ಮಿರ್ಝಾಪುರದಲ್ಲಿ ಮಾಜಿ ಪ್ರಧಾನಿ ರಾಜೀವ ಗಾಂಧಿ ಪ್ರತಿಮೆಗೆ ಹಾನಿ

ಮಿರ್ಝಾಪುರ(ಉ.ಪ್ರ),ಜೂ.4: ಇಲ್ಲಿಯ ಆವಾಸ್ ವಿಕಾಸ್ ಕಾಲನಿಯ ಉದ್ಯಾನವನದಲ್ಲಿ ಸ್ಥಾಪಿಸಲಾಗಿರುವ ಮಾಜಿ ಪ್ರಧಾನಿ ರಾಜೀವ ಗಾಂಧಿ ಅವರ ಪ್ರತಿಮೆಗೆ ಅಪರಿಚಿತ ದುಷ್ಕರ್ಮಿಗಳು ಹಾನಿಯನ್ನುಂಟು ಮಾಡಿರುವುದು ರವಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಈ ಸಂಬಂಧ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿರುವು ದಾಗಿ ಎಸ್‌ಪಿ ಆಶಿಷ್ ತಿವಾರಿ ತಿಳಿಸಿದರು.
ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕಾಂಗ್ರೆಸ್ ನಿಯೋಗವೊಂದು ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಮತ್ತು ಅವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಹೇರುವಂತೆ ಆಗ್ರಹಿಸಿದೆ.
ಪಕ್ಷದ ರಾಜ್ಯಾಧ್ಯಕ್ಷ ರಾಜ್ ಬಬ್ಬರ್ ಅವರು ಸೋಮವಾರ ಇಲ್ಲಿಗೆ ಆಗಮಿಸಲಿದ್ದು, ಬಳಿಕ ಮುಂದಿನ ಕ್ರಮವನ್ನು ನಿರ್ಧರಿಸುವುದಾಗಿ ಮಾಜಿ ಕಾಂಗ್ರೆಸ್ ಶಾಸಕ ಲಲಿತೇಶಪತಿ ತ್ರಿಪಾಠಿ ಅವರು ತಿಳಿಸಿದರು.
Next Story





