Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಂಆರ್‌ಪಿಎಲ್ ವಿಸ್ತರಣೆಯ ಭೂಸ್ವಾಧೀನಕ್ಕೆ...

ಎಂಆರ್‌ಪಿಎಲ್ ವಿಸ್ತರಣೆಯ ಭೂಸ್ವಾಧೀನಕ್ಕೆ ಹಳೆ ಕಾನೂನು ಬಳಕೆ: ಮುಖ್ಯಮಂತ್ರಿಗೆ ಹೋರಾಟಗಾರ್ತಿ ವಿದ್ಯಾದಿನಕರ್ ದೂರು

ವಾರ್ತಾಭಾರತಿವಾರ್ತಾಭಾರತಿ7 Jun 2017 8:39 PM IST
share
ಎಂಆರ್‌ಪಿಎಲ್ ವಿಸ್ತರಣೆಯ ಭೂಸ್ವಾಧೀನಕ್ಕೆ ಹಳೆ ಕಾನೂನು ಬಳಕೆ: ಮುಖ್ಯಮಂತ್ರಿಗೆ ಹೋರಾಟಗಾರ್ತಿ ವಿದ್ಯಾದಿನಕರ್ ದೂರು

ಮಂಗಳೂರು, ಜೂ.7: ಕೆಐಎಡಿಬಿಯು ಹಳೇ ಕಾನೂನನ್ನು ಬಳಕೆ ಮಾಡಿಕೊಂಡು ಎಂಆರ್‌ಪಿಎಲ್ ವಿಸ್ತರಣೆಗಾಗಿ ರೈತರ ಕೃಷಿ ಭೂಮಿಯನ್ನು ಭೂಸ್ವಾಧೀನ ಮಾಡುತ್ತಿದೆ ಎಂದು ಮಂಗಳೂರು ವಿಶೇಷ ಆರ್ಥಿಕ ವಲಯ ವಿರೋಧಿ ಹೋರಾಟಗಾರ್ತಿ ವಿದ್ಯಾ ದಿನಕರ್ ಮುಖ್ಯಮಂತ್ರಿಗೆ ದೂರು ನೀಡಿದ್ದಾರೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ವಿದ್ಯಾ ದಿನಕರ್ ನೇತೃತ್ವದ ನಿಯೋಗ, ಹಳೇ ಕಾನೂನನ್ನು ಬಳಕೆ ಮಾಡಿಕೊಂಡು ಭೂಸ್ವಾಧೀನ ಮಾಡಬಾರದು ಎಂದು ಈಗಾಗಲೇ ಹೈಕೋರ್ಟ್ ಆದೇಶ ನೀಡಿದೆ. ಯುಪಿಎ ಸರಕಾರ 2013 ರಲ್ಲಿ ಹೊಸ ಭೂಸ್ವಾಧೀನ ಕಾಯ್ದೆಯನ್ನು ಜಾರಿಗೆ ತಂದಿದ್ದರೂ ರಾಜ್ಯ ಸರಕಾರದ ಕೆಐಎಡಿಬಿ ಹಳೇ ಕಾನೂನಿನಂತೆಯೇ ಭೂಸ್ವಾಧೀನಕ್ಕೆ ನೋಟಿ್ ನೀಡಿದೆ ಎಂದು ದೂರು ನೀಡಿದರು.

ಎಂಆರ್‌ಪಿಎಲ್ ವಿಸ್ತರಣೆಗಾಗಿ ಕೆಐಎಡಿಬಿ ಕುತ್ತೆತ್ತೂರು ಮತ್ತು ಪೆರ್ಮುದೆ ಗ್ರಾಮಗಳಲ್ಲಿ 850 ಎಕರೆ ಭೂಮಿ ಸ್ವಾಧೀನ ಮಾಡಲು ನಿರ್ಧರಿಸಿದೆ. ಆದರೆ ಎಂಆರ್‌ಪಿಎಲ್ ಆವರಣಕ್ಕೆ ಹೊಂದಿಕೊಂಡಿರುವ ತೋಕೂರು ಗ್ರಾಮದಲ್ಲಿ ಜೆಸ್ಕೋಗಾಗಿ ವಶಪಡಿಸಿಕೊಂಡಿರುವ 900 ಎಕರೆ ಹಲವು ವರ್ಷಗಳಿಂದ ಖಾಲಿ ಬಿದ್ದಿದೆ. ಜೆಸ್ಕೋ ಅಥವಾ ಯಾವುದೇ ಕೈಗಾರಿಕೆಗಳು ಬಳಕೆ ಮಾಡದ ಈ ಭೂಮಿಯನ್ನು ಎಂಆರ್‌ಪಿಎಲ್ ವಿಸ್ತರಣೆಗೆ ಬಳಸುವ ಅವಕಾಶವಿದ್ದರೂ ರೈತರಿಂದ ವಿನಾಕಾರಣ ಭೂಮಿ ಕಿತ್ತುಕೊಳ್ಳುವ ಯತ್ನ ನಡೆಸಲಾಗುತ್ತಿದೆ. ಇದೇ ವೇಳೆ ಮಂಗಳೂರು ವಿಶೇಷ ಆರ್ಥಿಕ ವಲಯ ರೈತರಿಂದ ವಶಪಡಿಸಿಕೊಂಡಿರುವ ಜಮೀನಿನಲ್ಲಿ ಸುಮಾರು 750 ಎಕರೆಯಷ್ಟು ಜಾಗ ಇನ್ನೂ ಕೈಗಾರಿಕೆಗಳ ಸ್ಥಾಪನೆಯಾಗದೆ ಖಾಲಿ ಬಿದ್ದಿದೆ. ಆದರೂ ಕೆಐಎಡಿಬಿ ರಿಯಲ್ ಎಸ್ಟೇಟ್ ಮಾದರಿಯಲ್ಲಿ ಭೂಮಿ ವಶಪಡಿಸಿಕೊಳ್ಳುವ ಉದ್ದೇಶವೇನು ? ಎಂದು ವಿದ್ಯಾ ದಿನಕರ್ ಮುಖ್ಯಮಂತ್ರಿಯನ್ನು ಪ್ರಶ್ನಿಸಿದರು.

ಜಿಲ್ಲಾಧಿಕಾರಿ ವರದಿಯನ್ನೇ ನೀಡಿಲ್ಲ !
ಈ ಹಿಂದೆ ವಿದ್ಯಾದಿನಕರ್ ನೇತೃತ್ವದಲ್ಲಿ ರೈತರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಅನಗತ್ಯ ಭೂಸ್ವಾಧೀನದ ಬಗ್ಗೆ ದೂರು ನೀಡಿತ್ತು. ನಿನ್ನೆ ಅದನ್ನು ನೆನಪಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೈಗಾರಿಕೆಗಾಗಿ ರೈತರ ಕೃಷಿ ಭೂಮಿಯನ್ನು ವಶಪಡಿಸಿಕೊಂಡು ಬಳಕೆ ಮಾಡಿದೆ ಉಳಿಸಿಕೊಂಡಿರುವ ಭೂಮಿ ಬಗ್ಗೆ ವರದಿ ನೀಡಲು ಜಿಲ್ಲಾಧಿಕಾರಿಗೆ ಜನವರಿಯಲ್ಲಿ ಸೂಚಿಸಿದ್ದೆ. ಆದರೆ ಈವರೆಗೂ ಜಿಲ್ಲಾಧಿಕಾರಿ ವರದಿ ನೀಡಿಲ್ಲ. ಮುಖ್ಯ ಕಾರ್ಯದರ್ಶಿ ಕಚೇರಿಯಿಂದ ಈ ಬಗ್ಗೆ ಸ್ಪಷ್ಟನೆ ಕೇಳುತ್ತೇನೆ. ತಕ್ಷಣ ವರದಿ ತರಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಕೆಐಎಡಿಬಿ ಹಳೇ ಕಾಯ್ದೆಯನ್ನೇ ಭೂಸ್ವಾಧೀನಕ್ಕೆ ಬಳಸುತ್ತಿರುವುದರ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿಯೂ ಮುಖ್ಯಮಂತ್ರಿ ಭರವಸೆ ನೀಡಿದರು.

ನಿಯೋಗದಲ್ಲಿ ಕೃಷಿ ಭೂಮಿ ಸಂರಕ್ಷಣಾ ಸಮಿತಿ ಲಾರೆನ್ಸ್ ಡಿಕುನ್ಹ, ರಾಮಚಂದ್ರ ಭಟ್, ಧೀರಜ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X