ಜೂ.5ರಿಂದ ಅಧಿವೇಶನ: ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ
ಬೆಂಗಳೂರು, ಜೂ. 3: ವಿಧಾನ ಮಂಡಲ ಉಭಯ ಸದನಗಳ ಅಧಿವೇಶನದ ಹಿನ್ನೆಲೆಯಲ್ಲಿ ಜೂ.5ರ ಬೆಳಗ್ಗೆ 6ಗಂಟೆಯಿಂದ ಜೂ.16ರ ಮಧ್ಯರಾತ್ರಿ 12 ಗಂಟೆಯ ವರೆಗೆ ವಿಧಾನಸೌಧದ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
ಅಧಿವೇಶನದ ಸಂದರ್ಭದಲ್ಲಿ ಯಾವುದೇ ಮೆರವಣಿಗೆ, ಪ್ರತಿಭಟನೆ, ಧರಣಿ ಸತ್ಯಾಗ್ರಹ ನಡೆಸುವಂತಿಲ್ಲ. ಕಾನೂನು ಭಂಗವನ್ನುಂಟು ಮಾಡುವ ಉದ್ದೇಶಕ್ಕಾಗಿ 5ಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಸಭೆ ನಡೆಸುವುದು, ಶಸ್ತ್ರ, ದೊಣ್ಣೆ ಸೇರಿ ಮಾರಕಾಸ್ತ್ರ ಸಾಗಾಣಿಕೆ, ಸ್ಫೊಟಕ ಸಿಡಿಸುವುದು ಮತ್ತು ಬಹಿರಂಗ ಘೋಷಣೆ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಪ್ರವೀಣ್ ಸೂದ್ ತಿಳಿಸಿದ್ದಾರೆ.
Next Story





