ಕಾರ್ಕಳ, ಜೂ.3: ತಾಲೂಕು ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯು ಶ್ರೀ ಶಾರದಾ ಕಲ್ಯಾಣ ಮಂಟಪದಲ್ಲಿ ಜೂ. 4ರಂದು ಬೆಳಗ್ಗೆ 9.30 ಗಂಟೆಯಿಂದ ನಡೆಯಲಿದೆ.
ತಾಲೂಕು ಬಿಜೆಪಿ ಅಧ್ಯಕ್ಷ ಮಣಿರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ವಿ. ಸುನಿಲ್ ಕುಮಾರ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಉಪಸ್ಥಿತರಿರುವರು.