ಹಾವು ಕಚ್ಚಿ ಮಹಿಳೆ ಮೃತ್ಯು
ಮದ್ದೂರು, ಜೂ.8: ಹಾವು ಕಚ್ಚಿ ಅಸ್ವಸ್ಥಗೊಂಡಿದ್ದ ತಾಲೂಕಿನ ಚಾಕನಕೆರೆ ಗ್ರಾಮದ ಮಹಿಳೆ ವಿಜಯಮ್ಮ(42) ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.
ಮಂಗಳವಾರ ಜಮೀನು ಬಳಿ ಹಾವು ಕಡಿದು ಅಸ್ವಸ್ಥಗೊಂಡಿದ್ದ ವಿಜಯಮ್ಮನನ್ನು ಜಿಲ್ಲಾಸ್ಪತ್ರೆಗೆ ಸೇರಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Next Story





