ಶಿವಮೊಗ್ಗ: ಹಾಡಹಗಲೇ ಮಹಿಳೆಯ ಹತ್ಯೆ
ಶಿವಮೊಗ್ಗ, ಜೂ. 7: ಮನೆಯಲ್ಲಿದ್ದ ಒಂಟಿ ಮಹಿಳೆ ಯನ್ನು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಾಲೂರು ಗ್ರಾಮದಲ್ಲಿ ಹಾಡಹಗಲೇ ನಡೆದಿದ್ದು, ಈ ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿ ಬಿ.ಎಸ್.ಯಡಿಯೂರಪ್ಪ ಬೀಳುವಂತೆ ಮಾಡಿದೆ. ಕೊಲೆಗೀಡಾದ ಮಹಿಳೆಯನ್ನು ಜಯಶೀಲಮ್ಮ(45) ಎಂದು ಗುರುತಿಸಲಾಗಿದೆ.
ಗ್ರಾಮದ ಮುಖ್ಯ ರಸ್ತೆಯಲ್ಲಿಯೇ ಇವರ ಮನೆಯಿದ್ದು, ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಈ ವೇಳೆ ಜಯಶೀಲಮ್ಮ ಹೊರತುಪಡಿಸಿ ಮನೆಯಲ್ಲಿ ಯಾರೂ ಇರಲಿಲ್ಲವೆಂದು ಹೇಳಲಾಗಿದೆ. ಹಳೇಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆಸಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಇಷ್ಟರಲ್ಲಿಯೇ ಆರೋಪಿಯನ್ನು ಬಂಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





