ಮಟ್ಕಾ: ಇಬ್ಬರ ಬಂಧನ
ಚಿಕ್ಕಮಗಳೂರು, ಜೂ.8: ಮಟ್ಕಾ ಹೆಸರಿನ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ತರೀಕೆರೆ ಪೊಲೀಸರು ಗುರುವಾರ ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿಗಳನ್ನು ದೇವರಾಜ್ ಮತ್ತು ಅಪ್ರೋಝ್ ಎಂದು ಗುರುತಿಸಲಾಗಿದೆ. ಆರೋಪಿಗಳು ತರೀಕೆರೆ ಪಟ್ಟಣದ ಖಾಸಗಿ ಬಸ್‌ನಿಲ್ದಾಣದ ಬಳಿ ಮಟ್ಕಾ ಆಡಲು ಸಾರ್ವಜನಿಕರನ್ನು ಪ್ರೇರೇಪಿಸುತ್ತಿದ್ದರು.
ಈ ವೇಳೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ 1,810 ರೂ.ನಗದು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story





