ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಪುತ್ತೂರು : ಉಪನ್ಯಾಸಕರೊಬ್ಬರ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದಲ್ಲಿರುವ ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಎಂಬಲ್ಲಿ ರವಿವಾರ ಸಂಭವಿಸಿದೆ. ವಳಚ್ಚಿಲ್ ಖಾಸಗಿ ಕಾಲೇಜಿನ ಉಪನ್ಯಾಸಕ ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ವಿಷ್ಣುಮೂರ್ತಿ ದೇವಾಲಯ ಬಳಿಯ ನಿವಾಸಿ ಯು. ನಾರಾಯಣ ಬೈಪಾಡಿತ್ತಾಯ ಎಂಬವರ ಪತ್ನಿ ಗಂಗಾರತ್ನ (48) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಕಳೆದ ಕೆಲವು ಸಮಯದಿಂದ ಗಂಗಾರತ್ನ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದರೂ ಗುಣಮುಖರಾಗಿರಲಿಲ್ಲ ಎನ್ನಲಾಗಿದೆ. ಇದೇ ಕಾರಣದಿಂದಾಗಿ ಮಾನಸಿಕ ಖಿನ್ನತೆಗೊಳಗಾಗಿದ್ದ ಗಂಗಾರತ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಘಟನೆಯ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





