Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿಯಮ ಉಲ್ಲಂಘಿಸುವ ಶಾಲಾ ವಾಹನಗಳ ವಿರುದ್ಧ...

ನಿಯಮ ಉಲ್ಲಂಘಿಸುವ ಶಾಲಾ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಿ

ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 Jun 2017 5:47 PM IST
share
ನಿಯಮ ಉಲ್ಲಂಘಿಸುವ ಶಾಲಾ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಿ

ಮಂಗಳೂರು, ಜೂ. 9: ಶಾಲಾ ವಾಹನಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಹೋಗುವ ಮೂಲಕ ಮೋಟಾರು ವಾಹನ ಕಾಯಿದೆಯ ನಿಯಮಗಳನ್ನು ಉಲ್ಲಂಘಿಸಲಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಿ ಎಂಬ ಆಗ್ರಹ ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಬ್ಬರಿಂದ ವ್ಯಕ್ತವಾಯಿತು.

ಶುಕ್ರವಾರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕಮಿಷನರ್ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಬ್ಬರು, ಬೆಳಗ್ಗೆ ಮತ್ತು ಸಂಜೆ ನಗರದಲ್ಲಿ ಚಲಿಸುವ ಶಾಲಾ ವಾಹನಗಳಲ್ಲಿ ವಿದ್ಯಾರ್ಥಿಗಳು, ಸ್ಕೂಲ್ ಬ್ಯಾಗ್‌ಗಳು ತುಂಬಿ ತುಳುಕುತ್ತವೆ. ಅವಘಡದ ಬಳಿಕ ಎಚ್ಚೆತ್ತುಕೊಳ್ಳುವುದಕ್ಕಿಂತ, ಮುಂಚೇ ಕ್ರಮಕೈಗೊಳ್ಳಿ ಎಂದು ಒತ್ತಾಯಿಸಿದರು.

ನಗರದ ಕೆಲವು ಸಿಟಿ ಬಸ್ ಮತ್ತು ಅಂಗಡಿಗಳಲ್ಲಿ 10 ರೂ. ನಾಣ್ಯಗಳನ್ನು ತೆಗೆದುಕೊಳ್ಳಲು ನಿರಾಕರಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಮಿಷನರ್, ಈ ಬಗ್ಗೆ ಕೂಡಲೇ ಬಸ್ಸಿನ ನಂಬರ್ ಮತ್ತು ಅಂಗಡಿಗಳ ಮಾಹಿತಿಯನ್ನು ಪೊಲೀಸರಿಗೆ ತಿಳಿಸುವಂತೆ ಸೂಚನೆ ನೀಡಿದರು.

ಅಸಮರ್ಪಕ ಪಾರ್ಕಿಂಗ್

ಕಂಕನಾಡಿಯಿಂದ ಜೆಪ್ಪು ಸೆಮಿನರಿವರೆಗೆ ರಸ್ತೆಯ ಇಕ್ಕೆಲಗಳಲ್ಲಿ, ಟೆಲಿಕಾಂ ರಸ್ತೆಯ ಇಕ್ಕೆಲ, ಶರಬತ್‌ಕಟ್ಟೆಯಿಂದ ಪದವಿನಂಗಡಿವರೆಗೆ ರಸ್ತೆಗಳಲ್ಲಿ, ಯೆಯ್ಯೆಡಿ-ಪದವಿನಂಗಡಿ ರಸ್ತೆಯಲ್ಲಿ ಅಸಮರ್ಪಕ ವಾಹನ ಪಾರ್ಕಿಂಗ್ ಮಾಡಲಾಗುತ್ತಿದೆ ಎಂಬ ದೂರು ಕಾರ್ಯಕ್ರಮದಲ್ಲಿ ವ್ಯಕ್ತವಾಯಿತು.

ಬಸ್ ಅಸೋಸಿಯೇಶನ್‌ಗೆ ಪದಾಧಿಕಾರಿ ಹಾಜರಿಗೆ ಸೂಚನೆ

ಪ್ರತಿ ವಾರದ ಫೋನ್-ಇನ್ ಕಾರ್ಯಕ್ರಮದಲ್ಲಿ ಶೇ.80ಕ್ಕೂ ಅಧಿಕ ಸಮಸ್ಯೆಗಳು ಟ್ರಾಫಿಕ್ ಸಂಬಂಧಿಸಿದ್ದಾಗಿರುತ್ತವೆ. ಇದನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಮುಂದಿನ ಫೋನ್-ಇನ್ ಕಾರ್ಯಕ್ರಮದಲ್ಲಿ ಬಸ್ ಅಸೋಸಿಯೇಶನ್ ಪದಾಧಿಕಾರಿಗಳನ್ನು ಕರೆಯುವಂತೆ ಕಮಿಷನರ್ ಚಂದ್ರಶೇಖರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹಾಕಾಳಿ ಪಡ್ಪು ಬಳಿ ಟ್ರಾಫಿಕ್ ವಾರ್ಡನ್ ನೇಮಕಕ್ಕೆ ಒತ್ತಾಯ

ಮಹಾಕಾಳಿ ಪಡ್ಪು ರೈಲ್ವೇ ಕ್ರಾಸ್ ಬಳಿ ವಾಹನ ಸವಾರರು ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಇದರಿಂದ ಸಾಕಷ್ಟು ವಾಹನ ದಟ್ಟನೆಯಿಂದಾಗಿ ಈ ಪ್ರದೇಶದಲ್ಲಿ ಸಮಸ್ಯೆಯಾಗುತ್ತಿದೆ. ಇಲ್ಲಿ ಟ್ರಾಫಿಕ್ ವಾರ್ಡ್ ನೇಮಿಸಿದಲ್ಲಿ ಅವಘಡಗಳನ್ನು ತಡೆಗಟ್ಟಲು ಸಾಧ್ಯವಿದೆ.

ಸುರತ್ಕಲ್ ಜಂಕ್ಷನ್ ಬಸ್‌ಸ್ಟಾಪ್ ಸಣ್ಣದಾಗಿದ್ದು, ಮಳೆಗೆ ಸೋರುತ್ತಿದೆ. ರಸ್ತೆ ಬದಿಯಲ್ಲಿ ನಿರುಪಯುಕ್ತ ಬ್ಯಾರಿಕೇಡ್‌ಗಳಿದ್ದು, ಅದನ್ನು ಕೂಡಲೇ ತೆರವುಗೊಳಿಸಬೇಕು. ಜಪ್ಪಿನ ಮೊಗರು ದ್ವಾರದ ಬಳಿ ಹೈವೇಯಲ್ಲಿ ವಿಪರೀತ ವಾಹನ ದಟ್ಟಣೆಯಿದ್ದು, ಸಂಚಾರಿ ಪೊಲೀಸರ ನೇಮಕವಾಗಬೇಕು. ಗಣಪತಿ ಹೈಸ್ಕೂಲ್ ರಸ್ತೆಯಲ್ಲಿ ಶಾಲಾ ಮಕ್ಕಳಿಗೆ ರಸ್ತೆ ದಾಟಲು ತೊಂದರೆಯಾಗುತ್ತಿದ್ದು, ಹಂಪ್ಸ್ ನಿರ್ಮಿಸಬೇಕಾಗಿದೆ. ಪಂಪುವೆಲ್‌ನಿಂದ ಪಡೀಲ್ ತನಕ ಚತುಷ್ಪಥ ರಸ್ತೆ ನಿರ್ಮಿಸಿ ಸುಗಮ ಸಂಚಾರಕ್ಕೆ ಅನುವುಮಾಡಬೇಕು ಮೊದಲಾದ ಹಲವಾರು ಆಗ್ರಹಗಳು ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ವ್ಯಕ್ತವಾದವು.

ಫೋನ್ ಇನ್ ಕಾರ್ಯಕ್ರಮದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಶಾಂತರಾಜು, ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಹನುಮಂತರಾಯ, ಸಂಚಾರ ವಿಭಾಗದ ಎಸಿಪಿ ತಿಲಕ್‌ಚಂದ್ರ, ಇನ್‌ಸ್ಪೆಕ್ಟರ್ ರಫೀಕ್, ಎಎಸ್‌ಐ ಯುಸೂಫ್, ಎಚ್‌ಸಿ ಪುರುಷೋತ್ತಮ್ ಉಪಸ್ಥಿತರಿದ್ದರು.

ಕಡಲ ಅವಘಡಕ್ಕೆ ಹೆಲಿಕಾಪ್ಟರ್ ಒದಗಿಸಲು ಪೊಲೀಸರಿಗೆ ಆಗ್ರಹ!
ಪ್ರಮುಖ ವಾಣಿಜ್ಯ ನಗರವಾಗಿ ಗುರುತಿಸಿಕೊಂಡಿರುವ ಮಂಗಳೂರಿನ ಕರಾವಳಿ ತೀರ ಪ್ರದೇಶದಲ್ಲಿ ಕಡಲಿನಲ್ಲಿ ಆಗಾಗ್ಗೆ ಸಮಸ್ಯೆಗಳು ಉದ್ಭುವಿಸುತ್ತಿವೆ. ಇಲ್ಲಿ ತುರ್ತು ಕಾರ್ಯಾಚರಣೆಗೆ ಹೆಲಿಕಾಪ್ಟರ್ ಅಗತ್ಯವಾಗಿದ್ದು, ಅದನ್ನು ಒದಗಿಸಬೇಕು ಎಂಬ ಆಗ್ರಹ ಸಾರ್ವಜನಿಕರೊಬ್ಬರಿಂದ ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ವ್ಯಕ್ತವಾಯಿತು.
ಬಾರ್ಜ್, ನೌಕೆ, ಮೀನುಗಾರಿಕೆ ದೋಣಿಗಳು ಅವಘಡ ನಡೆಯುವ ಸಂದರ್ಭ ಅಥವಾ ಇನ್ಯಾವುದೇ ಅವಘಡ ಸಂದರ್ಭ ಹೆಲಿಕಾಪ್ಟರ್ ಮೂಲಕ ತುರ್ತು ಕಾರ್ಯಾಚರಣೆ ನಡೆಸಲು ಸಾಧ್ಯವಿದೆ ಎಂಬುದು ಕರೆ ಮಾಡಿದ ಸಾರ್ವಜನಿಕರ ಅಭಿಪ್ರಾಯವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X