ಆನೆಗಳ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟ ಕುಟುಂಬಕ್ಕೆ 5 ಲಕ್ಷ ಪರಿಹಾರ: ರಮಾನಾಥ್ ರೈ,
.jpg)
ಬೆಂಗಳೂರು, ಜೂ.7: ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಆನೆಗಳ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದರೆ ಆ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ಹಾಗೂ ಗಾಯಗೊಂಡವರಿಗೆ 2.5 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ಅರಣ್ಯ ಸಚಿವ ರಮಾನಾಥ್ ರೈ ಹೇಳಿದ್ದಾರೆ.
ಬುಧವಾರ ವಿಧಾನ ಪರಿಷತ್‌ನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಚೌಡರೆಡ್ಡಿ ತೂಪಲ್ಲಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಹಾಸನ ಜಿಲ್ಲೆಯ ಅರಣ್ಯ ಪ್ರದೇಶದ ಸುತ್ತಮುತ್ತ ಆನೆಗಳ ಹಾವಳಿ ಹೆಚ್ಚಾಗಿದ್ದಾಗ 22 ಕಾಡಾನೆಗಳನ್ನು ಹಿಡಿದು ಪಳಗಿಸಲಾಗಿತ್ತು. ಹಾಗೂ ಆನೆಗಳ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದವರಿಗೆ ಹಾಗೂ ಗಾಯಗೊಂಡವರಿಗೆ ಪರಿಹಾರ ನೀಡಲಾಗುತ್ತಿದೆ ಎಂದು ಹೇಳಿದರು.
Next Story





