Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುಪಿಎಸ್ಸಿ ಪಾಸಾದ ನವೀನ್ ಭಟ್ ರಿಗೆ...

ಯುಪಿಎಸ್ಸಿ ಪಾಸಾದ ನವೀನ್ ಭಟ್ ರಿಗೆ ಬಿ.ಸಿ.ರೋಡ್ ಪ್ರೆಸ್‌ಕ್ಲಬ್‌ನಲ್ಲಿ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ2 Jun 2017 11:09 PM IST
share
ಯುಪಿಎಸ್ಸಿ ಪಾಸಾದ ನವೀನ್ ಭಟ್ ರಿಗೆ ಬಿ.ಸಿ.ರೋಡ್ ಪ್ರೆಸ್‌ಕ್ಲಬ್‌ನಲ್ಲಿ ಸನ್ಮಾನ

ಬಂಟ್ವಾಳ, ಜೂ. 2: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ಕಡು ಬಡತನ ಇಲ್ಲ. ವಿದ್ಯಾಭ್ಯಾಸ ವ್ಯವಸ್ಥೆಯೂ ಎಂಜಿನಿಯರಿಂಗ್, ಮೆಡಿಕಲ್ ಪ್ರೇರೇಪಣೆ ಒದಗಿಸುವುದರೊಂದಿಗೆ ಇಲ್ಲಿನ ಜನರ ಮನೋಸ್ಥಿತಿಯು ಸಿವಿಲ್ ಸರ್ವೀಸ್ ಕಡೆಗೆ ವಾಲುತ್ತಿಲ್ಲ ಎಂದು ಯುಪಿಎಸ್ಸಿ ಪರೀಕ್ಷೆಯಲ್ಲಿ 37ನೆ ಸ್ಥಾನ ಪಡೆದ ಬಂಟ್ವಾಳದ ನವೀನ್ ಭಟ್ ಹೇಳಿದ್ದಾರೆ.

ಸಿವಿಲ್ ಸರ್ವೀಸ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಬಳಿಕ ಬೆಂಗಳೂರಿನಿಂದ ಬಂಟ್ವಾಳದ ತನ್ನ ಮನೆಗೆ ಆಗಮಿಸಿದ ನವೀನ್ ಭಟ್ ಶುಕ್ರವಾರ ಮಧ್ಯಾಹ್ನ ಬಿ.ಸಿ.ರೋಡ್ ಪ್ರೆಸ್‌ಕ್ಲಬ್‌ನಲ್ಲಿ ಮಾಧ್ಯಮದವರೊಂದಿಗೆ ಮಾತುಕತೆ ನಡೆಸಿ ಪರೀಕ್ಷೆಯ ಅನುಭವಗಳನ್ನು ಹಂಚಿಕೊಂಡರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಇಟಿ ತರಬೇತಿ ಸಹಿತ ವಿವಿಧ ಕೋಚಿಂಗ್ ಸೆಂಟರ್‌ಗಳಿವೆ. ಆದರೆ ಐಎಎಸ್, ಕೆಎಎಸ್ ಕೋಚಿಂಗ್ ಸೆಂಟರ್ ಇಲ್ಲ. ಇದರ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಕಡಿಮೆ. ಹೀಗಾಗಿ ಇಲ್ಲಿನವರು ಸಿವಿಲ್ ಸರ್ವೀಸ್ ಕಡೆಗೆ ಹೆಚ್ಚು ಆಸಕ್ತಿ ಹೊಂದಿರುವುದಿಲ್ಲ. ನಿಯಮಿತವಾದ ಓದು, ಸಮಕಾಲೀನ ವಿದ್ಯಮಾನಗಳ ಅರಿವು, ಪ್ರತಿಯೊಂದು ವಿಷಯಗಳ ಕಡೆಗಿನ ಆಸಕ್ತಿ, ಜನಸಾಮಾನ್ಯರೊಂದಿಗೆ ಬೆರೆಯುವುದನ್ನು ನಾವು ಮಾಡಿದರೆ ಸಿವಿಲ್ ಸರ್ವೀಸ್‌ಗೆ ಸೇರುವ ಆಸಕ್ತಿಯೂ ಮೂಡುತ್ತದೆ. ಆರನೇ ತರಗತಿಯಿಂದಲೇ ಈ ಕೆಲಸವನ್ನು ನಾವು ಮಾಡಬಹುದು ಎಂದು ನವೀನ್ ಸಲಹೆ ನೀಡಿದರು.

ಎಲ್ಲ ವೃತ್ತಿಗಳಲ್ಲಿ ಅಭದ್ರತೆ ಇದೆ. ಆದರೆ ಸವಾಲುಗಳನ್ನು ಎದುರಿಸಿಕೊಂಡು ಮುನ್ನಡೆಯಬೇಕು. ವೈದ್ಯನಾಗುವುದೂ ಜನಸೇವೆಗೆ. ಐಎಎಸ್ ಅಧಿಕಾರಿಯಾಗುವುದೂ ಜನಸೇವೆಗೆ. ಅವುಗಳಲ್ಲಿ ಸಿವಿಲ್ ಸರ್ವೀಸ್‌ಗೆ ಸೇರಿದರೆ ಹೆಚ್ಚು ಜನರ ಸಂಪರ್ಕ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಹೀಗಾಗಿ ನಾನು ಇದನ್ನು ಆಯ್ಕೆ ಮಾಡಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಜನಸಾಮಾನ್ಯರ ನಡುವೆ ಬೆರೆತು ಅವರ ಕಷ್ಟಗಳಿಗೆ ಸ್ಪಂದಿಸುವ ಅವಕಾಶ ದೊರಕಿತು. ನನಗೆ ನನ್ನ ತಂದೆಯವರೇ ರೋಲ್ ಮಾಡೆಲ್. ಅವರು ಜನರೊಂದಿಗೆ ಸ್ಪಂದಿಸುವ ಪರಿ, ಕೆಲಸದ ಬಗ್ಗೆ ಹೊಂದಿರುವ ಶ್ರದ್ಧೆ ನನಗೆ ಸಿವಿಲ್ ಸರ್ವೀಸ್ ಕಡೆಗೆ ಹೆಚ್ಚು ಆಸಕ್ತಿ ಮೂಡುವಂತೆ ಮಾಡಿತು. ಎಂಬಿಬಿಎಸ್ ಕಲಿಕೆಗೆ ಸೇರಿದಾಗಲೇ ಇದಕ್ಕೆ ತಯಾರಿಗಳನ್ನು ಮಾಡಿಕೊಂಡೆ ಎಂದರು

ನಾನು ಪಾಸ್ ಆಗುತ್ತೇನೆ ಎಂಬ ಆತ್ಮವಿಶ್ವಾಸ ಇರಲೇಬೇಕು. ಇದರ ಜೊತೆಗೆ ಮಾರ್ಗದರ್ಶನವೂ ಸೂಕ್ತ ಕ್ರಮದಲ್ಲಿ ದೊರಕಬೇಕು. ನಾನು ದಿನಕ್ಕೆ ಐದರಿಂದ ಆರು ಗಂಟೆ ಓದುತ್ತಿದ್ದೆ. ಇದರ ತಯಾರಿ ಮಾಡುವುದು ಎಂದರೆ ಕಣ್ರೆಪ್ಪೆ ಮುಚ್ಚದೆ ಓದುತ್ತಾ ಇರುವುದಲ್ಲ. ಸಹಜವಾಗಿಯೇ ಇದ್ದು, ವಿಷಯಗಳ ಬಗ್ಗೆ ಮನಮುಟ್ಟುವಂತೆ ಅಧ್ಯಯನ ಕೈಗೊಳ್ಳುವುದು ಹಾಗೂ ಗುಂಪು ಚರ್ಚೆಯಂಥ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರಿಂದ ಹೆಚ್ಚು ಜ್ಞಾನ ಸಂಪಾದನೆ ಸಾಧ್ಯ ಎಂದು ತನ್ನ ಅನುಭವ ಹೇಳಿದರು.

ನವೀನ್ ಭಟ್‌ರನ್ನು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ, ಪ್ರೆಸ್‌ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಕೋಶಾಧಿಕಾರಿ ವೆಂಕಟೇಶ ಬಂಟ್ವಾಳ, ಹರೀಶ ಮಾಂಬಾಡಿ, ಸಂದೀಪ್ ಸಾಲ್ಯಾನ್, ಕಿಶೋರ್ ಪೆರಾಜೆ, ಇಮ್ತಿಯಾಝ್ ಶಾ ತುಂಬೆ, ಚಂದ್ರಶೇಖರ ಕಲ್ಮಲೆ ಮತ್ತು ಜಯಾನಂದ ಪೆರಾಜೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X