ಜೂ.4: ವಿಕಾಸ್ ಕಾಲೇಜಿನಲ್ಲಿ ಮಾಹಿತಿ, ಮಾರ್ಗದರ್ಶನ ಕಾರ್ಯಕ್ರಮ
ಮಂಗಳೂರು, ಜೂ.3: ನಗರದ ಮೇರಿಹಿಲ್‌ನಲ್ಲಿರುವ ವಿಕಾಸ್ ಪಿಯು ಕಾಲೇಜು ವತಿಯಿಂದ ವಿದ್ಯಾರ್ಥಿಗಳಿಗೆ ಮಾಹಿತಿ, ಮಾರ್ಗದರ್ಶನ ಕಾರ್ಯಕ್ರಮವು ಜೂ. 4ರಂದು ಬೆಳಗ್ಗೆ 9:30ಕ್ಕೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ವಿಕಾಸ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಕೃಷ್ಣ ಜೆ. ಪಾಲೆಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಲಾಬ್ ರಾವ್ ಭೂಷಣ್ ಬೊರಸೆ ಮತ್ತು ನಗರದ ಕೆಎಂಸಿಯ ಆರ್ಥೊಪೆಡಿಕ್ ವಿಭಾಗದ ಎಚ್‌ಒಡಿ ಹಾಗೂ ಪ್ರೊಫೆಸರ್ ಡಾ.ಸುರೇಂದ್ರ ಕಾಮತ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





