ಡಾ.ಜಿ.ಪರಮೇಶ್ವರ್- ರಮಾನಾಥ ರೈ ಭೇಟಿ

ಮಂಗಳೂರು, ಜೂ.8: ಕೆಪಿಸಿಸಿ ಅಧ್ಯಕ್ಷರಾಗಿ ಮರು ಆಯ್ಕೆಗೊಂಡಿರುವ ಗೃಹ ಸಚಿವ ಡಾ,ಜಿ. ಪರಮೇಶ್ವರ್ ಅವರನ್ನು ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಗುರುವಾರ ಬೆಂಗಳೂರಿನಲ್ಲಿ ಭೇಟಿ ಮಾಡಿದರು.
ರಾಜ್ಯ ಸರಕಾರದ ವಿವಿಧ ಯೋಜನೆಗಳು ದ.ಕ. ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿರುವ ಬಗ್ಗೆ ಡಾ.ಜಿ. ಪರಮೇಶ್ವರ್ ಅವರು ಅರಣ್ಯ ಸಚಿವರನ್ನು ಶ್ಲಾಘಿಸಿದರು. ದ.ಕ. ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಇನ್ನಷ್ಟು ಬಲಪಡಿಸುವ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದರು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಸಾಮಾನ್ಯರಿಗೆ ರಾಜ್ಯ ಸರಕಾರದ ನೆರವು, ಕಾರ್ಯಕ್ರಮಗಳ ಜಾಗೃತಿ ಮೂಡಿಸಿ, ಜನಸಾಮಾನ್ಯರು ಜನಪರ ಸರಕಾರದ ಮೇಲಿನ ವಿಶ್ವಾಸವನ್ನು ಭದ್ರಪಡಿಸಲಾಗುವುದು ಎಂದು ಸಚಿವ ರಮಾನಾಥ ರೈ ತಿಳಿಸಿದರು.
Next Story





