Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೌಢ್ಯ ಪ್ರತಿಬಂಧಕ ಕಾಯ್ದೆ ಮಂಡನೆ:...

ಮೌಢ್ಯ ಪ್ರತಿಬಂಧಕ ಕಾಯ್ದೆ ಮಂಡನೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ5 Jun 2017 10:10 PM IST
share
ಮೌಢ್ಯ ಪ್ರತಿಬಂಧಕ ಕಾಯ್ದೆ ಮಂಡನೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು, ಜೂ.5: ರಾಜ್ಯ ಸರಕಾರವು ಮೂಢ ನಂಬಿಕೆ ಪ್ರತಿಬಂಧಕ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಸೋಮವಾರ ವಿಧಾನಸಭೆಯಲ್ಲಿ ಭೋಜನ ವಿರಾಮದ ಬಳಿಕ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ನಿಯಮ 69ರಡಿಯಲ್ಲಿ ಬರಗಾಲದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡುವ ವೇಳೆ ಮಧ್ಯಪ್ರವೇಶಿಸಿ ಅವರು ಈ ಹೇಳಿಕೆ ನೀಡಿದರು.

ಮೂಢನಂಬಿಕೆ ಪ್ರತಿಬಂಧಕ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಿದ ಬಳಿಕ ನಂಬಿಕೆ ಹಾಗೂ ಮೂಢ ನಂಬಿಕೆಗಳ ಕುರಿತು ಚರ್ಚೆ ಮಾಡೋಣ. ವೈಯಕ್ತಿಕವಾಗಿ ನಾನು ಮೌಢ್ಯಗಳನ್ನು ವಿರೋಧಿಸುತ್ತೇನೆ. ನಂಬಿಕೆ ಎಂಬುದು ವೈಯಕ್ತಿಕ. ಆದರೆ, ಅಂತಹ ನಂಬಿಕೆಗಳಿಂದ ಸಮಾಜದ ಶೋಷಣೆ ಹಾಗೂ ಹಾನಿಯಾದರೆ ಅವು ಮೌಢ್ಯಗಳಾಗುತ್ತವೆ ಎಂದು ಮುಖ್ಯಮಂತ್ರಿ ಹೇಳಿದರು.

ಮಳೆಗಾಗಿ ಪೂಜೆ, ಹೋಮ ಮಾಡಿರುವುದು ಸಚಿವ ಎಂ.ಬಿ.ಪಾಟೀಲರ ವೈಯಕ್ತಿಕ ನಂಬಿಕೆ. ಅವರು ಸಚಿವರಾಗಿ ಈ ಹೋಮ ಮಾಡಿಸಿಲ್ಲ. ಸ್ವಂತ ಖರ್ಚಿನಲ್ಲಿ ಮಾಡಿದ್ದಾರೆ. ಇದಕ್ಕಾಗಿ ರಾಜ್ಯ ಸರಕಾರದಿಂದ ಯಾವುದೆ ರೀತಿಯ ಆರ್ಥಿಕ ನೆರವನ್ನು ಒದಗಿಸಿಲ್ಲ. ತಲಕಾವೇರಿಯಲ್ಲಿ ಪೂಜೆ ಮಾಡಿಸಿದ್ದನ್ನೆ ಅಪರಾಧವೆಂದು ಬಿಂಬಿಸಬೇಡಿ ಎಂದು ಸಿದ್ದರಾಮಯ್ಯ ತಿಳಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯ ಕೆ.ಜಿ.ಬೋಪಯ್ಯ, ಸಚಿವರ ಆಗಮನಕ್ಕಿಂತ ಮುಂಚೆಯೆ ಇಲಾಖೆಯ ಮುಖ್ಯ ಎಂಜಿನಿಯರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ತಲಕಾವೇರಿಯಲ್ಲಿ ಉಪಸ್ಥಿತರಿದ್ದು, ಅನ್ನದಾನ ಎಲ್ಲ ಮಾಡಿದ್ದಾರೆ ಎಂದರು.

ಸಚಿವರು ಭೇಟಿ ನೀಡುತ್ತಿದ್ದಾರೆ ಎಂಬ ಕಾರಣಕ್ಕೆ ಅಧಿಕಾರಿಗಳು ತಲಕಾವೇರಿಗೆ ಹೋಗಿದ್ದಾರೆ. ನೀವು ಸಚಿವರಾಗಿ ಕೆಲಸ ಮಾಡಿಲ್ಲ, ಆದುದರಿಂದ, ಅದರ ಬಗ್ಗೆ ನಿಮಗೆ ಗೊತ್ತಾಗುವುದಿಲ್ಲ. ನೀವು ಆ ಪೂಜೆಗೆ ಹೋಗದೆ ಇದ್ದರೆ, ಅಲ್ಲಿ ಯಾರು ಯಾರು ಉಪಸ್ಥಿತರಿದ್ದರು ಎಂಬ ಮಾಹಿತಿ ಹೇಗೆ ಗೊತ್ತಾಯಿತು ಎಂದು ಮುಖ್ಯಮಂತ್ರಿ ಕೆಣಕಿದರು.

ಅದಕ್ಕೆ ಉತ್ತರಿಸಿದ ಕೆ.ಜಿ.ಬೋಪಯ್ಯ, ನಿಮ್ಮ ಮಾದರಿಯಲ್ಲೆ ನಮಗೂ ಮಾಹಿತಿಯ ಮೂಲಗಳು ಇರುತ್ತವೆ. ಆ ಮೂಲಕ ನಮಗೆ ಅಂದು ಪೂಜೆಯಲ್ಲಿ ಯಾರೂ ಯಾರೂ ಪಾಲ್ಗೊಂಡಿದ್ದರು. ಯಾರು ಯಾರಿಗೆ ಅನ್ನದಾನ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಿದೆ ಎಂದರು.

ಆನಂತರ ಮಾತನಾಡಿದ ಬಿಜೆಪಿ ಸದಸ್ಯ ಸಿ.ಟಿ.ರವಿ, ಎಂ.ಬಿ.ಪಾಟೀಲ್ ಪರ್ಜನ್ಯ ಹೋಮ ಮಾಡಿದ್ದಕ್ಕೆ ಖಂಡಿತ ನನ್ನ ಬೆಂಬಲವಿದೆ. ನಮ್ಮನ್ನು ಮೀರಿದ ಅಲೌಕಿಕವಾದ ಶಕ್ತಿ ಇದೆ ಅದನ್ನು ನಾನು ನಂಬುತ್ತೇನೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಯಾವ ಆಚರಣೆಗಳಿಂದ ಸಮಾಜಕ್ಕೆ ಹಾನಿ, ಶೋಷಣೆ ಆಗುತ್ತದೆಯೋ ಅದು ಮೌಢ್ಯ. ಅದನ್ನು ವಿರೋಧಿಸಬೇಕು. ಪೂಜೆ ಮಾಡುವುದರಿಂದ ಸಮಾಜಕ್ಕೆ ಯಾವ ಹಾನಿ ಆಗುವುದಿಲ್ಲ. ತಿರುಪತಿಗೆ ಹೋಗಿ ಬರುವುದು ನಂಬಿಕೆ. ಪೂಜೆ ಮಾಡುವುದು, ದೇವರು ಇದ್ದಾನೆ ಎಂಬುದು ನಂಬಿಕೆ. ಅದರಿಂದ, ಸಮಾಜಕ್ಕೆ ಹಾನಿ ಇಲ್ಲ ಎಂದಾದರೆ ನಾವು ವಿರೋಧಿಸುವುದರಲ್ಲಿ ಅರ್ಥವಿಲ್ಲ ಎಂದರು.

ಇದಕ್ಕೂ ಮುನ್ನ ಮಾತನಾಡಿದ ಜಗದೀಶ್ ಶೆಟ್ಟರ್, ಬರ ಪರಿಹಾರಕ್ಕೆ ಎಂ.ಬಿ.ಪಾಟೀಲ್ ಪರ್ಜನ್ಯ ಹೋಮದ ಪರಿಹಾರ ಕಂಡುಕೊಂಡಿದ್ದಾರೆ. ಬಸವಣ್ಣನ ಕರ್ಮಭೂಮಿಯಿಂದ ಬಂದ ಸಚಿವರು ಈ ರೀತಿ ಮಾಡುವುದು ಸರಿಯೇ, ಮುಖ್ಯಮಂತ್ರಿ ಇಷ್ಟಾದರೂ ಏಕೆ ಸುಮ್ಮನಿದ್ದಾರೆ. ಜಯಚಂದ್ರ ಅವರು ಎಂ.ಬಿ.ಪಾಟೀಲರ ಕಿವಿ ಹಿಂಡಬೇಕು. ಅವರು ವೈಯಕ್ತಿಕ ಎಂದು ಹೇಳುವುದಾದರೆ ಅವರನ್ನು ಸಚಿವ ಸ್ಥಾನದಿಂದ ತೆಗೆಯಿರಿ ಎಂದು ಆಗ್ರಹಿಸಿದರು.

ಮೌಢ್ಯ ನಿಷೇಧ ಕಾಯ್ದೆ ಜಾರಿಗೆ ತರುವುದಾಗಿ ಮೂರು ವರ್ಷಗಳಿಂದ ಮುಖ್ಯಮಂತ್ರಿ ಹೇಳುತ್ತಲೆ ಇದ್ದಾರೆ. ವೈಯಕ್ತಿಕವಾಗಿ ನಾನು ಬಸವಣ್ಣನ ಅನುಯಾಯಿ. ಮೌಢ್ಯವನ್ನು ವಿರೋಧಿಸುತ್ತೇನೆ. ತಾನು ಮುಖ್ಯಮಂತ್ರಿಯಾಗಿದ್ದ ವೇಳೆ 10 ತಿಂಗಳ ಅಧಿಕಾರವಧಿಯಲ್ಲಿ ಮೂರು ಬಾರಿ ಚಾಮರಾಜನಗರಕ್ಕೆ ಭೇಟಿ ನೀಡಿದ್ದೇನೆ ಎಂದು ಅವರು ಹೇಳಿದರು.

ತಿರುಪತಿ, ಕೊಲ್ಲೂರಿಗೆ ಹೋಗಿ ದೇವರ ದರ್ಶನ ಮಾಡಿ ಬರುವುದು ನಂಬಿಕೆ. ಆದರೆ, ಅಲ್ಲಿಗೆ ಹೋದ್ರೆ ಮಾತ್ರ ಒಳ್ಳೆಯದಾಗುತ್ತದೆ ಎಂಬುದು ಮೂಢ ನಂಬಿಕೆ. ವೈಯಕ್ತಿಕವಾಗಿ ನೀವು ಏನೇ ಮಾಡಿದರೂ ಅದು ನಂಬಿಕೆ. ಆದರೆ, ಸಾರ್ವಜನಿಕ ಜೀವನದಲ್ಲಿ ಇರುವವರು ಮೂಢ ನಂಬಿಕೆಗಳನ್ನು ಪ್ರೋತ್ಸಾಹಿಸಬಾರದು ಎಂದು ಶೆಟ್ಟರ್ ಹೇಳಿದರು.

ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಸತತ ಬರಗಾಲವಿದೆ. 160 ತಾಲೂಕುಗಳನ್ನು ಸರಕಾರ ಬರಪೀಡಿತ ಎಂದು ಘೋಷಿಸಿದೆ. ಮಳೆಗಾಗಿ ಪರ್ಜನ್ಯ ಯಾಗ ಮಾಡುವ ಆಲೋಚನೆ ಜಲಸಂಪನ್ಮೂಲ ಸಚಿವರಿಗೆ ಕೊನೆಯ ವರ್ಷವೇ ಯಾಕೆ ಹೊಳೆದಿದೆ. ಆರಂಭಿಕ ವರ್ಷಗಳಲ್ಲಿ ಯಾಕೆ ಈ ಪ್ರಯತ್ನ ಮಾಡಲಿಲ್ಲ ಎಂದು ಅವರು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X