ಪಾರ್ವತಮ್ಮರಾಜ್‌ಕುಮಾರ್ ಅಂತಿಮ ಯಾತ್ರೆಗೆ ರಾಷ್ಟ್ರಧ್ವಜ: ಹೈಕೋರ್ಟ್‌ನಲ್ಲಿ ದೂರು ದಾಖಲು

ಬೆಂಗಳೂರು, ಜೂ.2: ಪಾರ್ವತಮ್ಮ ರಾಜ್‌ಕುಮಾರ್ ಅಂತ್ಯಕ್ರಿಯೆ ವೇಳೆ ಅವರ ಪಾರ್ಥಿವ ಶರೀರದ ಮೇಲೆ ರಾಷ್ಟ್ರಧ್ವಜ ಬಳಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಈ ಕುರಿತಂತೆ ವಕೀಲ ಚೇತನ್ ಎಂಬುವರು 24ನೆ ಎಸಿಎಂಎಂ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದಾರೆ.
ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಹಾಗೂ ಪೊಲೀಸ್ ಆಯುಕ್ತರ ವಿರುದ್ಧ ವಕೀಲ ಚೇತನ್ 24ನೆ ಎಸಿಎಂಎಂ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.
ರಾಷ್ಟ್ರಧ್ವಜ ಕಾಯ್ದೆ ನಿಯಮ 3 ಮತ್ತು 5 ಅನ್ನು ಉಲ್ಲಂಘನೆ ಮಾಡಿದ ಆರೋಪದಡಿ ದೂರು ದಾಖಲಾಗಿದೆ. ರಾಷ್ಟ್ರಧ್ವಜವನ್ನು ಕೇವಲ ಮಿಲಿಟರಿ ಅಧಿಕಾರಿಗಳ ಮೃತದೇಹದ ಮೇಲೆ ಹೊದಿಸಲು ಅವಕಾಶವಿದೆ. ಬೇರೆ ಯಾವುದೇ ಖಾಸಗಿ ವ್ಯಕ್ತಿಗಳ ಅಂತಿಮ ಸಂಸ್ಕಾರದ ವೇಳೆ ಬಳಸಬಾರದು ಎಂದು ದೂರಿನಲ್ಲಿ ವಕೀಲರು ಪ್ರತಿಪಾದಿಸಿದ್ದಾರೆ.
Next Story





