ್ಯದವರೆಗೆ ವಾಡಿಕೆ ಮಳೆಗಿಂತ ಹೆಚ್ಚಿನ ಮಳೆಯಾಗಿದೆ. ವಾಡಿಕೆ ಮಳೆ 245 ಮಿ.ಮೀ. ಆಗಬೇಕಾಗಿತ್ತು, ಆದರೆ ಇಲ್ಲಿಯವರೆಗೆ 311.7 ಮಿ.ಮೀ. ಮಳೆಯಾಗಿದೆ.


ಮೇ 29ರಂದು ಮುಂಗಾರು ಕೇರಳವನ್ನು ಪ್ರವೇಶಿಸಿದ್ದು, ಇನ್ನು ಮೂರು ದಿನಗಳಲ್ಲಿ ಕೊಡಗಿನಲ್ಲಿ ಮಳೆೆ ಆರಂಭವಾಗಲಿದೆ ಎಂದು ಸಹಾಯಕ ಕೃಷಿ ಅಧಿಕಾರಿ ಬಿ.ಎಸ್. ರಮೇಶ್ ‘ವಾರ್ತಾಭಾರತಿ’ಗೆ ತಿಳಿಸಿದರು. 2017-18ನೆ ಸಾಲಿನಲ್ಲಿ ಮುಂಗಾರು ಗುರಿ 34,500 ಹೆಕ್ಟೇರ್ ಪ್ರದೇಶವೆಂದು ಕ್ರಿಯಾಯೋಜನೆ ತಯಾರಿಸಲಾಗಿದೆ. ಮಡಿಕೆೇರಿ ತಾಲೂಕಿನಲ್ಲಿ 6,500 ಹೆಕ್ಟೇರ್, ಸೋಮವಾರಪೇಟೆ ಹಾಗೂ ವೀರಾಜಪೇಟೆ ತಾಲೂಕಿನಲ್ಲಿ ತಲಾ 14 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಕಾರ್ಯ ನಡೆಯಲಿದೆ.

ಭತ್ತದ ಬೆಳೆಯನ್ನು ಮಳೆಯಾಶ್ರಿತ 28,100 ಹೆಕ್ಟೇರ್, ಹಾರಂಗಿ ನೀರಾವರಿ ಕೃಷಿ 2,000 ಹೆಕ್ಟೇರ್, ಚಿಕ್ಲಿ ಹೊಳೆ 400 ಹೆಕ್ಟೇರ್, ನೀರಾವರಿ 2,400 ಹೆಕ್ಟೇರ್ ಪ್ರದೇಶ ಸೇರಿದಂತೆ ಒಟ್ಟು 30,500 ಹೆಕ್ಟೇರ್ ಪ್ರದೇಶದಲ್ಲಿ ಬೆಳೆೆಯುವ ಗುರಿ ಹೊಂದಲಾಗಿದೆ. ಮುಸುಕಿನ ಜೋಳ 4000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆೆಲಾಗುತ್ತದೆ.

ಕಳೆದ ವರ್ಷ 2.71 ಕೋ. ರೂ. ನಷ್ಟ: 2016-17ನೆ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆಯಿಂದ ಶೇ.33ಕ್ಕಿಂತ ಹೆಚ್ಚಿನ ಭತ್ತದ ಬೆಳೆಗೆ ಹಾನಿಯಾಗಿದೆ. ಮಡಿಕೇರಿ ತಾಲೂಕಿನ 6,100 ಹೆಕ್ಟೇರ್ ಪ್ರದೇಶದಲ್ಲಿ 104.4 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, 199 ರೈತರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.

ನಷ್ಟದ ಪರಿಹಾರ ಮೊತ್ತವನ್ನು 7.10 ಲಕ್ಷವೆಂದು ಶಿಫಾರಸು ಮಾಡಲಾಗಿದೆ. ಸೋಮವಾರಪೇಟೆ ತಾಲೂಕಿನಲ್ಲಿ 9,740 ಹೆಕ್ಟೇರ್ ಪ್ರದೇಶದಲ್ಲಿ 1,477.93 ಪ್ರದೇಶದ ಬೆಳೆ ನಷ್ಟವಾಗಿದೆ. 3,747 ಮಂದಿ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದು, ನಷ್ಟದ ಮೊತ್ತ 1.05 ಕೋಟಿ ಎಂದು ಶಿಫಾರಸು ಮಾಡಲಾಗಿದೆ. ವೀರಾಜಪೇಟೆ ತಾಲೂಕಿನ 12,250 ಹೆಕ್ಟೇರ್ ಪ್ರದೇಶದಲ್ಲಿ 2,442.35 ಹೆಕ್ಟೇರ್ ಪ್ರದೇಶದ ಕೃಷಿ ನಾಶವಾಗಿದ್ದು, 4,128 ಅರ್ಜಿಗಳು ಸಲ್ಲಿಸಲ್ಪಟ್ಟಿವೆ. ಇಲ್ಲಿನ ನಷ್ಟ 1.63 ಕೋಟಿ ಎಂದು ಅಂದಾಜಿಸಿ ಶಿಫಾರಸು ಮಾಡಲಾಗಿದೆ.ಜಿಲ್ಲೆಯಲ್ಲಿ ಕಳೆದ ವರ್ಷ ಬರ ಪರಿಸ್ಥಿತಿಯಿಂದಾಗಿ 4,024.74 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಫಸಲು ನಾಶವಾಗಿದ್ದು, 8,074 ರೈತರು ಅರ್ಜಿ ಸಲ್ಲಿಸಿದ್ದಾರೆ. ಒಟ್ಟು ನಷ್ಟದ ಪರಿಹಾರ ಮೊತ್ತವನ್ನು 2.71 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಆದರೆ, ಈ ಬಾರಿ ಕಳೆದ ವರ್ಷದಂತೆ ಬರ ಪರಿಸ್ಥಿತಿ ಜಿಲ್ಲೆಯನ್ನು ಕಾಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಕೃಷಿ ಅಧಿಕಾರಿಗಳು ಉತ್ತಮ ಮಳೆೆಯಾಗುವ ನಿರೀಕ್ಷೆಯಲ್ಲಿದ್ದಾರೆ. ಸಕಾಲದಲ್ಲಿ ಮಳೆೆಯಾದರೆ, 1.60 ಲಕ್ಷದ ಟನ್ ಭತ್ತದ ಉತ್ಪಾದನೆಯನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಯೋಜನೆಯಲ್ಲಿ ಸಾಮಾನ್ಯರಿಗೆ ಶೇ.80ರಷ್ಟು ಹಾಗೂ ಎಸ್ಸಿ-ಎಸ್ಟಿಗೆ ಶೇ.90ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯ ಮೂಲಕ ನೀರಿನ ಸಂರಕ್ಷಣೆ ಮಾಡಿ, ಕ್ಲಿಷ್ಟ ಪರಿಸ್ಥಿತಿಯಲ್ಲಿ ಬೆಳೆಗಳಿಗೆ ಬೆಳೆಯಲು ರಿಯಾಯಿತಿ ದರದಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿ ಕೊಡಲಾಗುತ್ತದೆ. ನೀರೆತ್ತುವುದಕ್ಕಾಗಿ 5 ಎಚ್.ಪಿ. ಡೀಸೆಲ್ ಪಂಪ್‌ಸೆಟ್ ಮತ್ತು ತುಂತುರು ನೀರಾವರಿ ಘಟಕಗಳನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತದೆ ಎಂದರು.

ರೈತರು ಕೃಷಿ ಇಲಾಖೆೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೆೇರಿಯಲ್ಲಿ ಅರ್ಜಿಯನ್ನು ಪಡೆದು ಭರ್ತಿ ಮಾಡಿ ನೀಡಬಹುದೆಂದು ಬಿ.ಎಸ್. ರಮೇಶ್ ಮಾಹಿತಿ ನೀಡಿದರು.
ಜಿಲ್ಲೆಯ ಬೇಡಿಕೆ ಹೆಚ್ಚಾದಲ್ಲಿ ಸರಕಾರ ಮತ್ತೆ ಹೆಚ್ಚಿನ ಕೃಷಿ ಹೊಂಡಗಳನ್ನು ನೀಡಲು ಸಿದ್ಧವಿದೆ ಎಂದು ಅವರು ಸ್ಪಷ್ಟಪಡಿಸಿದರು.

ಗೊಬ್ಬರಕ್ಕೆ ಆಧಾರ್ ಕಡ್ಡಾಯ
ಪ್ರಸಕ್ತ ವರ್ಷ ಜೂನ್ ತಿಂಗಳಿನಿಂದ ರಸಗೊಬ್ಬರ ಮಾರಾಟಗಾರರು ‘ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‌ಫರ್’ ಯೋಜನೆಗೆ ಒಳಪಡಲಿದ್ದು, ಎಲ್ಲ ಚಿಲ್ಲರೆ ರಸಗೊಬ್ಬರ ಮಾರಾಟಗಾರರಿಗೆ ಪಾಯಿಂಟ್ ಆಫ್ ಸೇಲ್ ಮೆಷಿನ್ ಬಳಕೆ ಕುರಿತು ತರಬೇತಿ ನೀಡಲಾಗುತ್ತಿದೆ. ರಸಗೊಬ್ಬರ ದುರ್ಬಳಕೆ ಆಗುವುದನ್ನು ತಡೆಗಟ್ಟಲು ರಸಗೊಬ್ಬರವನ್ನು ಮಾರಾಟ ಮಾಡುವಾಗ ರೈತರಿಂದ ಆಧಾರ್ ಕಾರ್ಡ್ ಸಂಖ್ಯೆಯನ್ನು ಪಡೆಯುವುದು ಕಡ್ಡಾಯಗೊಳಿಸಲಾಗಿದೆ. ಎಲ್ಲ ರೈತರು ಆಧಾರ್ ಕಾರ್ಡ್‌ನ್ನು ಪಡೆದುಕೊಳ್ಳುವುದು ಸೂಕ್ತವೆಂದು ಸಹಾಯಕ ಕೃಷಿ ಅಧಿಕಾರಿ ಬಿ.ಎಸ್. ರಮೇಶ್ ತಿಳಿಸಿದರು.


ಜಿಲ್ಲೆಯ ರೈತರು ಕಾಲ ಕಾಲಕ್ಕೆ ಕೃಷಿ ಇಲಾಖೆಯನ್ನು ಹಾಗೂ ಕೃಷಿ ಸಂಪರ್ಕ ಅಧಿಕಾರಿಗಳನ್ನು ಭೇಟಿಯಾಗಿ ಅಗತ್ಯ ಮಾಹಿತಿಗಳನ್ನು ಪಡೆದು ಸರಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಕೃಷಿ ಕ್ಷೇತ್ರದಲ್ಲಿ ಯಶಸ್ಸನ್ನು ಸಾಧಿಸುವಂತೆ ಅವರು ಸಲಹೆ ನೀಡಿದರು.


ಈ ಬಾರಿ ರಾಜ್ಯ ಸರಕಾರ ಕೃಷಿಭಾಗ್ಯ ಯೋಜನೆಯನ್ನು ಕೊಡಗು ಸೇರಿದಂತೆ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೂ ವಿಸ್ತರಿಸಿದ್ದು, ಈ ಯೋಜನೆಯಡಿ ಜಿಲ್ಲೆಗೆ 300 ಕೃಷಿ ಹೊಂಡಗಳ ಗುರಿಯನ್ನು ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X