ಚಾಂಪಿಯನ್ಸ್ ಟ್ರೋಫಿ: ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ

ಬರ್ಮಿಂಗ್ ಹ್ಯಾಮ್, ಜೂ.4: ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ವಿರುದ್ಧ ಟಾಸ್ ಜಯಿಸಿದ ಪಾಕಿಸ್ತಾನ ತಂಡ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಇಲ್ಲಿನ ಎಡ್ಜ್ ಬಾಸ್ಟನ್ ಸ್ಟೇಡಿಯಂನಲ್ಲಿ ರವಿವಾರ ನಡೆಯಲಿರುವ ಪಂದ್ಯದಲ್ಲಿ ಭಾರತದ ಬೌಲರ್ ಗಳಾದ ಆರ್. ಅಶ್ವಿನ್ ಹಾಗೂ ಮುಹಮ್ಮದ್ ಶಮಿ ಅವರನ್ನು ಆಡುವ 11ರ ಬಳಗದಿಂದ ಹೊರಗಿಡಲಾಗಿದೆ. ಜಸ್ಪ್ರಿತ್ ಬುಮ್ರಾ, ಉಮೇಶ್ ಯಾದವ್, ಭುವನೇಶ್ವರ ಕುಮಾರ್, ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜ ಅವರನ್ನೊಳಗೊಂಡ ಐವರು ಬೌಲರ್ ಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಪಾಕಿಸ್ತಾನ ತಂಡ ಫಹೀಮ್ ಅಶ್ರಫ್ ಬದಲಿಗೆ ಸ್ಪಿನ್ನರ್ ಶಾದಾಬ್ ಖಾನ್ಗೆ ಅವಕಾಶ ನೀಡಿದೆ.
Next Story





