ದ ಕ. ಜಿಲ್ಲಾ ಪಂಚಾಯತ್ : ವಿಶ್ವ ಪರಿಸರ ದಿನಾಚರಣೆ

ಮಂಗಳೂರು, ಜೂ. 5: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮತ್ತು ರಾಮಕೃಷ್ಣ ುಷನ್ ಮಂಗಳೂರು ಸಹಯೋಗದಲ್ಲಿ ಮಂಗಳೂರು ತಾಲೂಕಿನ ತಲಪಾಡಿ, ಸೋಮೇಶ್ವರ, ಮುನ್ನೂರು, ಬೆಳ್ಮ, ಕೊಣಾಜೆ, ಮಂಜನಾಡಿ, ಮಳವೂರು, ಅಡ್ಯಾರ್, ನೀರುಮಾರ್ಗ, ಬಜ್ಪೆ, ಗುರುಪುರ, ಕಂದಾವರ, ಪುತ್ತಿಗೆ, ಪಡುಪೆರಾರ, ಗಂಜಿಮಠ, ಎಡಪದವು, ಬಡಗಎಡಪದವು, ತೆಂಕುಜಾರು, ಕುಪ್ಪೆಪದವು ಗ್ರಾಮ ಪಂಚಾಯತ್‌ಗಳು ಹಾಗೂ ಬಂಟ್ವಾಳ ತಾಲೂಕಿನ ಕುರ್ನಾಡು, ಗೋಳ್ತಮಜಲು, ಕಳ್ಳಿಗೆ, ಪುದು, ತುಂಬೆ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯ ರಾಷ್ಟ್ರೀಯ/ರಾಜ್ಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ಬಿದ್ದಿರುವ ತ್ಯಾಜ್ಯವನ್ನು ತೆಗೆಯುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ನೂತನವಾಗಿ ಆಚರಿಸಿ ಜನರಿಗೆ ಜಾಗೃತಿಯನ್ನು ಮೂಡಿಸಲಾಯಿತು.
ಕಾರ್ಯಕ್ರಮವು ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್‌ನಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಚಾಲನೆ ನೀಡಿದರು. ಸ್ವಚ್ಚ ಮಂಗಳೂರು ಅಭಿಯಾನ, ರಾಮಕೃಷ್ಣ ುಷನ್ ಮಂಗಳಾದೇವಿ ಇದರ ಸಂಚಾಲಕ ಸ್ವಾಮೀಜಿ ಏಕಗಮ್ಯಾನಂದ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಮ್.ಆರ್.ರವಿ ಮತ್ತು ಸಂಬಂಧಪಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸರ್ವ ಸದಸ್ಯರು, ಸ್ವಯಂ ಸೇವಾ ಸಂಘ, ಸಂಸ್ಥೆಗಳು, ವಿದ್ಯಾಸಂಸ್ಥೆಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ವರ್ಗದವರು ಸ್ವಚ್ಚತಾ ಕಾರ್ಯದಲ್ಲಿ ತೊಡಗಿಕೊಂಡರು.
ರಸ್ತೆ ಬದಿಯಲ್ಲಿರುವ ತ್ಯಾಜ್ಯವನ್ನು ವಿಲೇವಾರಿ ಮಾಡಿದ ನಂತರ ಆ ಸ್ಥಳದಲ್ಲಿ ಅರಣ್ಯ ಇಲಾಖೆಯಿಂದ ಒದಗಿಸಿದ ಸಸಿಗಳನ್ನು ನೆಟ್ಟು, ಸ್ವಚ್ಚತೆ ಕಾಪಾಡಲು ಸೂಚನಾ ಫಲಕಗಳನ್ನು ಅಳವಡಿಸಲಾಯಿತು. ಕೋಟೆಕಾರು ಪಟ್ಟಣ ಪಂಚಾಯತ್ ಮತ್ತು ಬಂಟ್ವಾಳ ನಗರ ಸಭೆ ಹಾಗೂ ಮಂಗಳೂರು ಮತ್ತು ಬಂಟ್ವಾಳ ತಾಲೂಕಿನ 25 ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಆಂದೋಲನ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಜನಪ್ರತಿನಿಧಿಗಳು, ಶಾಲಾ ವಿದ್ಯಾರ್ಥಿಗಳು, ಸಂಘ, ಸಂಸ್ಥೆಗಳು ಹಾಗೂ ಅಧಿಕಾರಿಗಳು ಸೇರಿದಂತೆ ಅಂದಾಜು 2500 ಕ್ಕಿಂತ ಅಧಿಕ ಸಂಖ್ಯೆಯಲ್ಲಿ ಶ್ರಮದಾನದಲ್ಲಿ ಪಾಲ್ಗೊಂಡರು.
10 ಜೆ.ಸಿ.ಬಿ. ಮತ್ತು 35 ಟಿಪ್ಪರ್, ಲಾರಿಗಳಲ್ಲಿ 65 ಲೋಡ್ ಕಸಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.







