Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡ್ಯಾನ್ಸ್ ಮಾಡುತ್ತಿದ್ದ ಮದುಮಗ...

ಡ್ಯಾನ್ಸ್ ಮಾಡುತ್ತಿದ್ದ ಮದುಮಗ ಹೃದಯಾಘಾತಕ್ಕೆ ಬಲಿ

ವಾರ್ತಾಭಾರತಿವಾರ್ತಾಭಾರತಿ4 Jun 2017 4:24 PM IST
share
ಡ್ಯಾನ್ಸ್ ಮಾಡುತ್ತಿದ್ದ ಮದುಮಗ ಹೃದಯಾಘಾತಕ್ಕೆ ಬಲಿ

ಭಬುವಾ(ಬಿಹಾರ),ಜೂ.4: ಸ್ನೇಹಿತರೊಂದಿಗೆ ಡ್ಯಾನ್ಸ್ ಮಾಡುತ್ತಿದ್ದ ಮದುಮಗ ಹಸೆಮಣೆಯನ್ನೇರುವ ಕೆಲವೇ ಕ್ಷಣಗಳ ಮೊದಲು ಹೃದಯಾಘಾತದಿಂದ ಮೃತಪಟ್ಟ ದುರಂತ ಘಟನೆ ಕೈಮುರ್ ಜಿಲ್ಲೆಯ ಚೌಬೆಪುರ ಗ್ರಾಮದಲ್ಲಿ ಸಂಭವಿಸಿದೆ. ಪ್ರತ್ಯೇಕ ಘಟನೆಯಲ್ಲಿ ಸಂಭ್ರಮಾಚರಣೆಗಾಗಿ ಹಾರಿಸಿದ್ದ ಗುಂಡಿಗೆ ಮದುಮಗನ ಸೋದರ ಸಂಬಂಧಿ ಬಲಿಯಾದ ಘಟನೆ ರೋಹ್ತಾಸ್‌ನಲ್ಲಿ ನಡೆದಿದೆ.

ಕೈಮುರ್ ಜಿಲ್ಲಾಕೇಂದ್ರ ಭಬುವಾದಿಂದ ಸುಮಾರು 50 ಕಿ.ಮೀ.ದೂರದ ಸರಣಪುರ ಗ್ರಾಮದ ನಿವಾಸಿ ಶಶಿಕಾಂತ ಪಾಂಡೆ(25)ಯ ಮದುವೆ ಸಮೀಪದ ಚೌಬೆಪುರ ಗ್ರಾಮದಲ್ಲಿ ನಡೆಯಲಿತ್ತು. ವರನ ಕಡೆಯ ದಿಬ್ಬಣ ಮದುವೆಯ ಹಾಲ್‌ನೆದುರು ತಲುಪಿದಾಗ ಶಶಿಕಾಂತನ ಗೆಳೆಯರು ಅಲಂಕೃತ ಕಾರಿನಲ್ಲಿ ಆಸೀನನಾಗಿದ್ದ ಆತನನ್ನು ಹೊರಗೆಳೆದು ತಮ್ಮೊಂದಿಗೆ ಡ್ಯಾನ್ಸ್‌ನಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಭಾರೀ ಹೃದಯಾಘಾತದಿಂದಾಗಿ ಶಶಿಕಾಂತ ಕುಸಿದು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಶಶಿಕಾಂತ ತನ್ನ ತಂದೆಯ ನ್ಯಾಯಬೆಲೆ ಅಂಗಡಿಯನ್ನು ನೋಡಿಕೊಳ್ಳುತ್ತಿದ್ದ. ಆತನ ಸಾವು ಎರಡೂ ಕುಟುಂಬಗಳನ್ನು ದುಃಖದ ಮಡುವಲ್ಲಿ ತಳ್ಳಿದೆ.

ಅತ್ತ ರೋಹ್ತಾಸ್‌ನ ಗೊನಾಲಿಯಾ ತೋಲಾ ಗ್ರಾಮದಲ್ಲಿ ಸಂಭ್ರಮಾಚರಣೆಯ ಗುಂಡು ತಗುಲಿ ಮದುಮಗನ ಸೋದರ ಸಂಬಂಧಿ ಜಿತೇಂದ್ರ ಸಿಂಗ್(33) ಎಂಬಾತ ಮೃತಪಟ್ಟಿದ್ದಾನೆ. ಬಾರಾತ್‌ನಲ್ಲಿ ಹೆಣ್ಣುಮಕ್ಕಳು ನರ್ತನದಲ್ಲಿ ತೊಡಗಿದ್ದು ಭಾರೀ ಸಂಭ್ರಮ ಮನೆ ಮಾಡಿತ್ತು. ಈ ವೇಳೆ ಕೈಗಳಲ್ಲಿ ರೈಫಲ್ ಮತ್ತು ನಾಡಪಿಸ್ತೂಲುಗಳನ್ನು ಹಿಡಿದಿದ್ದ ಮೂವರು ಪಾನಮತ್ತ ಯುವಕರು ಬಾರಾತ್‌ನಲ್ಲಿ ಸೇರಿಕೊಂಡಿದ್ದರು. ಬಳಿಕ ನರ್ತನ ನಡೆಯುತ್ತಿದ್ದ ವೇದಿಕೆಗೆ ತೆರಳಿ ಸಂಭ್ರಮಾಚರಣೆಗೆ ಗುಂಡುಗಳನ್ನು ಹಾರಿಸತೊಡಗಿದ್ದರು. ವೇದಿಕೆಗೆ ತೆರಳಿದ್ದ ಸಿಂಗ್ ಗುಂಡು ಹಾರಾಟವನ್ನು ಆಕ್ಷೇಪಿಸಿ ಆ ಮೂವರನ್ನು ಬಲವಂತ ದಿಂದ ಕೆಳಗಿಳಿಸಿದ್ದ.

ಅದರೆ ಯುವಕರು ವೇದಿಕೆಯತ್ತಲೇ ಗುಂಡು ಹಾರಿಸಿದ್ದು, ಅದಕ್ಕೆ ಸಿಂಗ್ ಬಲಿಯಾಗಿದ್ದಾನೆ.

ಘಟನೆಯ ಬಳಿಕ ಪರಾರಿಯಾಗಲು ಯತ್ನಿಸಿದ್ದ ಯುವಕರನ್ನು ಗ್ರಾಮಸ್ಥರು ಬೆನ್ನಟ್ಟಿದ್ದು, ಇಬ್ಬರು ಸಿಕ್ಕಿಬಿದ್ದರೆ ಇನ್ನೋರ್ವ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ. ಇಬ್ಬರನ್ನೂ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು ಅವರನ್ನು ಪೊಲಿಸರಿಗೆ ಒಪ್ಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X