ಥಾಯ್ಲ್ಯಾಂಡ್: ನಿಯಂತ್ರಣ ಕಳೆದುಕೊಂಡು ಮರಕ್ಕೆ ಢಿಕ್ಕಿಯಾದ ಕಾರು; ಭಾರತೀಯ ಮೃತ್ಯು

ಥಾಯ್ಲ್ಯಾಂಡ್, ಜೂ.3: ಕಾರೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಭಾರತೀಯನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಥಾಯ್ಲ್ಯಾಂಡ್ ನ ನಾಂಗ್ ಹಾಂಗ್ ಜಿಲ್ಲೆಯಲ್ಲಿ ನಡೆದಿದೆ.
ನಾಂಗ್ ಕಿಗೆ ತೆರಳುತ್ತಿದ್ದ ದಾರಿಯ ತಿರುವಿನಲ್ಲಿ ಕಾರು ನಿಯಂತ್ರಣ ಕಳೆದುಕೊಂಡಿದ್ದು, ರಸ್ತೆಯಿಂದ ಜಾರಿ ಮರಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಭಾರತೀಯ ಚಾಲಕ ಮೃತಪಟ್ಟಿದ್ದಾರೆ ಎಂದು ಬ್ಯಾಂಕಾಕ್ ಪೋಸ್ಟ್ ವರದಿ ಮಾಡಿದೆ.
ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತಿಬ್ಬರು ಭಾರತೀಯರು ಗಾಯಗೊಂಡಿದ್ದಾರೆ. ಮೃತರ ಹಾಗೂ ಗಾಯಾಳುಗಳ ಹೆಸರು ಇನ್ನೂ ತಿಳಿದುಬಂದಿಲ್ಲ.
Next Story





