Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಷ್ಣಮಾರುತ: ಭಾರತಕ್ಕೆ ಕಾದಿದೆ ಅಪಾಯ...

ಉಷ್ಣಮಾರುತ: ಭಾರತಕ್ಕೆ ಕಾದಿದೆ ಅಪಾಯ ಅಮೆರಿಕನ್ ವಿಜ್ಞಾನಿಗಳ ಎಚ್ಚರಿಕೆ

ಪ್ರತಿ ವರ್ಷ ಬಿಸಿಗಾಳಿಗೆ ಬಲಿಯಾಗುವವರ ಸಂಖ್ಯೆಯಲ್ಲಿ ಭಾರೀ ಏರಿಕೆ

ವಾರ್ತಾಭಾರತಿವಾರ್ತಾಭಾರತಿ8 Jun 2017 8:35 PM IST
share
ಉಷ್ಣಮಾರುತ: ಭಾರತಕ್ಕೆ ಕಾದಿದೆ ಅಪಾಯ ಅಮೆರಿಕನ್ ವಿಜ್ಞಾನಿಗಳ ಎಚ್ಚರಿಕೆ

  ಲಂಡನ್,ಜೂ.8: ಭಾರತದಲ್ಲಿ ಕಡುಬೇಸಿಗೆಯಲ್ಲಿ ಬಿಸಿಗಾಳಿಯ ಪ್ರಕೋಪಕ್ಕೆ ಬಲಿಯಾಗುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದು, ಮುಂದೆ ಇನ್ನಷ್ಟು ಅಪಾಯ ಕಾದಿರುವ ಮುನ್ಸೂಚನೆಯಾಗಿದೆಯೆಂದು ಅಮೆರಿಕದ ವಿಜ್ಞಾನಿಗಳು ಬುಧವಾರ ಎಚ್ಚರಿಕೆ ನೀಡಿದ್ದಾರೆ.

ಕಳೆದ 50 ವರ್ಷಗಳಲ್ಲಿ ಭಾರತದ ಸರಾಸರಿ ತಾಪಮಾನದಲ್ಲಿ 0.5ರಷ್ಟು ಏರಿಕೆಯಾಗಿದ್ದರಿಂದ, ಉಷ್ಣಮಾರುತದ ತಾಪಮಾನದಲ್ಲಿ ಶೇ.150ರಷ್ಟು ಹೆಚ್ಚಳವಾಗಿದ್ದು, ಇದರಿಂದ ಪ್ರತಿವರ್ಷ 100ಕ್ಕೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದಾರೆಂದು ಇರ್ವಿನ್‌ನಲ್ಲಿರುವ ಕ್ಯಾಲಿಫೋರ್ನಿಯಾ ವಿವಿಯ ಸಂಶೋಧಕರು ತಿಳಿಸಿದ್ದಾರೆ.

   ಈ ಶತಮಾನದ ಅಂತ್ಯದೊಳಗೆ ಭಾರತದ ತಾಪಮಾನದಲ್ಲಿ 2.2ರಿಂದ 5.5 ಡಿಗ್ರಿಯವರೆಗೆ ಏರಿಕೆಯಾಗಲಿದ್ದು, ಇದರಿಂದಾಗಿ ಭಾರತ ಸೇರಿದಂತೆ ಏಶ್ಯದ ಇತರ ರಾಷ್ಟ್ರಗಳಲ್ಲಿ ಉಷ್ಣಮಾರುತಕ್ಕೆ ಬಲಿಯಾಗುವವರ ಸಂಖ್ಯೆಯಲ್ಲೂ ಭಾರೀ ಹೆಚ್ಚಳವಾಗಲಿದೆಯೆಂದು ವಿಜ್ಞಾನಿಗಳು ಭವಿಷ್ಯ ನುಡಿದಿದ್ದಾರೆ.

‘‘ತಾಪಮಾನದಲ್ಲಾಗುವ ಸಾಧಾರಣ ಏರಿಕೆಯಿಂದಾಗಿ ಸಂಭವಿಸುವ ಸಾಮೂಹಿಕ ಸಾವಿನ ಸನ್ನಿವೇಶಗಳಲ್ಲಿ ಭಾರೀ ಹೆಚ್ಚಳವಾಗುವ ಸಾಧ್ಯತೆಯನ್ನು ಅರಿತು ನಾನು ದಿಗ್ಭ್ರಾಂತಗೊಂಡಿದ್ದೇನೆ’’ ಎಂದು ಕ್ಯಾಲಿಫೋರ್ನಿಯಾ ವಿವಿಯ ಭೂ ವಿಜ್ಞಾನ ವಿಭಾಗದ ವರಿಷ್ಠ ಸ್ಟೀವನ್ ಜೆ.ಡೇವಿಸ್ ಅವರು ‘ಸಯನ್ಸ್ ಅಡ್ವಾನ್ಸಸ್’ ಪತ್ರಿಕೆಯಲ್ಲಿ ಪ್ರಕಟಿಸಿದ ವರದಿಯೊಂದರಲ್ಲಿ ತಿಳಿಸಿದ್ದಾರೆ.

   ತಾಪಮಾನದಲ್ಲಿ ಸಣ್ಣ ಮಟ್ಟದ ಏರಿಕೆಯಾದರೂ, ಉಷ್ಣಮಾರುತದಿಂದ ಸಾವನ್ನಪ್ಪುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಲಿದೆಯೆಂದು, ಜೆ.ಡೇವಿಸ್ ಅವರು ಥಾಮ್ಸನ್ ರಾಯ್ಟರ್ಸ್‌ ಪ್ರತಿಷ್ಠಾನಕ್ಕೆ ದೂರವಾಣಿ ಮೂಲಕ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

   ‘‘ಈ ಶತಮಾನದ ಅಂತ್ಯದೊಳಗೆ ಜಗತ್ತಿನಾದ್ಯಂತ ತಾಪಮಾನ ಏರಿಕೆಯಾಗಲಿದೆಯಾದರೂ, ಭಾರತ ಉಪಖಂಡ, ಮಧ್ಯಪ್ರಾಚ್ಯ,ಆಫ್ರಿಕ ಹಾಗೂ ದಕ್ಷಿಣ ಅಮೆರಿಕದ ರಾಷ್ಟ್ರಗಳಲ್ಲಿ ಬೇಸಿಗೆಯ ತಿಂಗಳುಗಳಲ್ಲಿ ವಾಸಿಸುವುದೇ ದುಸ್ತರವಾಗಲಿದೆ’’ ಎಂದವರು ಹೇಳಿದ್ದಾರೆ. ಭಾರತದಲ್ಲಿ 1960 ಹಾಗೂ 2009ರ ನಡುವೆ ಉಷ್ಣಮಾರುತದಿಂದ ಸಂಭವಿಸಿದ ಸಾವಿನ ಪ್ರಕರಣಗಳ ಕಬಿಸಿಗಾಳಿಗೆ ಕುರಿತ ದತ್ತಾಂಶಗಳನ್ನು ಆಧರಿಸಿ ಈ ಅಧ್ಯಯನವನ್ನು ನಡೆಸಲಾಗಿದೆ.

   ಭಾರತದಲ್ಲಿ 2009ರಲ್ಲಿ 1300 ಮಂದಿ ಬಲಿಯಾದರೆ, 2010ರಲ್ಲಿ 1300, 2013ರಲ್ಲಿ 1500 ಹಾಗೂ 2015ರಲ್ಲಿ 2500 ಮಂದಿ ಅಸುನೀಗಿದ್ದಾರೆ. ಸಾಮಾನ್ಯವಾಗಿ ಗ್ರಾಮೀಣ ಪ್ರದೇಶದಲ್ಲಿ ಉಷ್ಣಮಾರುತದಿಂದ ಸಂಭವಿಸುವ ಅನೇಕ ಸಾವಿನ ಪ್ರಕರಣಗಳನ್ನು ದಾಖಲಿಸದೆ ಇರುವ ಸಾಧ್ಯತೆಯಿದೆ. ಹೀಗಾಗಿ ಭಾರತದಲ್ಲಿ ಬಿಸಿಗಾಳಿಗೆ ಬಲಿಯಾಗುವ ನೈಜ ಸಂಖ್ಯೆ ಇನ್ನೂ ಅಧಿಕವಿರಬಹುದೆಂದು ಸಂಶೋಧಕರು ಶಂಕಿಸಿದ್ದಾರೆ.

 ಉಷ್ಣಮಾರುತದಿಂದ ವಿಶೇಷವಾಗಿ ಬಡಜನರೇ ಅತ್ಯಧಿಕವಾಗಿ ಬಾಧಿತರಾಗುತ್ತಾರೆಂದು ಅಮೆರಿಕದ ವಿಜ್ಞಾನಿಗಳು ಗಮನಸೆಳೆಯಜುತ್ದಾರೆ. ಬಿಸಿಗಾಳಿಯಿಂದಾಗಿ ಶುದ್ಧವಾದ ನೀರು ಹಾಗೂ ಆಶ್ರಯವನ್ನು ಪಡೆಯಲು ಬಡವರು ಪರದಾಡುವಂತಹ ಪರಿಸ್ಥಿತಿಯುಂಟಾಗುವುದೇ ಇದಕ್ಕೆ ಕಾರಣವೆಂದವರು ಹೇಳುತ್ತಾರೆ.

ಇತ್ತೀಚೆಗೆ ಒಡಿಶಾ ಹಾಗೂ ಗುಜರಾತ್ ರಾಜ್ಯಗಳಲ್ಲಿ ಇತ್ತೀಚೆಗೆ ಬೀಸಿದ ಬಿಸಿಗಾಳಿಗೆ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X