ಟೆಕ್ಕಿ ಮನೆಯಲ್ಲಿ ಕಳವು
ಬೆಂಗಳೂರು, ಜೂ.5: ಸಾಫ್ಟ್‌ವೇರ್ ಇಂಜಿನಿಯರೊಬ್ಬರ ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು ಮಾಡಿರುವ ಘಟನೆ ಇಲ್ಲಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಎಂ.ಸಿ.ಲೇಔಟ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಎಸ್.ಆರ್.ಸುಂದರ್ ಎಂಬುವರು, ಎರಡು ದಿನದ ಹಿಂದೆ ಸಹೋದರನ ಮನೆಗೆ ಹೋಗಿದ್ದ ವೇಳೆ ಮನೆಯ ಬೀಗ ಒಡೆದು ಒಳನುಗ್ಗಿರುವ ದುಷ್ಕರ್ಮಿಗಳು ಮನೆಯಲ್ಲಿದ್ದ ವಸ್ತುಗಳನ್ನೆಲ್ಲಾ ಚಿಲ್ಲಾಪಿಲ್ಲಿ ಮಾಡಿ 25 ಸಾವಿರ ರೂ.ಮತ್ತು ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ರವಿವಾರ ಸಂಜೆ ಸುಂದರ್ ಅವರು ಮನೆಗೆ ಬಂದಾಗ ಮನೆಯಲ್ಲಿ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದ್ದು, ವಿಜಯನಗರ ಪೊಲೀಸರಿಗೆ ತಿಳಿಸಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story





