Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೃತ್ತಿಕಾ ಬೃಂದಾವನ ಪ್ರತಿಷ್ಠಾಪನಾ...

ಮೃತ್ತಿಕಾ ಬೃಂದಾವನ ಪ್ರತಿಷ್ಠಾಪನಾ ಸುವರ್ಣ ಮಹೋತ್ಸವ

ವಾರ್ತಾಭಾರತಿವಾರ್ತಾಭಾರತಿ4 Jun 2017 4:16 PM IST
share

ಚಿಕ್ಕಮಗಳೂರು,ಜೂ.4: ನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮೃತ್ತಿಕಾ ಬೃಂದಾವನ ಪ್ರತಿಷ್ಠಾಪನಾ ಸುವರ್ಣ ಮಹೋತ್ಸವ ಸಹಸ್ರಾರು ಭಕ್ತರ ನಡುವೆ ಭಾನುವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ವೈಭವದಿಂದ ನಡೆಯಿತು.


 ಬೆಳಿಗ್ಗೆ ಸುಪ್ರಭಾತ ಸೇವೆಯ ನಂತರ ಬೆಂಗಳೂರಿನ ಮಾಧ್ವ ಸಂಸ್ಥಾನದ ಶ್ರೀ ಸುವಿದ್ಯೇಂದ್ರತೀರ್ಥ ಸ್ವಾಮೀಜಿ ಅವರು ಶ್ರೀ ರಾಘವೇಂದ್ರಸ್ವಾಮಿಗಳ ಬೃಂದಾವನಕ್ಕೆ ಪಂಚ ಅಮೃತಗಳಾದ ಹಾಲು, ಮೊಸರು, ತುಪ್ಪ, ಜೇನುತುಪ್ಪ, ಸಕ್ಕರೆ ಮತ್ತು ವಿವಿಧ ಫಲಗಳಿಂದ ಸ್ವತಃ ಅಭಿಷೇಕ ನೆರವೇರಿಸಿದರು.


 ಇದೇ ವೇಳೆ ಶ್ರೀಮಠದ ವತಿಯಿಂದ ಶ್ರೀಗಳಿಗೆ ಪಾದಪೂಜೆ ಸಲ್ಲಿಸಲಾಯಿತು, ನಂತರ ಶ್ರೀ ಸುವಿದ್ಯೇಂದ್ರತೀರ್ಥ ಸ್ವಾಮೀಜಿ ಅವರು ಸಂಸ್ಥಾನ ಪೂಜೆ ನೆರವೇರಿಸಿದರು.ಈ ವೇಳೆ ಭಕ್ತರಿಂದ ಸಾಮೂಹಿಕ ಭಜನೆ, ಸ್ತೋತ್ರ ಪಠಣ ನಡೆಯಿತು. ಗುರುರಾಯರ ಪ್ರಾಕಾರೋತ್ಸವ, ಅಷ್ಟಾವಧಾನ ಸೇವೆ ಜರುಗಿತು. ಮಹಾಮಂಗಳಾರತಿ ನಂತರ ಶ್ರೀಗಳು ಭಕ್ತರಿಗೆ ಫಲ ಮಂತ್ರಾಕ್ಷತೆ ವಿತರಿಸಿದರು. ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.


 ಇದಕ್ಕೂ ಮುನ್ನ ಶನಿವಾರ ಸಂಜೆ ಶ್ರೀಮದ್ ಭಾಗವತದ ಸಾರ ವಿಷಯ ಕುರಿತು ಪ್ರವಚನ ನೀಡಿದ ಶ್ರೀ ಸುವಿದ್ಯೇಂದ್ರತೀರ್ಥ ಸ್ವಾಮೀಜಿ ಭಗವಂತನ ಧ್ಯಾನ ಮತ್ತು ಪುರಾಣ ಕಥೆಗಳ ಶ್ರವಣದಿಂದ ಮನುಷ್ಯ ತ್ರಿಕರಣಗಳು ಶುದ್ದವಾಗುತ್ತವೆ.ಸಂಚಿತ ಪಾಪದ ಪರಿಹಾರಕ್ಕಾಗಿ ಎಲ್ಲರೂ ಪ್ರತಿನಿತ್ಯ ಭಗಂತನ ನಾಮಸ್ಮರಣೆ ಮತ್ತು ಭಾಗವತದ ಶ್ರವಣ ಮಾಡಬೇಕು ಡಂದು ನುಡಿದರು.


 ಶ್ರೀ ರಾಘವೇಂದ್ರ ಗುರುಸಾರ್ವಭೌಮರು ದಯಾಸಮುದ್ರರು, ಮಹಾಕರುಣಾಳು, ಅದಮ್ಯ ಮಹಿಮರು ಮತ್ತು ಕಲಿಯುಗದ ಕಾಮಧೇನು ಕಲ್ಪವೃಕ್ಷ. ಶ್ರೀ ರಾಘವೇಂದ್ರಸ್ವಾಮಿಗಳ ಬೃಂದಾವನದಲ್ಲಿ ಶ್ರೀರಾಮ, ನರಸಿಂಹ, ವೇದ ವ್ಯಾಸ, ಕೃಷ್ಣ, ಹಯಗ್ರೀವ ಸೇರಿದಂತೆ ಅನೇಕ ದೇವತೆಗಳು ನೆಲೆಸಿದ್ದಾರೆ ಎಂದು ತಿಳಿಸಿದರು.


 ಸುವರ್ಣ ಮಹೋತ್ಸವದ ಅಂಗವಾಗಿ ನಡೆಸಲಾದ ಭಗವದ್ಗೀತೆ ಕಂಠ ಪಾಠ ಸ್ವರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.ಬೆಳಗಿನಿಂದ ಸಂಜೆಯವರೆಗೆ ಸಹಸ್ರಾರು ಭಕ್ತರು ಬೃಂದಾವನದ ದರ್ಶನ ಪಡೆದು ಪೂಜೆ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X