Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರೀಕೃತ ಅಡುಗೆ ವಿರೋಧಿ ಜೂ.7ಕ್ಕೆ...

ಕೇಂದ್ರೀಕೃತ ಅಡುಗೆ ವಿರೋಧಿ ಜೂ.7ಕ್ಕೆ ಬಿಸಿಯೂಟ ನೌಕರರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ5 Jun 2017 10:50 PM IST
share

ಬೆಂಗಳೂರು, ಜೂ. 5: ಬಿಸಿಯೂಟ ಯೋಜನೆಯನ್ನು ‘ಕೇಂದ್ರೀಕೃತ ಅಡುಗೆ’ ವ್ಯಾಪ್ತಿಯಲ್ಲಿ ತರಲು ಉದ್ದೇಶಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಸ ನೌಕರರ ಸಂಘಟನೆಯಿಂದ ಜೂ.7 ರಂದು ಸಂಸದರ ಮನೆ ಮುಂದೆ ಧರಣಿ ಮತ್ತು ಜೂ.13 ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಸರಕಾರದ ಎಂಎಚ್‌ಆರ್‌ಡಿ ಇಲಾಖೆಯ ನೂತನ ಕಾರ್ಯದರ್ಶಿಗಳು ಪೂರ್ವಯೋಜಿತ ಚರ್ಚೆ ನಡೆಸದೇ ಏಕಾಏಕಿ ಅಧಿಕಾರ ಸ್ವೀಕರಿಸದ ಕೆಲವೇ ದಿನಗಳಲ್ಲಿ ಕೇಂದ್ರೀಕೃತ ಅಡುಗೆ ತಯಾರಿಸಲು ನೇರವಾದ ತಿದ್ಧುಪಡಿಗೆ ಸಹಿ ಮಾಡಿದ್ದಾರೆ. ಇದರಿಂದ ಸಾವಿರಾರು ಮಹಿಳೆಯರು ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಅಲ್ಲದೆ, ಈ ನೀತಿಯನ್ನು ವಿರೋಧಿಸಬೇಕಾದ ರಾಜ್ಯ ಸರಕಾರ ಕೇಂದ್ರದ ನಿಯಮಕ್ಕೆ ಬೆಂಬಲ ವ್ಯಕ್ತಪಡಿಸಿದೆ ಎಂದು ಸಂಘದ ಅಧ್ಯಕ್ಷೆ ವರಲಕ್ಷ್ಮಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಮಕ್ಕಳ ಹಾಜರಾತಿ ಹೆಚ್ಚಿಸಲು, ಮಧ್ನಾಹ್ನದ ನಂತರದ ಚಟುವಟಿಕೆಯಲ್ಲಿ ಮಕ್ಕಳು ಸಕ್ರಿಯವಾಗಿ ಭಾಗವಹಿಸುವ ಉದ್ದೇಶದಿಂದ 2001ರಲ್ಲಿ ಸುಪ್ರಿಂ ಕೋರ್ಟ್‌ನ ಆದೇಶದಂತೆ ಅಂದಿನ ಕೇಂದ್ರ ಸರಕಾರ ಬಿಸಿಯೂಟ ಯೋಜನೆಯನ್ನು ಜಾರಿ ಮಾಡಲಾಗಿದೆ.ಇದಕ್ಕಾಗಿ ಕೇಂದ್ರದಿಂದ 1,900 ಕೋಟಿ ರೂ.ಹಾಗೂ ರಾಜ್ಯ ಸರಕಾರ 1,300 ಕೋಟಿ ರೂ.ಗೂ ಅಧಿಕ ಹಣವನ್ನು ವಾರ್ಷಿಕ ಖರ್ಚು ಮಾಡುತ್ತಿತ್ತು. ಆದರೆ, 2013ರಲ್ಲಿ ಕೇಂದ್ರದಲ್ಲಿ ಸರಕಾರ ಬದಲಾದ ನಂತರ ಬಿಸಿಯೂಟ ಸೇರಿದಂತೆ ಹಲವು ಸಾಮಾಜಿಕ ಕಲ್ಯಾಣ ಯೋಜನೆಗಳ ಅನುದಾನ ವೆಚ್ಚವನ್ನು ಕಡಿತ ಮಾಡಲು ಮುಂದಾಗಿದೆ ಎಂದರು.

2012 ರಲ್ಲಿ ಕೇಂದ್ರ ಸರಕಾರ ತ್ರಿಪಕ್ಷೀಯ ಸಮಿತಿಯಿಂದ ಐಎಲ್‌ಸಿ ಭಾರತೀಯ ಕಾರ್ಮಿಕ ಸಮ್ಮೇಳನದಲ್ಲಿ ಬಿಸಿಯೂಟ ಯೋಜನೆಯಲ್ಲಿ ದುಡಿಯುವ ಮಹಿಳೆಯರನ್ನು ಸರಕಾರಿ ಕೆಲಸಗಾರರು ಎಂದು ಗುರುತಿಸಿ, ಕನಿಷ್ಟ ವೇತನ ಹಾಗೂ ಸಾಮಾಜಿಕ ಭದ್ರತೆ ನೀಡಬೇಕು ಎಂದು ನಿರ್ದೇಶನ ನೀಡಿದೆ. ಆದರೆ, ಇದನ್ನು ಜಾರಿ ಮಾಡಲು ಕೇಂದ್ರ ಸರಕಾರ ಮುಂದಾಗಿಲ್ಲ. ಅಲ್ಲದೆ, ಬಿಸಿಯೂಟ ಯೋಜನೆಗೆ ಖರ್ಚು ಅಧಿಕವಾಗುತ್ತಿದೆ ಎಂಬ ನೆಪವೊಡ್ಡಿ ಇದನ್ನು ಖಾಸಗೀಕರಣ ಮಾಡುವ ಹುನ್ನಾರ ಮಾಡಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರೀಕೃತ ಅಡಿಗೆ ಕೇಂದ್ರಗಳನ್ನು ಖಾಸಗಿಯವರಿಗೆ ಒಪ್ಪಿಸುವುದರಿಂದ ಮಹಿಳೆಯರು ಕೆಲಸ ಕಳೆದುಕೊಳ್ಳುವುದರ ಜೊತೆಗೆ 40-50 ಶಾಲೆಗಳಿಗೆ ಒಂದು ಸ್ಥಳದಿಂದ ಆಹಾರ ಸರಬರಾಜು ಮಾಡಲಾಗುತ್ತದೆ. ಇದು ಬಿಸಿಯೂಟ ಯೋಜನೆಯ ಮೂಲ ಉದ್ದೇಶಕ್ಕೆ ಹೊಡೆತ ಬೀಳಲಿದೆ. ಆದುದರಿಂದ ಕೇಂದ್ರ ಸರಕಾರ ಕೂಡಲೇ ಇದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಬಿಸಿಯೂಟ ಯೋಜನೆಯಲ್ಲಿ ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಉತ್ತಮವಾಗಿ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ. ಹೀಗಾಗಿ ಸರಕಾರ ಕೇಂದ್ರ ನಿಯಮ ತಿದ್ಧುಪಡಿ ಅಂಗೀಕರಿಸಿ ಒಪ್ಪಿಗೆ ಸೂಚಿಸಿರುವುದನ್ನು ಹಿಂಪಡೆಯಬೇಕು ಎಂದರು.

ಜೂ.7 ರಂದು ಎಲ್ಲ ಸಂಸದರ ಮನೆ ಮುಂದೆ ಧರಣಿ ನಡೆಸಿ ಮನವರಿಕೆ ಮಾಡಿಕೊಡಲಾಗುತ್ತದೆ. ಜೊತೆಗೆ, ವಿಧಾನಸೌಧ ಚಲೋ ಮೂಲಕ ರಾಜ್ಯ ಸರಕಾರ ತೀರ್ಮಾನವನ್ನು ಖಂಡಿಸಲಾಗುತ್ತದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X