Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಲಕಾವೇರಿ ಸೂಕ್ಷ್ಮ ಪರಿಸರ ವಲಯ :...

ತಲಕಾವೇರಿ ಸೂಕ್ಷ್ಮ ಪರಿಸರ ವಲಯ : ಭಾಗಮಂಡಲ ಗ್ರಾಮಸ್ಥರ ವಿರೋಧ

ವಾರ್ತಾಭಾರತಿವಾರ್ತಾಭಾರತಿ3 Jun 2017 5:46 PM IST
share
ತಲಕಾವೇರಿ ಸೂಕ್ಷ್ಮ ಪರಿಸರ ವಲಯ : ಭಾಗಮಂಡಲ ಗ್ರಾಮಸ್ಥರ ವಿರೋಧ


ಮಡಿಕೇರಿ ಜೂ.3 : ತಲಕಾವೇರಿ ವನ್ಯಧಾಮವನ್ನು ಸೂಕ್ಷ್ಮ ಪರಿಸರ ವಲಯವನ್ನಾಗಿ ಘೋಷಿಸಿರುವ ಕ್ರಮದ ಹಿಂದೆ ಢೋಂಗಿ ಪರಿಸವಾದಿಗಳ ಕೈವಾಡವಿದೆ ಎಂದು ಆರೋಪಿಸಿರುವ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾದ ಕಾಳನ ರವಿ ಹಾಗೂ ಭಾಗಮಂಡಲ ಗ್ರಾ.ಪಂ ಸದಸ್ಯರು, ಕೇಂದ್ರಕ್ಕೆ ಸಮರ್ಪಕ ವರದಿಯನ್ನು ಸಲ್ಲಿಸದ ರಾಜ್ಯ ಸರಕಾರದ ನಿರ್ಲಕ್ಷ್ಯ ಧೋರಣೆಯೂ ಇದಕ್ಕೆ ಕಾರಣವೆಂದು ಟೀಕಿಸಿದ್ದಾರೆ.


 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಳನ ರವಿ, ಗ್ರಾ.ಪಂ. ಸದಸ್ಯರಾದ ಕೆ.ಸಿ.ಪುರುಷೋತ್ತಮ, ದೇವಂಗೋಡಿ ಭಾಸ್ಕರ ಹಾಗೂ ರಾಜು ರೈ ಯುನೆಸ್ಕೋ ನಿರ್ಧಾರದ ವಿರುದ್ಧ ಹೋರಾಟವನ್ನು ರೂಪಿಸುವುದಾಗಿ ಎಚ್ಚರಿಕೆ ನೀಡಿದರು.  ಸೂಕ್ಷ್ಮ ಪರಿಸರ ವಲಯ ಘೋಷಣೆಯನ್ನು ಖಂಡಿಸಿ ಜೂ.6 ರ ಭಾಗಮಂಡಲ ಗ್ರಾಮಸಭೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದರು.


 ಜಿಲ್ಲೆಯಲ್ಲಿ ಪುಷ್ಪಗಿರಿ, ಬ್ರಹ್ಮಗಿರಿ ವನ್ಯಧಾಮಗಳಿದ್ದರೂ, ಅವುಗಳನ್ನು ಪರಿಸರ ಸೂಕ್ಷ್ಮ ವಲಯವನ್ನಾಗಿ ಘೋಷಿಸದೆ ಕೇವಲ ತಲಕಾವೇರಿ ವನ್ಯಧಾಮವನ್ನು ಮಾತ್ರ ಪರಿಸರ ಸೂಕ್ಷ್ಮ ವಲಯವನ್ನಾಗಿ ಘೋಷಿಸಲಾಗಿದೆ. ಇದರ ಹಿಂದೆ ಮಡಿಕೇರಿ-ಪಾಣತ್ತೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ತಡೆಯೊಡ್ಡುವ ಷಡ್ಯಂತ್ರ ಅಡಗಿದೆ ಎಂದು ಆರೋಪಿಸಿದರು.


 ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ನಮ್ಮ ಬೆಂಬಲವಿದೆ ಎಂದು ಸ್ಪಷ್ಟಪಡಿಸಿದ ಅವರು ಹೆದ್ದಾರಿಯಿಂದ ಕೊಡಗಿನ ಪರಿಸರಕ್ಕೆ ಯಾವುದೇ ಹಾನಿ ಇಲ್ಲವೆಂದು ಅಭಿಪ್ರಾಯಪಟ್ಟರು.


  ತಲಕಾವೇರಿ ವನ್ಯಧಾಮವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಿರುವುದರಿಂದ ಅದರ ಸುತ್ತಮುತ್ತಲ ಗ್ರಾಮಗಳಲ್ಲಿ ಯಾವುದೇ ವಾಣಿಜ್ಯ ಕೈಗಾರಿಕೆಗಳು, ಯಾಂತ್ರಿಕ ಕೃಷಿ ಚಟುವಟಿಕೆಗಳು ನಡೆಯುವಂತಿಲ್ಲ. ಕೋಳಿ ಸಾಕಾಣಿಕೆ, ಹೈನುಗಾರಿಕೆ ನಡೆಸುವಂತಿಲ್ಲ. ಇದರಿಂದ ಕೃಷಿಯನ್ನೇ ನಂಬಿ ಬದುಕುತ್ತಿರುವ ಅದರಲ್ಲೂ ಕೊಡಗಿನ ಜಮ್ಮಾ ಹಿಡುವಳಿದಾರರ ಜೀವನವೇ ಸಂಕಷ್ಟಕ್ಕೆ ಸಿಲುಕಲಿದ್ದು, ಗ್ರಾಮೀಣ ಜನರನ್ನು ಸಾಯಿಸಿ ಪಟ್ಟಣದ ಜನತೆಗೆ ಅನುಕೂಲ ಮಾಡಿಕೊಡುವ ಹುನ್ನಾರ ಇದರಲ್ಲಿ ಅಡಗಿದೆ ಎಂದು ಟೀಕಿಸಿದರು.


 ಕೊಡಗಿನ ಎಲ್ಲಾ ಮೂಲ ನಿವಾಸಿಗಳು ಈ ಹಿಂದೆ ತಮ್ಮತಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮಸಭೆಗಳನ್ನು ನಡೆಸಿ ಪರಿಸರ ಸೂಕ್ಷ್ಮ ವಲಯ ಹಾಗೂ ಕಸ್ತೂರಿ ರಂಗನ್ ವರದಿಗೆ ಆಕ್ಷೇಪಗಳನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದರು.

 
ಅಲ್ಲದೆ, 2015ರಲ್ಲಿ ಕೊಡಗು ಬಂದ್ ನಡೆಸುವ ಮೂಲಕವೂ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದರು. 2017ರಲ್ಲಿ ಜಿಲ್ಲಾಡಳಿತದ ಆದೇಶದ ಮೇರೆಗೆ ಪ್ರತೀ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಗ್ರಾಮ ಸಭೆಗಳನ್ನು ನಡೆಸಿ ಈ ಯೋಜನೆಗಳಿಗೆ ವಿರೋಧ ವ್ಯಕ್ತಪಡಿಸಿ ನಿರ್ಣಯಗಳನ್ನು ರಾಜ್ಯ ಸರಕಾರಕ್ಕೆ ಕಳುಹಿಸಲಾಗಿತ್ತು. ಆದರೆ ಈ ಎಲ್ಲಾ ವರದಿ, ನಿರ್ಣಯಗಳನ್ನು ಗಾಳಿಗೆ ತೂರಿದ ರಾಜ್ಯ ಸರಕಾರ, ಕೇಂದ್ರಕ್ಕೆ ತನ್ನ ಯಾವುದೇ ಆಕ್ಷೇಪಣೆಯನ್ನು ಸಲ್ಲಿಸದ ಪರಿಣಾಮ ಇಂದಿನ ಈ ದುಸ್ಥಿತಿಗೆ ಕಾರಣವಾಗಿದೆ ಎಂದು ಆರೋಪಿಸಿದರು.


 ಪರಿಸರ ಸೂಕ್ಷ್ಮ ವಲಯ ಹಾಗೂ ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರವು ಅಂತಿಮವಾಗಿ ರಾಜ್ಯ ಸರಕಾರದ ವರದಿಯನ್ನು ಕೇಳಿದ್ದರೂ, ರಾಜ್ಯ ಸರಕಾರ ಆ ವರದಿಯನ್ನು ನೀಡುವಲ್ಲಿ ವಿಫಲವಾಗಿದೆ. ಗ್ರಾಮಸಭೆಗಳಲ್ಲಿ ಕೈಗೊಳ್ಳುವ ನಿರ್ಣಯಗಳಿಗೆ ಬೆಲೆ ಇಲ್ಲ ಎಂದಾದ ಮೇಲೆ ಇನ್ನು ಮುಂದೆ ಕೊಡಗಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನಡೆಸಲಾಗುವ ಗ್ರಾಮಸಭೆಗಳನ್ನು ಬಹಿಷ್ಕರಿಸುವ ಮೂಲಕ ಗ್ರಾಮಸ್ಥರು ತಮ್ಮ ಪ್ರತಿಭಟನೆಯನ್ನು ಸಲ್ಲಿಸಬೇಕಿದೆ. ಆ ನಿಟ್ಟಿನಲ್ಲಿ ಜೂ.6 ರಂದು ನಿಗದಿಯಾಗಿರುವ ಭಾಗಮಂಡಲ ಗ್ರಾಮ ಪಂಚಾಯಿತಿಯ ಗ್ರಾಮಸಭೆಯನ್ನು ಗ್ರಾಮಸ್ಥರು ಬಹಿಷ್ಕರಿಸಲಿದ್ದಾರೆ ಎಂದರು.


 ಭಾಗಮಂಡಲ ವಲಯದ ಜನರಿಗೆ ಮಾರಕವಾಗಿರುವ ಪರಿಸರ ಸೂಕ್ಷ್ಮ ವಲಯ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಭಾಗದ ಜನತೆ ಬೆತ್ತಲೆ ಮೆರವಣಿಗೆ ಮೂಲಕ ಸರಕಾರದ ಮಟ್ಟಕ್ಕೆ ಹೋಗಲು ಸಿದ್ದರಿದ್ದೇವೆ ಎಂದು ತಿಳಿಸಿದರು.


ಕೊಡಗಿನ ಜನತೆ ಪರಿಸರ ವಿರೋಧಿಗಳಲ್ಲ. ಜಿಲ್ಲೆಯಲ್ಲಿ ಬೆಳೆಗಾರರು ತಮ್ಮ ಕಾಫಿ ತೋಟಗಳಲ್ಲಿ ಮರಗಳನ್ನು ಬೆಳೆಸಿರುವುದರಿಂದಲೇ ಇಂದು ಕೊಡಗಿನಲ್ಲಿ ಪರಿಸರ ಉಳಿದಿದೆ. ಅರಣ್ಯ ಇಲಾಖೆಯ ಅಧೀನದಲ್ಲಿರುವ ಕಾಡುಗಳು ಸಂಪೂರ್ಣವಾಗಿ ನಾಶವಾಗಿದ್ದು, ಅಲ್ಲಿ ವನ್ಯಜೀವಿಗಳಿಗೆ ಅಗತ್ಯವಿರುವ ಆಹಾರ ಲಭ್ಯವಾಗದೆ ಅವುಗಳು ನಾಡಿಗೆ ಪ್ರವೇಶಿಸುತ್ತಿವೆ. ಅರಣ್ಯ ಇಲಾಖೆ ಕನಿಷ್ಟ ಪ್ರಾಣಿಗಳಿಗೆ ಆಹಾರವಾಗುವ ಗಿಡಗಳನ್ನಾದರೂ ಅರಣ್ಯದಲ್ಲಿ ಬೆಳೆಸಲು ಮುಂದಾಗಬೇಕು ಎಂದು ಅವರು ಸಲಹೆ ಮಾಡಿದರಲ್ಲದೆ, ಪರಿಸರ ಸೂಕ್ಷ್ಮ ವಲಯವನ್ನು ಕೇವಲ ಅರಣ್ಯಕ್ಕೆ ಮಾತ್ರ ಸೀಮಿತಗೊಳಿಸಿ, ಜನರ ದೈನಂದಿನ ಜೀವನಕ್ಕೆ ಅಡ್ಡಿಯಾಗದಂತೆ ನಿಯಮಗಳಲ್ಲಿ ಸಡಿಲಿಕೆ ಮಾಡಬೇಕು ಎಂದೂ ಅವರು ಒತ್ತಾಯಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X