Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೂ. 5: ದ.ಕ. ಜಿಲ್ಲಾ ಎಸ್ಸೆಸ್ಸೆಫ್‌ನಿಂದ...

ಜೂ. 5: ದ.ಕ. ಜಿಲ್ಲಾ ಎಸ್ಸೆಸ್ಸೆಫ್‌ನಿಂದ ’ನಾಳೆಗೊಂದು ನೆರಳು’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ4 Jun 2017 3:48 PM IST
share
ಜೂ. 5: ದ.ಕ. ಜಿಲ್ಲಾ ಎಸ್ಸೆಸ್ಸೆಫ್‌ನಿಂದ ’ನಾಳೆಗೊಂದು ನೆರಳು’ ಕಾರ್ಯಕ್ರಮ

 ಬಂಟ್ವಾಳ, ಜೂ. 4: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ’ನಾಳೆಗೊಂದು ನೆರಳು’ ಎಂಬ ಘೋಷ ವಾಕ್ಯದೊಂದಿಗೆ ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಜೂನ್ 5ರಂದು ಜಿಲ್ಲಾ ವ್ಯಾಪ್ತಿಯ ವಿವಿಧ ಕೇಂದ್ರಗಳಲ್ಲಿ ನಡೆಯುವ ಸಸಿ ವಿತರಣಾ ಸಮಾರಂಭದ ಉದ್ಘಾಟನಾ ಕಾರ್ಯಕ್ರಮ ರವಿವಾರ ಬಿ.ಸಿ.ರೋಡಿನಲ್ಲಿರುವ ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಕಚೇರಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆಎಸ್ಸಾರ್ಟಿಸಿ ಡಿಪ್ಪೊ ಮೆನೇಜರ್ ಇಸ್ಮಾಯೀಲ್, ಸಸಿ ನೆಡುವ ಕಾರ್ಯಕ್ರಮಗಳು ಸಾಂಕೇತಿಕಕ್ಕೆ ಸೀಮಿತವಾಗಿರದೆ, ನೆಟ್ಟ ಸಸಿಗಳನ್ನು ಪೋಷಿಸಿ ಬೆಳೆಸುವ ಕಾರ್ಯ ಪ್ರತೀಯೊಬ್ಬರಿಂದ ಆಗಬೇಕು ಎಂದು ಹೇಳಿದರು.

ಹೆಚ್ಚುತ್ತಿರುವ ತಾಪಮಾನದ ನಿಯಂತ್ರಣಕ್ಕೆ ಕಾಡು ಬೆಳೆಸುವುದೊಂದೇ ಪರಿಹಾರವಾಗಿದೆ. ಕಾಡು ಇದ್ದರೆ ಮಾತ್ರ ಮಳೆಯಾಗುತ್ತದೆ ಮತ್ತು ಜಲ ಸಂರಕ್ಷಣೆ ಸಾಧ್ಯವಾಗುತ್ತದೆ. ಪ್ರತೀ ಮನೆಯಲ್ಲಿ ವರ್ಷಕ್ಕೆ ಕನಿಷ್ಠ 1 ಗಿಡವನ್ನು ನೆಟ್ಟು ಬೆಳೆಸುವ ಕಾರ್ಯ ಆಗಬೇಕು ಎಂದು ಹೇಳಿದ ಅವರು, ಪರಿಸರ ಸಂರಕ್ಷಣೆಗಾಗಿ ಎಸ್ಸೆಸ್ಸೆಫ್ ಗಿಡ ನೆಡುವ ಕಾರ್ಯಕ್ರಮಕ್ಕೆ ಒತ್ತು ನೀಡುತ್ತಾ ಬಂದಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಮಾತನಾಡಿ, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಜಾಗತಿಕ ತಾಪಮಾನ ಜಗತ್ತಿಗೆ ಸವಾಲಾಗಿದೆ. ಪರಿಸರ ಸಮಾತೋಲನೆಗೆ ಮರಗಳನ್ನು ಬೆಳೆಸುವುದು ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಸ್ಸೆಸ್ಸೆಫ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಡಿವಿಶನ್‌ಗಳಲ್ಲಿ ಜೂನ್ 5ರಂದು ಹತ್ತು ಸಾವಿರ ಗಿಡಗಳನ್ನು ವಿತರಿಸುವ ಕಾರ್ಯ್ರಮ ಹಮ್ಮಿಕೊಳ್ಳಲಾಗಿದೆ ಎಂದರು.


ಪರಿಸರ ಮಾಲಿನ್ಯವಾದರೆ ಜನರು ಮಾರಕ ರೋಗಗಳಿಗೆ ತುತ್ತಾಗುತ್ತಾರೆ. ಇಸ್ಲಾಮ್ ಧರ್ಮವು ಪರಿಸರ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಿದೆ. ಪರಿಸರ ಮತ್ತು ಮನಸ್ಸನ್ನು ಶುದ್ದೀಕರಿಸುವುದು ವಿಶ್ವಾಸದ ಭಾಗವಾಗಿದೆ ಎಂದು ಪ್ರವಾದಿ ಮುಹಮ್ಮದ್ (ಸ.ಅ.) ಸಾರಿದ್ದಾರೆ ಎಂದು ಹೇಳಿದ ಅವರು ನಾಳೆ ಅಂತ್ಯದಿನ ಸಂಭವಿಸಲಿದೆ ಎಂದು ತಿಳಿದರೂ ಇಂದು ನೀನು ಗಿಡವನ್ನು ನೆಡು ಎಂದು ಪ್ರವಾದಿ ಮುಹಮ್ಮದ್ (ಸ.ಅ.) ಪ್ರತಿಪಾದಿಸಿರುವುದು ಇಸ್ಲಾಮ್ ಪರಿಸರಕ್ಕೆ ನೀಡಿರುವ ಮಹತ್ವವವನ್ನು ತಿಳಿಸುತ್ತದೆ ಎಂದು ಹೇಳಿದರು.


ಜೂನ್ 5ರಂದು ನಡೆಯುವ ಸಸಿ ವಿತರಣಾ ಕಾರ್ಯಕ್ರಮದ ಸಾಂಕೇತಿಕವಾಗಿ ಕಾರ್ಯಕ್ರಮದಲ್ಲಿ ಸಸಿಗಳನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಖಲಂದರ್ ಪದ್ಮುಂಜೆ, ಕೋಶಾಧಿಕಾರಿ ರಝಾಕ್ ಸಖಾಫಿ, ಎಸ್‌ವೈಎಸ್ ದಕ್ಷಿಣ ಕನ್ನಡ ಸದಸ್ಯ ಖಲೀಲ್ ಮುಸ್ಲಿಯಾರ್, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್ ಬಿ.ಸಿ.ರೋಡ್ ಉಪಸ್ಥಿತರಿದ್ದರು. ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅಲಿ ತುರ್ಕಲಿಕೆ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X