ಅರ್ಜಿ ಆಹ್ವಾನ
ಉಡುಪಿ, ಜೂ.7: ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ಸಮುದಾಯದ ಸಂಸ್ಥೆಗಳ ವತಿಯಿಂದ ನಡೆಸಲಾಗುವ ಅನಾಥಾಶ್ರಮ/ವೃದ್ಧಾಶ್ರಮಗಳಿಗೆ/ಹೆಚ್‌ಐವಿ-ಏಡ್ಸ್/ವಿಕಲಚೇತನ ಆಶ್ರಮಧಾಮಗಳಿಗೆ 2017-18ನೇ ಸಾಲಿನಿಂದ ಸಹಾಯಾನುಧಾನ ಮಂಜೂರು ಮಾಡುವ ಬಗ್ಗೆ ಆದೇಶ ಹೊರಡಿಸಲಾಗಿದೆ.
ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಅಲ್ಪಸಂಖ್ಯಾತ ಸಮುದಾಯದ ಸಂಸ್ಥೆ, ಅರ್ಜಿ ನಮೂನೆಯನ್ನು ಪಡೆದು ಎಲ್ಲಾ ದಾಖಲೆಗಳೊಂದಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬಿ 304 ಬ್ಲಾಕ್ ರಜತಾದ್ರಿ ಮಣಿಪಾಲ ಉಡುಪಿ ಜಿಲ್ಲೆ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0820-2574881ನ್ನು ಸಂಪರ್ಕಿಸುವಂತೆ ಇಲಾಖೆ ಪ್ರಕಟಣೆ ತಿಳಿಸಿದೆ.
Next Story





