ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

ಕುಂದಾಪುರ, ಜೂ.4: ವಡೇರಹೋಬಳಿ ಗ್ರಾಮದ ಕಲ್ಲಾಗಾರ ನಿವಾಸಿ ಜಿ.ಗಣಪಯ್ಯ ಎಂಬವರ ಮಗಳು ಅನಿತಾ(40) ಎಂಬವರು ಜೂ.4ರಂದು ಬೆಳಗಿನ ಜಾವ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ:ಅನಾರೋಗ್ಯದಿಂದ ಬಳಲುತ್ತಿದ್ದ ಹಿರೆಬೆಟ್ಟು ನಿವಾಸಿ ಕುಟ್ಟಿ ಶೆಟ್ಟಿ(69) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.3ರಂದು ರಾತ್ರಿ ಮನೆಯ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಂದೂರು: ವಿಪರೀತ ಮದ್ಯ ಸೇವನೆ ಚಟದಿಂದ ಜೀವನದಲ್ಲಿ ಜಿಗುಪ್ಸೆ ಗೊಂಡು ಊಟದೊಂದಿಗೆ ಇಲಿ ಪಾಷಾಣ ಸೇರಿಸಿ ತಿಂದು ಆತ್ಮಹತ್ಯೆಗೆ ಯತ್ನಿಸಿದ್ದ ಕಿರಿಮಂಜೇಶ್ವರ ಜನತಾ ಕಾಲೋನಿಯ ಮಹಮ್ಮದ್ ಶರೀಫ್(29) ಎಂಬ ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





