ಭಟ್ಕಳದಲ್ಲಿ ಬಸ್-ಲಾರಿ ಮುಖಾಮುಖಿ ಢಿಕ್ಕಿ: 7 ಮಂದಿಗೆ ಗಂಭೀರ ಗಾಯ

ಭಟ್ಕಳ, ಜೂ.7: ಖಾಸಗಿ ವಿಲಾಸಿ ಬಸ್ ಮತ್ತು ಲಾರಿಯೊಂದರ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಏಳು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಭಟ್ಕಳದ ಬೆಳಕೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ವಿ.ಆರ್.ಎಲ್. ಸಂಸ್ಥೆಗೆ ಸೇರಿದ ವೋಲ್ವೊ ಬಸ್ ಮತ್ತು ಲಾರಿ ನಡುವೆ ಈ ಅಪಘಾತ ಸಂಭವಿಸಿದೆ. ಬೆಳಗಾವಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಬೆಳಕೆ ಬಳಿ ತಲುಪಿದಾಗ ಎದುರಿನಿಂದ ಬಂದ ಲಾರಿ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಬಸ್ ಚಾಲಕ ಗಂಭೀರ ಗಾಯಗೊಂಡಿದ್ದಾನೆ. ಹಾಗೂ ಉಳಿದ ಪ್ರಯಾಣಿಕರು ಗಾಯಾಳುಗಳಾಗಿದ್ದು, ಅವರನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Next Story