ಉಡುಪಿ: ಜೂ. 8ಕ್ಕೆ ಸೇಡಿಯಾಪು ಪ್ರಶಸ್ತಿ ಪ್ರದಾನ
ಉಡುಪಿ, ಜೂ. 2: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಹಾಗೂ ಮಣಿಪಾಲ ವಿವಿ ಸೇಡಿಯಾಪು ಕೃಷ್ಣ ಭಟ್ಟರ ಹೆಸರಲ್ಲಿ ನೀಡುವ ‘ಸೇಡಿಯಾಪು ಪ್ರಶಸ್ತಿ’ಯನ್ನು ಖ್ಯಾತ ಲೇಖಕ, ಸಾಹಿತಿ, ವಿಮರ್ಶಕ ಪ್ರೊ.ಗಿರಡ್ಡಿ ಗೋವಿಂದ ರಾಜ್ ಇವರಿಗೆ ಜೂ.8ರಂದು ಗುರುವಾರ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಅಪರಾಹ್ನ 3:45ಕ್ಕೆ ಪ್ರದಾನ ಮಾಡಲಾಗುವುದು.
ಹಿರಿಯ ಸಾಹಿತಿ, ತುಳು ವಿದ್ವಾಂಸ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಹಿರಿ ವಿದ್ವಾಂಸ ತಾಳ್ತಜೆ ವಸಂತ ಕುಮಾರ್ ಅಭಿನಂದನಾ ಭಾಷಣ ಮಾಡಲಿರುವರು.
ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಉಡುಪಿಯ ‘ಸಮೂಹ’ ಕಲಾವಿದರಿಂದ ನೃತ್ಯ ರೂಪಕ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.
'ವೇತನ ಆಯೋಗಕ್ಕೆ ಸ್ವಾಗತ' ಈ ಬಗ್ಗೆ ಮುಂಗಡ ಪತ್ರ ಮಂಡನೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಪ್ರಸ್ತಾಪಿಸಿರುವುದನ್ನು ಅನುಷ್ಠಾನಕ್ಕೆ ತಂದಿರುವ ಬಗ್ಗೆ ಅವರನ್ನು ಅಭಿನಂದಿಸಿದ್ದಾರೆ.
Next Story





