ಉತ್ತರ ಪ್ರದೇಶ: ಮಹಿಳೆಯನ್ನು ಅತ್ಯಾಚಾರಗೈದು ರಸ್ತೆ ಬದಿ ಎಸೆದು ಹೋದ ಕಿರಾತಕರು
ಆದಿತ್ಯನಾಥ್ ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ

ಉತ್ತರ ಪ್ರದೇಶ, ಜೂ.7: ಚಲಿಸುತ್ತಿದ್ದ ವಾಹನವೊಂದರಲ್ಲಿ ಮಹಿಳೆಯೋರ್ವ ಮೇಲೆ ಅತ್ಯಾಚಾರಗೈದ ಮೂವರು ಅರೆಪ್ರಜ್ಞಾವಸ್ಥೆಯಲ್ಲಿದ್ದ ಆಕೆಯನ್ನು ರಸ್ತೆ ಬದಿ ಎಸೆದುಹೋದ ಘಟನೆ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿದ್ದು, ದುಷ್ಕರ್ಮಿಗಳು ಮಹಿಳೆಯನ್ನು ರಸ್ತೆ ಬದಿ ಎಸೆದು ಪರಾರಿಯಾಗಿದ್ದಾರೆ.
ಅರೆಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆ ಕಷ್ಟಪಟ್ಟು ಪೊಲೀಸ್ ಠಾಣೆಗೆ ತೆರಳಿ ಘಟನೆಯ ಬಗ್ಗೆ ವಿವರಿಸಿದ್ದಾಳೆ. ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆಗಾಗಿ ಕಳುಹಿಸಲಾಗಿದೆ. ಘಟನೆಗೆ ಸಂಬಂಧಿಸಿ ಮೂವರು ಅಪರಿಚಿತರ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ.
Next Story





