ಹಾಕಿ ಕ್ರೀಡಾಂಗಣಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರು: ಪ್ರಮೋದ್ ಮಧ್ವರಾಜ್
ಬೆಂಗಳೂರು, ಜೂ.7: ಬೆಂಗಳೂರು ಹಾಕಿ ಕ್ರೀಡಾಂಗಣಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಬುಧವಾರ ವಿಧಾನ ಪರಿಷತ್‌ನ ಪ್ರಶ್ನೋತ್ತರ ವೇಳೆಯಲ್ಲಿ ಆಡಳಿತ ಪಕ್ಷದ ಸದಸ್ಯೆ ವೀಣಾ ಅಚ್ಚಯ್ಯ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಕೊಡುಗು ಜಿಲ್ಲೆಯಲ್ಲಿರುವ ಹಾಕಿ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸಿ ತರಬೇತಿಗೊಳಿಸಿ ಅವರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳುವಂತೆ ಮಾಡಲು ಸರಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ.
Next Story