ವಿದ್ಯಾರ್ಥಿಗಳಿಗೆ ಸರಕಾರದ ಸೌಲಭ್ಯಗಳ ವಿತರಣೆ

ಕಾರ್ಕಳ, ಜೂ.3: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳ ಕಛೇರಿ, ಕಾರ್ಕಳ ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸರಕಾರದ ಸೌಲಭ್ಯಗಳ ತಾಲೂಕು ಮಟ್ಟದ ವಿತರಣಾ ಸಮಾರಂಭ ನಡೆಯಿತು.
ಶಾಸಕ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ವಿ. ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ, ಸರಕಾರದ ಸೌಲಭ್ಯಗಳಾದ ಪಾಠಪುಸ್ತಕ, ಸಮವಸ್ತ್ರ, ಶೂ, ಬೈಸಿಕಲ್, ಕ್ಷೀರಭಾಗ್ಯ ಯೋಜನೆಗಳಿಗೆ ಚಾಲನೆ ನೀಡಿದರು.
ತಾ.ಪಂ.ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಪುರಸಭೆ ಅಧ್ಯಕ್ಷೆ ಅನಿತಾ ಅಂಚನ್, ಉಡುಪಿ ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಉದಯ್ ಎಸ್. ಕೋಟ್ಯಾನ್, ಪುರಸಭೆ ಉಪಾಧ್ಯಕ್ಷ ಗಿರಿಧರ ನಾಯ್ಕ, ಸದಸ್ಯ ಪ್ರಕಾಶ್ ರಾವ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಎ.ಪಿ.ಸಿ. ಸುಬ್ರಮಣ್ಯ ಭಟ್, ಕ್ಷೇತ್ರ ಸಮನ್ವಯಾಧಿಕಾರಿ ಭಾಸ್ಕರ್ ಪಿ., ಎಸ್‌ಡಿಎಂಸಿ ಅಧ್ಯಕ್ಷ ವಿಜಯರಾಜ್ ಶೆಟ್ಟಿ, ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳ ಪಾಲಕ-ಪೋಷಕರು, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.







