Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಜೆಎಂ ಬೆಂಬಲಿಗರಿಂದ ಪೊಲೀಸರಿಗೆ ಹಲ್ಲೆ,...

ಜಿಜೆಎಂ ಬೆಂಬಲಿಗರಿಂದ ಪೊಲೀಸರಿಗೆ ಹಲ್ಲೆ, ಸೇನೆಗೆ ಬುಲಾವ್ ಕಳುಹಿಸಿದ ಮಮತಾ ಬ್ಯಾನರ್ಜಿ

ವಾರ್ತಾಭಾರತಿವಾರ್ತಾಭಾರತಿ8 Jun 2017 10:15 PM IST
share
ಜಿಜೆಎಂ ಬೆಂಬಲಿಗರಿಂದ ಪೊಲೀಸರಿಗೆ ಹಲ್ಲೆ, ಸೇನೆಗೆ ಬುಲಾವ್ ಕಳುಹಿಸಿದ ಮಮತಾ ಬ್ಯಾನರ್ಜಿ

ಕೋಲ್ಕತಾ,ಜೂ.8: ಗುರುವಾರ ದಾರ್ಜಿಲಿಂಗ್‌ನಲ್ಲಿ ಕಲ್ಲುತೂರಾಟ ಮತ್ತು ಸಾರ್ವಜನಿಕ ಆಸ್ತಿಗಳಿಗೆ ಬೆಂಕಿ ಹಚ್ಚುವುದರಲ್ಲಿ ತೊಡಗಿದ್ದ ಗೋರ್ಖಾ ಜನಮುಕ್ತಿ ಮೋರ್ಚಾ(ಜಿಜೆಎಂ)ದ ಸಾವಿರಾರು ಬೆಂಬಲಿಗರನ್ನು ನಿಯಂತ್ರಿಸಲು ಪೊಲೀಸರು ವಿಫಲರಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರಕಾರವು ಸೇನೆಯ ನೆರವನ್ನು ಕೋರಿದೆ.

2011,ಮಾರ್ಚ್‌ನಲ್ಲಿ ಮಮತಾ ಬ್ಯಾನರ್ಜಿಯವರು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯನ್ನು ನಿಭಾಯಿಸಲು ಸೇನೆಗೆ ಬುಲಾವ್ ನೀಡಲಾಗಿದೆ. ರಾಜ್ಯ ಸರಕಾರವು ಈ ಹಿಂದೆ 2010ರಲ್ಲಿ ಉತ್ತರ 24 ಪರಗಣಗಳ ಜಿಲ್ಲೆಯ ದೇಗಂಗಾದಲಿ ಹಿಂಸಾಚಾರ ಭುಗಿಲ್ಲೆದ್ದಾಗ ಸೇನೆಯ ನೆರವನ್ನು ಕೋರಿತ್ತು.

ರಾಜ್ಯದ ಶಾಲೆಗಳಲ್ಲಿ ಹತ್ತನೇ ತರಗತಿಯವರೆಗೆ ಬಂಗಾಳಿ ಕಲಿಕೆ ಕಡ್ಡಾಯವಾಗಿರುತ್ತದೆ ಎಂದು ಮಮತಾ ಕಳೆದ ವಾರ ಪ್ರಕಟಿಸಿದ್ದು,ಇದು ಜಿಜೆಎಂ ಪ್ರತಿಭಟನೆಗೆ ಕಾರಣ ವಾಗಿದೆ.

ಘರ್ಷಣೆಗಳಲ್ಲಿ ಹಲವಾರು ಜನರು ಗಾಯಗೊಂಡಿದ್ದಾರಾದರೂ ಖಚಿತ ಸಂಖ್ಯೆ ತಕ್ಷಣಕ್ಕೆ ತಿಳಿದುಬಂದಿಲ್ಲ. ಕಲ್ಲುಗಳಿಂದ ಸಜ್ಜಿತರಾಗಿದ್ದ ಜಿಜೆಎಂ ಬೆಂಬಲಿಗರನ್ನು ಚದುರಿಸಲು ಪೊಲೀಸರು ಲಾಠಿಪ್ರಹಾರವನ್ನೂ ನಡೆಸಿದ್ದರು.

ಕಳೆದ 45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದಾರ್ಜಿಲಿಂಗ್‌ನ ರಾಜಭವನದಲ್ಲಿ ಮಮತಾ ಬ್ಯಾನರ್ಜಿಯವರ ಅಧ್ಯಕ್ಷತೆಯಲ್ಲಿ ರಾಜ್ಯ ಸಂಪುಟ ಸಭೆ ನಡೆದಿದ್ದ ಸಂದರ್ಭ ಈ ಘರ್ಷಣೆಗಳು ಸಂಭವಿಸಿವೆ. ಘೋಷಣೆಗಳನ್ನು ಕೂಗುತ್ತಿದ್ದ ಸಾವಿರಾರು ಜಿಜೆಎಂ ಬೆಂಬಲಿಗರು ರಾಜಭವನದ ಬಳಿ ಜಮಾಯಿಸಿದ್ದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ಮಮತಾ ಹೊರಗೆ ಬಂದಾಗ ಅವರ ಪ್ರತಿಕೃತಿಯನ್ನು ದಹಿಸಲು ಪ್ರಯತ್ನಿಸಿದ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲುತೂರಾಟ ಆರಂಭಿಸಿದರು.

ಜನರನ್ನು ಚದುರಿಸಲು ಪೊಲೀಸರು ನಡೆಸಿದ ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ನಿರೀಕ್ಷಿತ ಪರಿಣಾಮವನ್ನು ಬೀರಲಿಲ್ಲ. ಪ್ರತಿಭಟನಾಕಾರರು ನಾಲ್ಕು ಪೊಲೀಸ್ ವಾಹನಗಳು ಮತ್ತು ಒಂದು ಸಾರ್ವಜನಿಕ ಸಾರಿಗೆ ಬಸ್‌ಗೆ ಬೆಂಕಿ ಹಚ್ಚಿದರು. ಘರ್ಷಣೆಗಳು ನಡೆಯುವಾಗ ಮಮತಾ ಕೇವಲ 500 ಮೀ.ಅಂತರದಲ್ಲಿದ್ದರು.

52 ಪೊಲೀಸರಿಗೆ ಗಾಯಗಳಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೆಚ್ಚುವರಿ ಡಿಜಿಪಿ ಎನ್. ಆರ್.ಬಾಬು ತಿಳಿಸಿದರು. ಮುಂದಿನ ಸೂಚನೆಯವರೆಗೆ ಪ್ರಸಾರವನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಡಳಿತವು ಸ್ಥಳೀಯ ಟಿವಿ ವಾಹಿನಿಗಳಿಗೆ ಸೂಚಿಸಿದೆ.
ಜಿಜೆಎಂ ಪ್ರದೇಶದಲ್ಲಿ ಶುಕ್ರವಾರ 12 ಗಂಟೆಗಳ ಬಂದ್‌ಗೆ ಕರೆ ನೀಡಿದೆ. ನಂತರ ಸುದ್ದಿಗೋಷ್ಠಿಯಲ್ಲಿ ಜಿಜೆಎಂ ಅಧ್ಯಕ್ಷ ಬಿಮಲ್ ಗುರುಂಗ್ ಮುಂದಿನ ಹೆಜ್ಜೆಯನ್ನು ಪ್ರಕಟಿಸುವ ನಿರೀಕ್ಷೆಯಿದೆ.

ಜಿಜೆಎಂ ಪ್ರತಿಭಟನೆಗೆ ಅನಗತ್ಯ ಗಮನ ನೀಡುವುದು ಬೇಡ, ಅದರಿಂದ ವಿವಾದವೇ ಅಲ್ಲದೆ ವಿಷಯ ವಿವಾದವಾಗುತ್ತದೆ ಎಂದು ಮಮತಾ ಸಂಪುಟ ಸಭೆಯಲ್ಲಿ ತನ್ನ ಸಹೋದ್ಯೋಗಿಗಳಿಗೆ ಸೂಚಿಸಿದ್ದಾರೆ.
 ಜಿಜೆಎಂ ದಾರ್ಜಿಲಿಂಗ್ ಪ್ರದೇಶದಲ್ಲಿ ತೊಂದರೆಗಳನ್ನು ಸೃಷ್ಟಿಸಲು ಯತ್ನಿಸುತ್ತಿದೆ ಎಂದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X