‘ಗದಗ-ಬೆಟಗೇರಿ’ ಕುಡಿಯುವ ನೀರು ಪೂರೈಸುವ ಯೋಜನೆಗೆ ಚಾಲನೆ
ಬೆಂಗಳೂರು, ಜೂ.3: ಗದಗ- ಬೆಟಗೇರಿ ಅವಳಿ ನಗರಕ್ಕೆ ಶಾಶ್ವತ ಕುಡಿಯುವ ನೀರು ಪೂರೈಸುವ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಸಚಿವ ಎಚ್.ಕೆ.ಪಾಟೀಲ್ ಕನಸಿನ ಯೋಜನೆಯು ಪೂರ್ಣಗೊಂಡಿದ್ದು, ಜೂ.4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಅವಳಿ ನಗರದ ಅರ್ಧದಷ್ಟು ಮನೆಗಳಿಗೆ ದಿನದ 24 ಗಂಟೆಗಳ ಕಾಲ ಕುಡಿಯುವ ನೀರು ದೊರೆಯುವ ಯೋಜನೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಕಳೆದ ಹಲವು ದಶಕಗಳಿಂದ ಅವಳಿ ನಗರದ ಜನತೆ ಕುಡಿಯುವ ನೀರು ಸೌಲಭ್ಯದಿಂದ ವಂಚಿತರಾಗಿದ್ದರು. ಅಲ್ಲದೆ ಬೆಳೆಯುತ್ತಿರುವ ಜನಸಂಖ್ಯೆ ಈ ಸಮಸ್ಯೆ ಮತ್ತಷ್ಟು ತೀವ್ರಗೊಳ್ಳುವಂತೆ ಮಾಡಿತ್ತು. ಇದಕ್ಕೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಸಮರ್ಥವಾದ ಯೋಜನೆಯನ್ನು ರಾಜ್ಯ ಸರಕಾರ ರೂಪಿಸಿತ್ತು.
70 ಕಿಲೋಮೀಟರ್ ದೂರದಿಂದ ನಗರಕ್ಕೆ ಪೈಪ್ ಲೈನ್ ಹಾಗೂ ಮೂರು ಹಂತದಲ್ಲಿ ನೀರನ್ನು ಮೇಲಕ್ಕೆತ್ತುವ ಮೂಲಕ ಗದಗ-ಬೆಟಗೇರಿ ಅವಳಿ ನಗರಕ್ಕೆ 24 ಗಂಟೆಗಳ ಕಾಲ ನೀರು ಸರಬರಾಜು ಮಾಡಲಿದೆ. ಇದು ದೇಶದಲ್ಲೆ ಮೊದಲ ಬಾರಿಗೆ ಇಂತಹ ಪ್ರಯತ್ನದ ಯೋಜನೆಯಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ರವಿವಾರ ಸಿಂಗಟರಾಯನ ಕೆರೆ ಬಳಿ ಗದಗ ಬೆಟಗೇರಿ ಅವಳಿ ನಗರಗಳಿಗೆ ಎರಡನೆ ಹಂತದ ಕುಡಿಯುವ ನೀರಿನ ಯೋಜನೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಅಲ್ಲದೆ, ಅವಳಿ ನಗರಕ್ಕೆ 24/7 ಕುಡಿಯುವ ನೀರು ಸರಬರಾಜು ಯೋಜನೆಗೆ ಚಾಲನೆ ಹಾಗೂ ಅನಿಲಭಾಗ್ಯ ಫಲಾನುಭವಿಗಳಿಗೆ ಸ್ಟೌವ್ ಹಾಗೂ ಸಿಲಿಂಡರ್ ವಿತರಣೆಗೆ ರಾಜ್ಯದಲ್ಲೆ ಮೊದಲ ಬಾರಿಗೆ ಚಾಲನೆ ನೀಡಲಿದ್ದಾರೆ.
ಹಾಗೆಯೇ, ಐತಿಹಾಸಿಕ ಲಕ್ಕಂಡಿ ಪ್ರಾಧಿಕಾರಕ್ಕೂ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರವಿವಾರ ಸಿಂಗಟರಾಯನ ಕೆರೆ ಬಳಿ ಗದಗ ಬೆಟಗೇರಿ ಅವಳಿ ನಗರಗಳಿಗೆ ಎರಡನೆ ಹಂತದ ಕುಡಿಯುವ ನೀರಿನ ಯೋಜನೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಅಲ್ಲದೆ, ಅವಳಿ ನಗರಕ್ಕೆ 24/7 ಕುಡಿಯುವ ನೀರು ಸರಬರಾಜು ಯೋಜನೆಗೆ ಚಾಲನೆ ಹಾಗೂ ಅನಿಲಾಗ್ಯಫಲಾನುವಿಗಳಿಗೆ ಸ್ಟೌವ್ ಹಾಗೂ ಸಿಲಿಂಡರ್ ವಿತರಣೆಗೆ ರಾಜ್ಯದಲ್ಲೆ ಮೊದಲ ಬಾರಿಗೆ ಚಾಲನೆ ನೀಡಲಿದ್ದಾರೆ. ಹಾಗೆಯೇ, ಐತಿಹಾಸಿಕ ಲಕ್ಕಂಡಿ ಪ್ರಾಧಿಕಾರಕ್ಕೂ ಚಾಲನೆ ನೀಡಲಿದ್ದಾರೆ.
ಜಿಲ್ಲೆಯ ಪರಿಸರದ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿರುವ ಎಚ್.ಕೆ. ಪಾಟೀಲರು, ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಬೆಳೆದು ನಿಂತ ಮರಗಳನ್ನು ಕತ್ತರಿಸದೆ ಬೇರೆ ಸ್ಥಳದಲ್ಲಿ ಮರಗಳನ್ನು ಸ್ಥಳಾಂತರಿಸುವ ಕಾರ್ಯಕ್ರಮವನ್ನೂ ಹಮ್ಮಿಕೊಂಡಿದ್ದಾರೆ. ನಗರದ ಮುನ್ಸಿಪಲ್ ಕಾಲೇಜ್ ಆವರಣದಲ್ಲಿ ಕಾರ್ಯಕ್ರಮದ ಎಲ್ಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.







