ಸಹರಾನ್ಪುರದಲ್ಲಿ ಇಂಟರ್ನೆಟ್ ಸೇವೆಗೆ ನಿಷೇಧ ಹೇರಿದ ಉತ್ತರ ಪ್ರದೇಶ ಸರಕಾರ
ಸಹರನ್ಪುರ ಗಲಭೆ ಪ್ರಕರಣ: ಭೀಮ್ ಸೇನಾ ಸ್ಥಾಪಕ ಚಂದ್ರಶೇಖರ್ ಬಂಧನ

ಉತ್ತರಪ್ರದೇಶ, ಜೂ.8: ಭೀಮ್ ಆರ್ಮಿ ಸ್ಥಾಪಕ ಚಂದ್ರಶೇಖರ್ ರನ್ನು ಬಂಧಿಸಿದ ನಂತರದ ಬೆಳವಣಿಗೆಯಲ್ಲಿ ಸಹರಾನ್ಪುರ ಜಿಲ್ಲೆಯಲ್ಲಿ 2 ದಿನಗಳ ಕಾಲ ಇಂಟರ್ನೆಟ್ ಸೇವೆಗೆ ನಿಷೇಧ ಹೇರಲಾಗಿದೆ.
ಚಂದ್ರಶೇಖರ್ ಬಂಧನದ ನಂತರ ವಾಟ್ಸ್ಯಾಪ್ ಹಾಗೂ ಫೇಸ್ಬುಕ್ ನಲ್ಲಿ ಹರಿದಾಡುತ್ತಿರುವ ಸಂದೇಶಗಳನ್ನು ನಿಯಂತ್ರಿಸಲು ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಬಂಧನದ ವಿರುದ್ಧ ಒಗ್ಗಟ್ಟಾಗುವಂತೆ ಸಂದೇಶಗಳು ಹರಿದಾಡುತ್ತಿದ್ದವು. ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ನಿರಂತರ ಸಂಪರ್ಕದಲ್ಲಿರಲು ಭೀಮ್ ಆರ್ಮಿ ಸಾಮಾಜಿಕ ಜಾಲತಾಣಗಳನ್ನು ಬಳಸುತ್ತಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಮೋದ್ ಕುಮಾರ್ ಪಾಂಡೆ ಹೇಳಿದ್ದಾರೆ.
ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ರಕ್ಷಣಾ ಪಡೆ ಸಿಬ್ಬಂದಿಯನ್ನು ಹೆಚ್ಚಿಸಲಾಗಿದೆ.
Next Story





