ಇಂದು ಬಾಲ್ಯ ವಿವಾಹ ಜಾಗೃತಿ ಆಂದೋಲನ
ಉಡುಪಿ, ಜೂ.8: ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಉಡುಪಿ ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬಾಲ್ಯ ವಿವಾಹ ಜಾಗೃತಿ ಹಾಗೂ ‘ಶಾಲೆ ಕಡೆ ನನ್ನ ನಡೆ’ ಕುರಿತ ಜಾಗೃತಿ ಆಂದೋಲನ ಕಾರ್ಯಕ್ರಮ ಜೂ.9ರಂದು ಬೆಳಗ್ಗೆ 9:30ಕ್ಕೆ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಇದಕ್ಕೂ ಮೊದಲು ಬಾಲ್ಯ ವಿವಾಹ ಜಾಗೃತಿ ಮತ್ತು ಶಾಲೆ ಕಡೆ ನನ್ನ ನಡೆ ಕುರಿತು ಜಾಗೃತಿ ಆಂದೋಲನ ಜಾಥಾ ನಡೆಯಲಿದ್ದು, ಜಾಥಾವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ ಉದ್ಘಾಟಿಸುವರು. ಸಭಾ ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರದಾನ ನ್ಯಾಯಿಕ ದಂಡಾಧಿಕಾರಿ ಇರ್ಫಾನ್ ಉದ್ಘಾಟಿಸುವರು. ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಬಿ. ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.
Next Story





